ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
ಶಿವಮೊಗ್ಗ ಲೈವ್.ಕಾಂ | SHIVAMOGGA LIVE NEWS | 15 ಡಿಸೆಂಬರ್ 2021
ಮತ್ತಷ್ಟು ಸುದ್ದಿ ಕೆಳಗಿದೆ ಸುಲಭ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ ಮೊಬೈಲ್ ನಂಬರ್ : 9972194422
ತೀವ್ರ ಕುತೂಹಲ ಮೂಡಿಸಿರುವ ಒಕ್ಕಲಿಗ ಸಂಘದ ರಾಜ್ಯ ನಿರ್ದೇಶಕ ಸ್ಥಾನದ ಚುನಾವಣೆಯ ಮತ ಎಣಿಕೆ ಕಾರ್ಯ ಆರಂಭವಾಗಿದೆ. ಮತ ಎಣಿಕೆ ಕೇಂದ್ರದ ಬಳಿ ಸ್ಪರ್ಧಿಗಳ ಅಭಿಮಾನಿಗಳು ಜಮಾಯಿಸಿದ್ದು ಫಲಿತಾಂಶದತ್ತ ಕುತೂಹಲದ ಕಣ್ಣಿಟ್ಟಿದ್ದಾರೆ.
» ವಾಟ್ಸಪ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
» ಫೇಸ್ಬುಕ್ ಮೆಸೆಂಜರ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
ಶಿವಮೊಗ್ಗದ ಕುವೆಂಪು ರಸ್ತೆಯಲ್ಲಿರುವ ಆರ್ಯವೈಶ್ಯ ಸಹಕಾರ ಸಂಘದ ಆವರಣದಲ್ಲಿ ಮತ ಎಣಿಕೆ ಕಾರ್ಯ ನಡೆಯುತ್ತಿದೆ.
ಮೊದಲ ಸುತ್ತಿನ ಎಣಿಕೆ
ಶಿವಮೊಗ್ಗ – ಉತ್ತರ ಕನ್ನಡ ಜಿಲ್ಲೆಗಳ ಒಂದು ನಿರ್ದೇಶಕ ಸ್ಥಾನಕ್ಕೆ ಚುನಾವಣೆ ನಡೆದಿತ್ತು. ಒಂಭತ್ತು ಅಭ್ಯರ್ಥಿಗಳು ಸ್ಪರ್ಧಿಸಿದ್ದಾರೆ. ಇವತ್ತು ಬೆಳಗ್ಗೆ 9 ಗಂಟೆಯಿಂದ ಮತ ಎಣಿಕೆ ಕಾರ್ಯ ಆರಂಭವಾಗಿದೆ. ಮೊದಲ ಸುತ್ತಿನ ಎಣಿಕೆ ನಡೆಯುತ್ತಿದೆ.
ಮತಗಟ್ಟೆ ಬಳಿ ಬೆಂಬಲಿಗರು
ಮತ ಎಣಿಕೆ ಕಾರ್ಯ ನಡೆಯುತ್ತಿರುವ ಹಿನ್ನೆಲೆ ಅಭ್ಯರ್ಥಿಗಳ ಬೆಂಬಲಿಗರು ಮತ ಎಣಿಕೆ ಕೇಂದ್ರದ ಮುಂದೆ ಜಮಾಯಿಸಿದ್ದಾರೆ. ಇನ್ನು, ಮತ ಎಣಿಕೆ ಕೇಂದ್ರದ ಸುತ್ತಲು ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಾಗಿದೆ.