ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS, 6 JANUARY 2024
ಶಿವಮೊಗ್ಗ : ಶಿವಮೊಗ್ಗ ವಿಧಾನಸಭಾ ಕ್ಷೇತ್ರದ ಅರ್ಹ ಅಂತಿಮ ಮತದಾರರ ಪಟ್ಟಿಯನ್ನು (Voters) ಕೇಂದ್ರ ಚುನಾವಣಾ ಆಯೋಗದ ನಿರ್ದೇಶನದ ಅನುಸಾರ ಜನವರಿ 6ರಂದು ಪ್ರಕಟಿಸಲಾಗುತ್ತದೆ.
ಯಾವುದಾದರೂ ಒಂದು ಮತಗಟ್ಟೆಯಲ್ಲಿ ಹೆಸರು ನೋಂದಣಿ, ಕ್ಷೇತ್ರದ ಮತ್ತೊಂದು ಮತಗಟ್ಟೆಗೆ ವರ್ಗಾವಣೆ, ಮರಣ ಹಾಗೂ ಇನ್ನಿತರ ಕಾರಣಗಳಿಂದ ಮತದಾರರ ಪಟ್ಟಿಯಿಂದ ಹೆಸರು ತೆಗೆದುಹಾಕುವ ಬಗ್ಗೆ ಈ ಹಿಂದೆ ಸಲ್ಲಿಸಿದ ಅರ್ಜಿಗಳನ್ನು ಪರಿಶೀಲಿಸಿ, ಭಾವಚಿತ್ರ ಸಹಿತ ಮತದಾರರ ಪಟ್ಟಿಯನ್ನು ಶಿವಮೊಗ್ಗ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಆಯಾ ಮತಗಟ್ಟೆ ವ್ಯಾಪ್ತಿಯಲ್ಲಿ ಪ್ರಕಟಿಸಲಾಗುತ್ತದೆ.
ಮತದಾರರು ತಮ್ಮ ಹೆಸರುಗಳನ್ನು ಆಯಾ ಮತಗಟ್ಟೆ ವ್ಯಾಪ್ತಿಯ ಮತಗಟ್ಟೆ ಅಧಿಕಾರಿಗಳನ್ನು ಸಂಪರ್ಕಿಸಿ ಪರಿಶೀಲಿಸಿಕೊಳ್ಳಬೇಕು ಎಂದು ಕ್ಷೇತ್ರದ ಮತದಾರರ ನೋಂದಣಾಧಿಕಾರಿ ಹಾಗೂ ಮಹಾನಗರ ಪಾಲಿಕೆ ಆಯುಕ್ತರು ತಿಳಿಸಿದ್ದಾರೆ.
ಇದನ್ನೂ ಓದಿ » ಇಂದು ಮಧ್ಯರಾತ್ರಿಯಿಂದ KSRTC ಟಿಕೆಟ್ ದರ ಹೆಚ್ಚಳ, ಶಿವಮೊಗ್ಗದಿಂದ ಎಲ್ಲೆಲ್ಲಿಗೆ ಎಷ್ಟಾಗುತ್ತೆ ರೇಟ್?
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422