ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
ಶಿವಮೊಗ್ಗ ಲೈವ್.ಕಾಂ | SHIMOGA | 10 ಜನವರಿ 2020
18 ವರ್ಷ ಪೂರ್ಣಗೊಂಡ ಯುವ ಮತದಾರರಿಗೆ ಮಿಂಚಿನ ನೋಂದಣಿ ಕಾರ್ಯಕ್ರಮ ಆರಂಭವಾಗಿದೆ. ಈ ಹಿನ್ನೆಲೆಯಲ್ಲಿ ಶಿವಮೊಗ್ಗದಲ್ಲಿ ಜಾಗೃತಿ ಜಾಥ ನಡೆಸಲಾಯಿತು.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ರಾಜ್ಯ ಚುನಾವಣಾ ಆಯೋಗ, ಜಿಲ್ಲಾ ಚುನಾವಣಾ ಆಡಳಿತ, ಪದವಿ ಪೂರ್ವ ಶಿಕ್ಷಣ ಇಲಾಖೆ ಹಾಗೂ ಕಸ್ತೂರಬಾ ಬಾಲಿಕಾ ಪದವಿ ಪೂರ್ವ ಕಾಲೇಜಿನ ಸಹಯೋಗದಲ್ಲಿ, ಇವತ್ತು ಜಾಗೃತಿ ಜಾಥಾ ನಡೆಸಲಾಯಿತು.
ಕಸ್ತೂರಬಾ ಕಾಲೇಜಿನಿಂದ ಆರಂಭಗೊಂಡ ಜಾಥಾ ನಗರದ ಪ್ರಮುಖ ರಸ್ತೆಗಳಲ್ಲಿ ಸಂಚರಿಸಿ, ಕಾಲೇಜಿನ ಬಳಿ ಕೊನೆಗೊಂಡಿತು.
ಇದಕ್ಕೂ ಮುನ್ನ ನಗರದ ಗೋಪಿ ಸರ್ಕಲ್’ನಲ್ಲಿ ಮಾನವ ಸರಪಳಿ ರಚಿಸಿ, ಯುವ ಮತದಾರರಿಗೆ ಮೊದಲು ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರು ನೋಂದಾಯಿಸಿಕೊಳ್ಳಲು ಮತದಾರರ ಪ್ರತಿಜ್ಞಾ ವಿಧಿ ಭೋಧಿಸಲಾಯಿತು. ತಹಶೀಲ್ದಾರ್ ಗಿರೀಶ್ ಅವರು ಪ್ರತಿಜ್ಞಾವಿಧಿ ಬೋಧಿಸಿದರು.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | [email protected]