ಪ್ರತಿ ತಿಂಗಳು ಮೃತರ ಹೆಸರು ಮತದಾರರ ಪಟ್ಟಿಯಿಂದ ಔಟ್, ಪರಿಷ್ಕರಣೆ ಬಗ್ಗೆ ಶಿವಮೊಗ್ಗದಲ್ಲಿ ಮಹತ್ವದ ಮೀಟಿಂಗ್

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಈಗ ಬಟ್ಟೆ ಒಗೆಯೋದು ಬಹಳ ಸುಲಭ, ಹೇಗದು? | ವಿಡಿಯೋಗಾಗಿ ಕ್ಲಿಕ್ ಮಾಡಿ

131951794 1031215290691714 4061890617426774129 n.jpg? nc cat=108&ccb=2& nc sid=730e14& nc ohc=FkyaIRRMuUEAX9p7CwQ& nc ht=scontent.fblr11 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 13 JANUARY 2021

ಮೃತಪಟ್ಟವರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ತೆಗೆದು ಹಾಕಲು ಕ್ರಮ ಕೈಗೊಳ್ಳಬೇಕು ಎಂದು ಮತದಾರರ ಪಟ್ಟಿ ಪರಿಷ್ಕರಣೆ ಜಿಲ್ಲಾ ನೋಡಲ್ ಅಧಿಕಾರಿ ಉಜ್ವಲ್ ಕುಮಾರ್ ಘೋಷ್ ತಿಳಿಸಿದರು.

ಜಿಲ್ಲಾಧಿಕಾರಿ ಕಚೇರಿಯಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯದ ಪ್ರಗತಿ ಪರಿಶೀಲನೆ ನಡೆಸಿದ ಅವರು, ಜಿಲ್ಲೆಯಲ್ಲಿ ಮರಣ ಪ್ರಮಾಣ ಸಾವಿರಕ್ಕೆ ಸುಮಾರು ಶೇ.6ರಷ್ಟಿದ್ದು, ಪ್ರತಿ ತಿಂಗಳು ಮೃತರ ಹೆಸರನ್ನು ಮತದಾರರ ಪಟ್ಟಿಯಿಂದ ತೆಗೆದು ಹಾಕಬೇಕು. ಮರಣ ಪ್ರಮಾಣ ಇ-ಜನನ ಆಪ್‍ನಲ್ಲಿ ನೋಂದಣಿಯಾಗುತ್ತಿದ್ದು, ಅದರ ಆಧಾರದ ಮೇಲೆಯೂ ಹೆಸರನ್ನು ತೆಗೆದು ಹಾಕಬೇಕು ಎಂದು ಸೂಚನೆ ನೀಡಿದರು.

ಅಂಗನವಾಡಿ ಕಾರ್ಯಕರ್ತರಿಂದ ಮಾಹಿತಿ

ಜಿಲ್ಲೆಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಬಹುತೇಕ ಕಡೆ ಮತಗಟ್ಟೆ ಅಧಿಕಾರಿಗಳಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಅಂಗನವಾಡಿ ಕಾರ್ಯಕರ್ತೆಯರಿಗೆ ಸ್ಥಳೀಯವಾಗಿ ಹೆಚ್ಚಿನ ಮಾಹಿತಿ ಹಾಗೂ ಸಂಪರ್ಕ ಇರುವುದರಿಂದ ಮತದಾರರ ಪಟ್ಟಿಯನ್ನು ಹೆಚ್ಚು ಸಮರ್ಪಕವಾಗಿ ಪರಿಷ್ಕರಿಸಲು ಸಾಧ್ಯವಿದೆ. ಆದರೆ ಮಾಹಿತಿಯನ್ನು ಅಪ್‍ಲೋಡ್ ಮಾಡುವ ಕುರಿತು ತಾಂತ್ರಿಕವಾಗಿ ಅವರು ಪರಿಣಿತಿಯನ್ನು ಸಾಧಿಸಬೇಕು ಎಂದು ಅವರು ಅಭಿಪ್ರಾಯ ವ್ಯಕ್ತಪಡಿಸಿದರು.

ಏನೆಲ್ಲ ಸೂಚನೆ ನೀಡಲಾಯಿತು?

ಸಂಘಟಿತ ಮಾತ್ರವಲ್ಲದೆ ಅಸಂಘಟಿತ ವಲಯದಲ್ಲಿರುವ ಕಾರ್ಮಿಕರನ್ನು ಗುರುತಿಸಿ ಮತದಾರರ ಪಟ್ಟಿಯಲ್ಲಿ ಹೆಸರು ನೋಂದಾಯಿಸಲು ಕ್ರಮ ಕೈಗೊಳ್ಳಬೇಕು.

ಜಿಲ್ಲೆಯಲ್ಲಿ ಮಹಿಳೆಯರ ಅನುಪಾತ ಹೆಚ್ಚಿದ್ದು, ಅವರನ್ನು ಮತದಾರರ ಪಟ್ಟಿಯಲ್ಲಿ ಸೇರಿಸುವ ಕುರಿತು ವಿಶೇಷ ಗಮನ ಹರಿಸಬೇಕು.

ಇದೀಗ ಕಾಲೇಜುಗಳು ಕ್ರಮೇಣ ಆರಂಭವಾಗುತ್ತಿದ್ದು, ಹೊಸ ಮತದಾರರ ಸೇರ್ಪಡೆಗೆ ಎಲ್ಲಾ ಕಾಲೇಜುಗಳಲ್ಲಿ ವ್ಯವಸ್ಥೆ ಮಾಡಬೇಕು.

137222609 1043894822757094 322437303418384090 o.jpg? nc cat=111&ccb=2& nc sid=730e14& nc ohc=FXf3xO1XGYIAX854qqz& nc ht=scontent.fblr4 2

ಇಪಿ ಅನುಪಾತ ತಗ್ಗಿಸಿ

ಜಿಲ್ಲೆಯಲ್ಲಿ ಮತದಾರರ ಮತ್ತು ಜನಸಂಖ್ಯೆ ಅನುಪಾತ ರಾಜ್ಯದ ಅನುಪಾತಕ್ಕಿಂತ ಹೆಚ್ಚಾಗಿದೆ. ಮತದಾರರ ಪಟ್ಟಿಯನ್ನು ಸಮರ್ಪಕವಾಗಿ ಪರಿಷ್ಕರಣೆ ಮಾಡುವ ಮೂಲಕ ಈ ಅನುಪಾತವನ್ನು ತಗ್ಗಿಸಬಹುದಾಗಿದೆ.

ಮೃತಪಟ್ಟವರು, ಮದುವೆಯಾಗಿ ಹೋದವರು, ವಲಸೆ ಹೋದವರು ಮುಂತಾದವರನ್ನು ಗುರುತಿಸಿ ಅವರ ಹೆಸರನ್ನು ಮತದಾರರ ಪಟ್ಟಿಯಿಂದ ತೆಗೆದು ಹಾಕಲು ಕ್ರಮ ಕೈಗೊಳ್ಳಬೇಕು.

ಪಟ್ಟಿಯಿಂದ ಕೈಬಿಡುವ ಮೊದಲು ನೋಟೀಸ್ ಜಾರಿಗೊಳಿಸಬೇಕು. ಮತದಾರರ ಪಟ್ಟಿಯಿಂದ ತೆಗೆದು ಹಾಕಲಾದ ಹೆಸರುಗಳ ವಿವರಗಳನ್ನು ಮತಗಟ್ಟೆವಾರು ಒದಗಿಸುವಂತೆ ಅವರು ತಿಳಿಸಿದರು.

ಜಿಲ್ಲೆಯಲ್ಲಿ 2021ರ ಅಂದಾಜು ಜನಸಂಖ್ಯೆ ಒಟ್ಟು 18,73,978 ಇದ್ದು, ಇದರಲ್ಲಿ 9,28,176 ಪುರುಷರು ಮತ್ತು 9,45,802 ಮಹಿಳೆಯರು ಇದ್ದಾರೆ.

ಮತದಾರರ ಪಟ್ಟಿಯಲ್ಲಿ 7,26,792 ಪುರುಷರು, 7,37,200 ಮಹಿಳೆಯರು ಸೇರಿದಂತೆ 14,63,992 ಮಂದಿ ಇದ್ದಾರೆ. ಒಟ್ಟಾರೆಯಾಗಿ ಜಿಲ್ಲೆಯಲ್ಲಿ ಮತದಾರರು ಮತ್ತು ಜನಸಂಖ್ಯೆಯ ಒಟ್ಟಾರೆ ಅನುಪಾತ ಪುರುಷರು ಶೇ.78.30, ಮಹಿಳೆಯರು ಶೇ. 77.94 ಮತ್ತು ಒಟ್ಟು ಶೇ. 78.12 ಆಗಿದೆ.

ಶಿವಮೊಗ್ಗ ನಗರ ವ್ಯಾಪ್ತಿಯಲ್ಲಿ ಇದು ಶೇ.82.11 ಆಗಿದೆ ಎಂದು ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಅವರು ಮಾಹಿತಿ ನೀಡಿದರು.

ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಂ.ಎಲ್.ವೈಶಾಲಿ, ಅಪರ ಜಿಲ್ಲಾಧಿಕಾರಿ ಜಿ.ಅನುರಾಧ, ಉಪವಿಭಾಗಾಧಿಕಾರಿ ಟಿ.ಪ್ರಕಾಶ್, ಯೋಜನಾ ನಿರ್ದೇಶಕ ನಾಗೇಂದ್ರ ಹೊನ್ನಳ್ಳಿ ಮತ್ತಿತರ ಅಧಿಕಾರಿಗಳು ಉಪಸ್ಥಿತರಿದ್ದರು.

ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494

ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200

ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : January 13, 2021

ಶಿವಮೊಗ್ಗ JNNCEಯಲ್ಲಿ ಹ್ಯಾಕ್‌ಫೆಸ್ಟ್‌, ತಮಿಳುನಾಡು, ಮೈಸೂರು, ದಾವಣಗೆರೆ ಕಾಲೇಜುಗಳಿಗೆ ಬಹುಮಾನ

ಶಿವಮೊಗ್ಗ JNNCEಯಲ್ಲಿ ಹ್ಯಾಕ್‌ಫೆಸ್ಟ್‌, ತಮಿಳುನಾಡು, ಮೈಸೂರು, ದಾವಣಗೆರೆ ಕಾಲೇಜುಗಳಿಗೆ ಬಹುಮಾನ

ಬಟ್ಟೆಯೊಳಗೆ ಚೇಳು ನುಗ್ಗಿದೆ ಅಂತಾ ಗೆಳತಿ ಮನೆಗೆ ಹೋದ ಮಹಿಳೆ, ಆಮೇಲೆ ಗೆಳತಿಗೆ ಕಾದಿತ್ತು ಶಾಕ್

ಬಟ್ಟೆಯೊಳಗೆ ಚೇಳು ನುಗ್ಗಿದೆ ಅಂತಾ ಗೆಳತಿ ಮನೆಗೆ ಹೋದ ಮಹಿಳೆ, ಆಮೇಲೆ ಗೆಳತಿಗೆ ಕಾದಿತ್ತು ಶಾಕ್

ಸೋಮಿನಕೊಪ್ಪದಲ್ಲಿ ಜಾನಪದ ಸಮ್ಮೇಳನ, ಅಹೋರಾತ್ರಿ ಕಾರ್ಯಕ್ರಮ, ಏನೇನೆಲ್ಲ ಇರಲಿದೆ?

ಸೋಮಿನಕೊಪ್ಪದಲ್ಲಿ ಜಾನಪದ ಸಮ್ಮೇಳನ, ಅಹೋರಾತ್ರಿ ಕಾರ್ಯಕ್ರಮ, ಏನೇನೆಲ್ಲ ಇರಲಿದೆ?

ವಿದ್ಯುತ್‌ ಬೇಲಿಗೆ ಹಸು ಬಲಿ, ಸಾಕ್ಷ್ಯ ನಾಶಕ್ಕೆ ನಡೆದಿತ್ತಾ ಪ್ಲಾನ್?‌

ವಿದ್ಯುತ್‌ ಬೇಲಿಗೆ ಹಸು ಬಲಿ, ಸಾಕ್ಷ್ಯ ನಾಶಕ್ಕೆ ನಡೆದಿತ್ತಾ ಪ್ಲಾನ್?‌

ತ್ಯಾವರೆಕೊಪ್ಪ ಮೃಗಾಲಯದಲ್ಲಿ ವೈದ್ಯೆ ಸಾವು, ಮಿನಿಸ್ಟರ್‌ ಗರಂ, ಖಡಕ್‌ ಸೂಚನೆ, ಏನದು?

ತ್ಯಾವರೆಕೊಪ್ಪ ಮೃಗಾಲಯದಲ್ಲಿ ವೈದ್ಯೆ ಸಾವು, ಮಿನಿಸ್ಟರ್‌ ಗರಂ, ಖಡಕ್‌ ಸೂಚನೆ, ಏನದು?

BREAKING NEWS – ಶಿವಮೊಗ್ಗದ ಸಿಂಹಧಾಮದಲ್ಲಿ ನೀರಾನೆ ದಾಳಿ ಡಾಕ್ಟರ್‌ ಸಾವು

BREAKING NEWS – ಶಿವಮೊಗ್ಗದ ಸಿಂಹಧಾಮದಲ್ಲಿ ನೀರಾನೆ ದಾಳಿ ಡಾಕ್ಟರ್‌ ಸಾವು

ಡಿ.ಬಿ.ಹಳ್ಳಿ ಕ್ರಾಸ್‌ನಲ್ಲಿ ಅಪಘಾತ, ಮಹಿಳೆಯ ಕೈ ಮೂಳೆ ಕಟ್‌, ಆಗಿದ್ದೇನು?

ಡಿ.ಬಿ.ಹಳ್ಳಿ ಕ್ರಾಸ್‌ನಲ್ಲಿ ಅಪಘಾತ, ಮಹಿಳೆಯ ಕೈ ಮೂಳೆ ಕಟ್‌, ಆಗಿದ್ದೇನು?

ಕೋಟೆ ದೇಗುಲದಲ್ಲಿ ದೇವರಿಗೆ ಮಹಾವಿಷ್ಣು ಅಲಂಕಾರ, ಪಂಚಾಂಗ ಶ್ರವಣ, ಇವತ್ತು ಯಾವ ಅಲಂಕಾರ ಇರಲಿದೆ?

ಕೋಟೆ ದೇಗುಲದಲ್ಲಿ ದೇವರಿಗೆ ಮಹಾವಿಷ್ಣು ಅಲಂಕಾರ, ಪಂಚಾಂಗ ಶ್ರವಣ, ಇವತ್ತು ಯಾವ ಅಲಂಕಾರ ಇರಲಿದೆ?

ಶಿವಮೊಗ್ಗದಲ್ಲಿ ಯುವಕನ ಮೇಲೆ ಬಿಯರ್‌ ಬಾಟಲಿಯಿಂದ ಅಟ್ಯಾಕ್‌, ಕಾರಣವೇನು?

ಶಿವಮೊಗ್ಗದಲ್ಲಿ ಯುವಕನ ಮೇಲೆ ಬಿಯರ್‌ ಬಾಟಲಿಯಿಂದ ಅಟ್ಯಾಕ್‌, ಕಾರಣವೇನು?

ಶಿವಮೊಗ್ಗ ಜಿಲ್ಲೆಯಲ್ಲಿ ಜಾಸ್ತಿಯಾಗಲಿದೆ ಬಿಸಿಲು, ರಾತ್ರಿ ವೇಳೆ ಮುಂದುವರೆಯುತ್ತಾ ತಂಪು?

ಶಿವಮೊಗ್ಗ ಜಿಲ್ಲೆಯಲ್ಲಿ ಜಾಸ್ತಿಯಾಗಲಿದೆ ಬಿಸಿಲು, ರಾತ್ರಿ ವೇಳೆ ಮುಂದುವರೆಯುತ್ತಾ ತಂಪು?

Leave a Comment