ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS |6 JANUARY 2023
SHIMOGA : ಜಿಲ್ಲೆಯ ಮತದಾರರ ಪಟ್ಟಿಯನ್ನು (voters list) ಪರಿಷ್ಕರಣೆಗೊಳಿಸಲಾಗಿದ್ದು, ಅಂತಿಮ ಮತದಾರರ ಪಟ್ಟಿ ಪ್ರಕಟಿಸಲಾಗಿದೆ. ಇದರಲ್ಲಿ 7,27,310 ಮಹಿಳಾ ಮತದಾರರು ಹಾಗೂ 7,14,490 ಪುರುಷ ಮತದಾರರು ಸೇರಿ ಒಟ್ಟು 14,41,833 ಅರ್ಹ ಮತದಾರರು ಇದ್ದಾರೆ ಎಂದು ಜಿಲ್ಲಾಧಿಕಾರಿ ಆರ್.ಸೆಲ್ವಮಣಿ ಅವರು ತಿಳಿಸಿದರು.
ಜಿಲ್ಲಾಧಿಕಾರಿ ಕಚೇರಿಯಲ್ಲಿ ವಿವಿಧ ರಾಜಕೀಯ ಪಕ್ಷಗಳ ಪ್ರತಿನಿಧಿಗಳ ಸಮ್ಮುಖದಲ್ಲಿ 2023ರ ಅಂತಿಮ ಮತದಾರರ ಪಟ್ಟಿಯನ್ನು (voters list) ಬಿಡುಗಡೆಗೊಳಿಸಿ ಮಾತನಾಡಿದರು.
ಸಾವಿರ ಪುರುಷಕರಿಗೆ 1018 ಮಹಿಳಾ ಮತದಾರರು
ಅಂತಿಮ ಮತದಾರರ ಪಟ್ಟಿಯಲ್ಲಿ (voters list) ಮತದಾರರ ಲಿಂಗಾನುಪಾತ ಉತ್ತಮಗೊಂಡಿದ್ದು, 1ಸಾವಿರ ಪುರುಷ ಮತದಾರರಿಗೆ 1018 ಮಹಿಳಾ ಮತದಾರರು ಇದ್ದಾರೆ. ಮತದಾರರ ಪಟ್ಟಿಯಲ್ಲಿ ಹೊಸದಾಗಿ 22,185 ಯುವ ಮತದಾರರ ಸೇರ್ಪಡೆಯಾಗಿದ್ದಾರೆ. ಇವರಲ್ಲಿ 11,760 ಪುರುಷ ಹಾಗೂ 10,419 ಮಹಿಳಾ ಮತದಾರರು ಇದ್ದಾರೆ. ಜಿಲ್ಲೆಯಲ್ಲಿ ಪ್ರಸ್ತುತ 1,775 ಮತಗಟ್ಟೆಗಳು ಇವೆ ಎಂದು ಅವರು ಹೇಳಿದರು.
ವಿಧಾನಸಭಾ ಕ್ಷೇತ್ರವಾರು ವಿವರ
ಮತದಾರರ ಅಂತಿಮ ಪಟ್ಟಿಯಲ್ಲಿ ಶಿವಮೊಗ್ಗ ಗ್ರಾಮಾಂತರದಲ್ಲಿ 1,03,534 ಪುರುಷ, 1,04,525 ಮಹಿಳಾ, ಮೂವರು ತೃತೀಯ ಲಿಂಗಿ ಸೇರಿದಂತೆ ಒಟ್ಟು 2,08,062 ಮತದಾರರು ಇದ್ದಾರೆ.
ಭದ್ರಾವತಿ ಕ್ಷೇತ್ರದಲ್ಲಿ 1,01,058 ಪುರುಷ, 1,06,546 ಮಹಿಳಾ, ಐವರು ತೃತೀಯ ಲಿಂಗಿ ಸೇರಿದಂತೆ ಒಟ್ಟು 1,06,546 ಮತದಾರರು ಇದ್ದಾರೆ.
ಶಿವಮೊಗ್ಗ ನಗರ ಕ್ಷೇತ್ರದಲ್ಲಿ 1,23,770 ಪುರುಷ, 1,29,204 ಮಹಿಳಾ, 15 ತೃತೀಯ ಲಿಂಗಿ ಸೇರಿದಂತೆ 2,52,989 ಮತದಾರರು ಇದ್ದಾರೆ.
ತೀರ್ಥಹಳ್ಳಿ ಕ್ಷೇತ್ರದಲ್ಲಿ 91,376 ಪುರುಷ, 93,475 ಮಹಿಳಾ, ಮೂವರು ತೃತೀಯ ಲಿಂಗಿ ಸೇರಿದಂತೆ 1,84,854 ಮತದಾರರು ಇದ್ದಾರೆ.
ಶಿಕಾರಿಪುರ ಕ್ಷೇತ್ರದಲ್ಲಿ 98,281 ಪುರುಷ, 97,086 ಮಹಿಳಾ, ನಾಲ್ವರು ತೃತೀಯ ಲಿಂಗಿ ಸೇರಿದಂತೆ ಒಟ್ಟು 1,95,371 ಮತದಾರರು ಇದ್ದಾರೆ.
ಸೊರಬ ಕ್ಷೇತ್ರದಲ್ಲಿ 97,070 ಪುರುಷ, 1,01,326 ಮಹಿಳಾ, ಇಬ್ಬರು ತೃತೀಯ ಲಿಂಗಿ ಸೇರಿದಂತೆ ಒಟ್ಟು 1,92,220 ಮತದಾರರು ಇದ್ದಾರೆ.
ಸಾಗರ ಕ್ಷೇತ್ರದಲ್ಲಿ 99,401 ಪುರುಷ, 1,01,326 ಮಹಿಳಾ, ಒಂದು ತೃತೀಯ ಲಿಂಗಿ ಸೇರಿದಂತೆ ಒಟ್ಟು 2,00,728 ಮತದಾರರು ಇದ್ದಾರೆ.
ಲಿಂಗಾನುಪಾತ ಅತಿ ಹೆಚ್ಚು ಭದ್ರಾವತಿ ಕ್ಷೇತ್ರದಲ್ಲಿ 1054 ಇದ್ದು, ಅತಿ ಕಡಿಮೆ ಸೊರಬ ಕ್ಷೇತ್ರದಲ್ಲಿ 980 ಇದೆ ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ತಿಳಿಸಿದರು.
33 ಸಾವಿರ ಹೆಸರು ಕೈ ಬಿಡಲಾಗಿದೆ
ಕಳೆದ ನವೆಂಬರ್ 9ರಂದು ಪ್ರಕಟಿಸಲಾಗಿದ್ದ ಕರಡು ಮತದಾರರ ಪಟ್ಟಿಯಲ್ಲಿ ಒಟ್ಟು 14,34,138 ಮತದಾರರ ಹೆಸರು ಪ್ರಕಟಿಸಲಾಗಿತ್ತು. ಅಂತಿಮ ಪಟ್ಟಿಯಲ್ಲಿ 40,767 ಮತದಾರರನ್ನು ಹೊಸದಾಗಿ ಸೇರ್ಪಡೆಗೊಳಿಸಲಾಗಿದ್ದು, 33,072 ಮತದಾರರ ಹೆಸರು ಕೈ ಬಿಡಲಾಗಿದೆ. 11651 ತಿದ್ದುಪಡಿ ಮಾಡಲಾಗಿದೆ.
ಇದನ್ನೂ ಓದಿ – ಶಿವಮೊಗ್ಗದಲ್ಲಿ 31 ಜಿಲ್ಲಾ ಪಂಚಾಯಿತಿ ಕ್ಷೇತ್ರ ಪ್ರಕಟ, ಯಾವ್ಯಾವ ಊರು ಯಾವ ಕ್ಷೇತ್ರ ವ್ಯಾಪ್ತಿಗೆ ಒಳಪಟ್ಟಿದೆ? ಇಲ್ಲಿದೆ ಲಿಸ್ಟ್
ತೆಗೆದು ಹಾಕಿರುವುದಕ್ಕೆ 11,873 ಮರಣ, 17,064 ಸ್ಥಳಾಂತರ, 1,058 ಪುನರಾವರ್ತನೆ ಮತ್ತು 3,077 ವಲಸೆ ಕಾರಣವಾಗಿದೆ. ಕರಡು ಪಟ್ಟಿಯಲ್ಲಿ ಲಿಂಗಾನುಪಾತ 1 ಸಾವಿರ ಪುರುಷ ಮತದಾರರಿಗೆ 1014 ಮಹಿಳಾ ಮತದಾರರು ಇದ್ದರು ಎಂದು ಅವರು ಮಾಹಿತಿ ನೀಡಿದರು.
ಸೇರ್ಪಡೆಗೆ ಇನ್ನೂ ಇದೆ ಅವಕಾಶ
2023ರ ಸಾರ್ವತ್ರಿಕ ವಿಧಾನಸಭಾ ಚುನಾವಣಾ ಸಂಬಂಧದಲ್ಲಿ ಅರ್ಹ ಮತದಾರರು ಮತದಾರರ ಪಟ್ಟಿಗೆ ಚುನಾವಣಾ ಆಯೋಗ ನಿಗದಿಪಡಿಸುವ ದಿನಾಂಕದವರೆಗೂ ಹೆಸರು ಸೇರಿಸಲು ಅವಕಾಶವಿರುತ್ತದೆ. ನಮೂನೆ -6 ಸೇರ್ಪಡೆ, ನಮೂನೆ-6ಎ ಅನಿವಾಸಿ ಭಾರತೀಯರು ಹೆಸರು ನೊಂದಾಯಿಸಿಕೊಳ್ಳಲು, 6-ಬಿ ಮತದಾರರ ಪಟ್ಟಿಯೊಂದಿಗೆ ಆಧಾರ್ ಜೋಡಣೆ ಮಾಡಿಕೊಳ್ಳಲು, ನಮೂನೆ-7 ತೆಗೆದು ಹಾಕಲು, ನಮೂನೆ-8ರಲ್ಲಿ ತಿದ್ದುಪಡಿ, ವರ್ಗಾವಣೆ, ಬದಲಿ ಎಪಿಕ್‌ಗೆ ಮನವಿ ಮತ್ತು ಅಂಗವೈಕಲ್ಯ ಹೊಂದಿರುವ ಮತದಾರರು ವಿವರ ದಾಖಲಿಸಲು ಅವಕಾಶವಿದೆ ಎಂದು ಅಪರ ಜಿಲ್ಲಾಧಿಕಾರಿ ಡಾ.ನಾಗೇಂದ್ರ ಹೊನ್ನಳ್ಳಿ ತಿಳಿಸಿದರು.
ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರನ್ನು https://ceo.karnataka.gov.in ನಲ್ಲಿ ಲಭ್ಯವಿದ್ದು, ಮತದಾರರು ತಮ್ಮ ಹೆಸರನ್ನು ಖಚಿತಪಡಿಸಿಕೊಳ್ಳಬಹುದಾಗಿದೆ ಎಂದು ಹೇಳಿದರು. ವಿವಿಧ ರಾಜಕೀಯ ಪಕ್ಷಗಳ ಪ್ರತಿನಿಧಿಗಳು ಈ ಸಂದರ್ಭದಲ್ಲಿ ಹಾಜರಿದ್ದರು.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422