ಶಿವಮೊಗ್ಗ: ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆಯ (VISL) ಗುತ್ತಿಗೆ ಕಾರ್ಮಿಕರ ಸಂಘದ ಪದಾಧಿಕಾರಿಗಳ ನಿಯೋಗ ಪೇಜಾವರ ಮಠದ ವಿಶ್ವತೀರ್ಥ ಪ್ರಸನ್ನ ಸ್ವಾಮೀಜಿಯನ್ನು ಭೇಟಿಯಾಗಿ ಆಶೀರ್ವಾದ ಪಡೆದರು.
ಗುತ್ತಿಗೆ ಕಾರ್ಮಿಕರ ಸಂಘದ ಅಧ್ಯಕ್ಷ ಸುರೇಶ್, ಉಪಾಧ್ಯಕ್ಷ ಮಂಜುನಾಥ್, ಪ್ರಧಾನ ಕಾರ್ಯದರ್ಶಿ ರಾಕೇಶ್, ಕಾರ್ಯದರ್ಶಿ ಮಂಜುನಾಥ್, ಖಜಾಂಚಿ ಆನಂದ್, ನಿವೃತ್ತ ಕಾರ್ಮಿಕ ನರಸಿಂಹಾಚಾರ್ ಸೇರಿದಂತೆ ಹಲವರು ಶ್ರೀಗಳನ್ನು ಭೇಟಿಯಾಗಿ ಕಾರ್ಖಾನೆಯ ಪರಿಸ್ಥಿತಿ ವಿವರಿಸಿದರು.
ಇದನ್ನೂ ಓದಿ » ಭದ್ರಾವತಿ VISLಗೆ ಕೇಂದ್ರ ಸರ್ಕಾರದ ಅಧಿಕಾರಿಗಳ ನಿಯೋಗ, ಎಲ್ಲೆಲ್ಲಿ ಭೇಟಿ ನೀಡಿದರು? ಯಾರನ್ನೆಲ್ಲ ಭೇಟಿಯಾದರು?
ವಿಐಎಸ್‌ಎಲ್ ಕಾರ್ಖಾನೆಯ ಗುತ್ತಿಗೆ ಕಾರ್ಮಿಕರ ಸಮಸ್ಯೆಗಳು ಬಗೆಹರಿಯಲಿವೆ. ಕಾರ್ಖಾನೆಗೆ ದೊಡ್ಡ ಇತಿಹಾಸವಿದೆ. ನಾಲ್ವಡಿ ಕೃಷ್ಣರಾಜ ಒಡೆಯರ್ ಮತ್ತು ಭಾರತ ರತ್ನ ಸರ್.ಎಂ.ವಿಶ್ವೇಶ್ವರಯ್ಯ ಅವರ ಪರಿಶ್ರಮದಿಂದ ಸ್ಥಾಪನೆಗೊಂಡ ಕಾರ್ಖಾನೆ ಯಾವುದೇ ಕಾರಣಕ್ಕೂ ಮುಚ್ಚುವುದಿಲ್ಲ ಎಂಬ ವಿಶ್ವಾಸವಿದೆ ಎಂದು ವಿಶ್ವತೀರ್ಥ ಪ್ರಸನ್ನ ಸ್ವಾಮೀಜಿ ತಿಳಿಸಿದರು.

ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200