ಶಿವಮೊಗ್ಗ ಬಸ್‌ ನಿಲ್ದಾಣದ ಮುಂಭಾಗ ಅಭಿಯಾನದ ಪೋಸ್ಟರ್‌ಗೆ ಮಿನಿಸ್ಟರ್‌ ಸಹಿ, ಬಿಜೆಪಿ ವಿರುದ್ಧ ಕಿಡಿ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ: ಮತಗಳವು ಆರೋಪದ ಹಿನ್ನೆಲೆ ಬಿಜೆಪಿ ವಿರುದ್ಧ ಜಿಲ್ಲಾ ಕಾಂಗ್ರೆಸ್ ಆಯೋಜಿಸಿದ್ದ ‍ವೋಟ್ ಚೋರ್ (Vote Chor) ಗದ್ದಿ ಚೋಡ್ (ಮತಗಳ್ಳರೇ ಗದ್ದುಗೆ ಬಿಡಿ) ಅಭಿಯಾನಕ್ಕೆ ಶಿವಮೊಗ್ಗದ ಖಾಸಗಿ ಬಸ್ ನಿಲ್ದಾಣದ ಎದುರು ಬೃಹತ್ ಬ್ಯಾನರ್‌ಗೆ ಸಹಿ ಹಾಕುವ ಮೂಲಕ ಸಚಿವ ಮಧು ಬಂಗಾರಪ್ಪ ಚಾಲನೆ ನೀಡಿದರು.

ಮಿನಿಸ್ಟರ್‌ ಏನೆಲ್ಲ ಹೇಳಿದರು? ಇಲ್ಲಿದೆ ಪಾಯಿಂಟ್ಸ್‌

Point 1 F1F1F1ಇಡೀ ಭಾರತವನ್ನು ಒಗ್ಗೂಡಿಸಲು ಎಐಸಿಸಿ ನಾಯಕ ರಾಹುಲ್‌ಗಾಂಧಿ ಕಾಶ್ಮೀರದಿಂದ ಕನ್ಯಾಕುಮಾರಿವರೆಗೆ ಪಾದಯಾತ್ರೆ ಮಾಡಿದ್ದರು. ಈಗ ಮತಗಳ್ಳತನದ ವಿರುದ್ಧ ಅಭಿಯಾನ ಆರಂಭಿಸಿದ್ದಾರೆ.

Point 2 F1F1F1ಮತಗಳ್ಳತನದ ಮೂಲಕ ಅಧಿಕಾರಕ್ಕೆ ಬಂದು ಪ್ರಜಾಪ್ರಭುತ್ವದ ಕೊಲೆ ಮಾಡಿರುವ ಕೇಂದ್ರದ ಬಿಜೆಪಿ ಸರ್ಕಾರದ ವಿರುದ್ಧ ಜಿಲ್ಲೆಯ ಎಲ್ಲ ತಾಲ್ಲೂಕುಗಳಲ್ಲೂ ಸಾರ್ವಜನಿಕರಲ್ಲಿ ಕಾಂಗ್ರೆಸ್ ಅರಿವು ಮೂಡಿಸಲಿದೆ.

Minister-Madhu-Bangarappa-at-a-Protest-in-Shimoga-city.

Point 3 F1F1F1ಕಾಂಗ್ರೆಸ್ ಯಾವತ್ತೂ ಜನಸಾಮಾನ್ಯರ ಪಕ್ಷವಾಗಿದ್ದು, ಪ್ರಜಾಪ್ರಭುತ್ವ ಉಳಿಸುವ ಕೆಲಸ ಮಾಡುತ್ತಾ ಬಂದಿದೆ. ಆದರೆ ಬಿಜೆಪಿ ಜಾತಿ, ಧರ್ಮಗಳ ಹೆಸರಲ್ಲಿ ದೇಶವನ್ನು ಒಡೆಯುತ್ತಿದೆ.

ಇದನ್ನೂ ಓದಿ » ಮೈಸೂರು – ಶಿವಮೊಗ್ಗ ಎಕ್ಸ್‌ಪ್ರೆಸ್‌ ರೈಲು ಎರಡು ದಿನ 100 ನಿಮಿಷ ತಡ, ಕಾರಣವೇನು?

ಲೋಕಸಭಾ ಚುನಾವಣೆ ವೇಳೆ ಮಹಾದೇವಪುರ ಕ್ಷೇತ್ರವೊಂದರಲ್ಲೇ 1 ಲಕ್ಷ ಮತಗಳು ಮಾಯವಾಗಿದೆ. ವಿಧಾನಸಭೆ ಚುನಾವಣೆ ಸಂದರ್ಭ ಆಳಂದ ಕ್ಷೇತ್ರದಲ್ಲಿ ಆರು ಸಾವಿರ ಮತಗಳು ಕಾಣೆಯಾಗಿದೆ. ಇವೆಲ್ಲವೂ ಬಿಜೆಪಿಯವರ ಮತಗಳ್ಳತನಕ್ಕೆ ಸ್ಪಷ್ಟ ಸಾಕ್ಷಿ.

  • ಮಂಜುನಾಥ ಭಂಡಾರಿ, ವಿಧಾನಪರಿಷತ್ ಸದಸ್ಯ

RED-LINE-

ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷ ಆರ್.ಪ್ರಸನ್ನಕುಮಾರ್, ವಿಧಾನಪರಿಷತ್ ಸದಸ್ಯೆ ಬಲ್ಕಿಶ್ ಬಾನು, ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಶ್ವೇತಾ ಬಂಡಿ, ಮಾಜಿ ಸಂಸದ ಆಯನೂರು ಮಂಜುನಾಥ್, ಮಾಜಿ ಶಾಸಕ ಎಚ್‌.ಎಂ.ಚಂದ್ರಶೇಖರಪ್ಪ, ಸುಡಾ ಅಧ್ಯಕ್ಷ ಎಚ್.ಎಸ್.ಸುಂದರೇಶ ಸೇರಿ ಹಲವರು ಇದ್ದರು.

Vote Chor Campaign in Shimoga

Vote Chor Campaign in Shimoga

Vote Chor Campaign in Shimoga

Vote Chor campaign in Shimoga city

JNNCE-Admission-Advt-scaled

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment