ಕಾಂಗ್ರೆಸ್ ಸೇರ್ತಾರಾ ಆಯನೂರು ಮಂಜುನಾಥ್, ಕುತೂಹಲ ಮೂಡಿಸಿದೆ ಶಿವಮೊಗ್ಗ ವಾರ್ಡ್ ಅಧ್ಯಕ್ಷರುಗಳ ನಡೆ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 29 MARCH 2023

SHIMOGA : ವಿಧಾನ ಪರಿಷತ್ ಸದಸ್ಯ ಆಯನೂರು ಮಂಜುನಾಥ್ ಅವರು ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆಯಾಗುತ್ತಾರೆ ಅನ್ನುವ ಕುರಿತು ಚರ್ಚೆ ದಟ್ಟವಾಗುತ್ತಿದೆ. ಈ ನಡುವೆ ಶಿವಮೊಗ್ಗ ಕಾಂಗ್ರೆಸ್ ವಾರ್ಡ್ ಅಧ್ಯಕ್ಷರುಗಳು (Ward Presidents) ರಾಜೀನಾಮೆ ಬೆದರಿಕೆ ಒಡ್ಡಿದ್ದಾರೆ. ಇದು ರಾಜಕೀಯ ವಲಯದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿದೆ.

Speculation-over-Ayanuru-Manjunatha-joining-Congress

ಆಯನೂರು ಸೇರ್ಪಡೆಯ ಚರ್ಚೆ

ELECTION NEWS LOGO jpgವಿಧಾನಸಭೆ ಚುನಾವಣೆಗೆ ಆಯನೂರು ಮಂಜುನಾಥ್ ಅವರು ಬಿಜೆಪಿಯ ಟಿಕೆಟ್ ಆಕಾಂಕ್ಷಿಯಾಗಿದ್ದಾರೆ. ಈ ನಡುವೆ ಅವರು ಕಾಂಗ್ರೆಸ್ ಸೇರ್ಪಡೆಯಾಗುತ್ತಾರೆ ಅನ್ನುವ ಕುರಿತು ಚರ್ಚೆಗಳು ಆರಂಭವಾಗಿವೆ. ದಿನೇ ದಿನೆ ಈ ಚರ್ಚೆಗಳು, ಲೆಕ್ಕಾಚಾರಗಳು ದಟ್ಟವಾಗುತ್ತಲೆ ಹೋಗುತ್ತಿದೆ. ಆಯನೂರು ಮಂಜುನಾಥ್ ಅವರು ಕಾಂಗ್ರೆಸ್ ಅಭ್ಯರ್ಥಿಯಾಗುವ ಸಾಧ್ಯತೆ ಇದೆ ಎಂದು ಪಕ್ಷದ ವಲಯದಲ್ಲಿಯೇ ಮಾತು ಕೇಳಿ ಬಂದಿವೆ.

ರಾಜೀನಾಮೆ ಬೆದರಿಕೆ

ದಿಢೀರ್ ಬೆಳವಣಿಗೆಯಲ್ಲಿ ಕಾಂಗ್ರೆಸ್ ಪಕ್ಷದ ವಾರ್ಡ್ ಅಧ್ಯಕ್ಷರುಗಳು (Ward Presidents) ರಾಜೀನಾಮೆ ಬೆದರಿಕೆ ಒಡ್ಡಿದ್ದಾರೆ. ಆಯನೂರು ಮಂಜುನಾಥ್ ಅವರು ಕಾಂಗ್ರೆಸ್ ಸೇರ್ಪಡೆಯಾಗಲಿದ್ದಾರಾ ಅನ್ನುವ ಅನುಮಾನ ದಟ್ಟವಾಗಲು ಈ ಬೆಳವಣಿಗೆ ಕಾರಣವಾಗಿದೆ. ಕಾಂಗ್ರೆಸ್ ಪಕ್ಷದ ಜಿಲ್ಲಾ ಕಚೇರಿಯಲ್ಲಿ ವಾರ್ಡ್ ಅಧ್ಯಕ್ಷರುಗಳು ಸಭೆ ಸೇರಿ, ರಾಜೀನಾಮೆ ಬೆದರಿಕೆ ಒಡ್ಡಿದ್ದಾರೆ.

Congress Ward presidents

‘ಶಿವಮೊಗ್ಗ ನಗರಕ್ಕೆ ಕಾಂಗ್ರೆಸ್ ಪಕ್ಷದಲ್ಲಿ 11 ಆಕಾಂಕ್ಷಿಗಳಿದ್ದಾರೆ. ಪಕ್ಷದಲ್ಲಿ ಕೆಲಸ ಮಾಡಿದವರಿಗೆ ಟಿಕೆಟ್ ಕೊಟ್ಟರೆ ಎಲ್ಲರು ಒಗ್ಗಟ್ಟಿನಿಂದ ಕೆಲಸ ಮಾಡಬಹುದು. ಹೊರಗಿನಿಂದ ಬಂದವರಿಗೆ ಟಿಕೆಟ್ ಕೊಡಬಾರದು’ ಎಂದು ವಾರ್ಡ್ ಅಧ್ಯಕ್ಷರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಯಾರೆಲ್ಲ ಟಿಕೆಟ್ ಆಕಾಂಕ್ಷಿಗಳು?

ಶಿವಮೊಗ್ಗ ನಗರ ವಿಧಾನ ಸಭೆ ಕ್ಷೇತ್ರಕ್ಕೆ ಕಾಂಗ್ರೆಸ್ ಪಕ್ಷದಲ್ಲಿ 11 ಆಕಾಂಕ್ಷಿಗಳಿದ್ದಾರೆ. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹೆಚ್.ಎಸ್.ಸುಂದರೇಶ್, ಮಾಜಿ ಶಾಸಕ ಕೆ.ಬಿ.ಪ್ರಸನ್ನ ಕುಮಾರ್, ಕಾರ್ಪೊರೇಟರ್ ಹೆಚ್.ಸಿ.ಯೋಗೇಶ್, ಎಸ್.ಪಿ.ದಿನೇಶ್, ಪಾಲಿಕೆ ಮಾಜಿ ಮೇಯರ್ ಎಸ್.ಕೆ.ಮರಿಯಪ್ಪ, ನಗರಸಭೆ ಮಾಜಿ ಅಧ್ಯಕ್ಷ ಎಲ್.ಸತ್ಯನಾರಾಯಣರಾವ್, ಕೆಪಿಸಿಸಿ ಸದಸ್ಯ ವೈ.ಹೆಚ್.ನಾಗರಾಜ್, ಇಮ್ತಿಯಾಜ್, ಶೀನ್ ಜೋಸೆಫ್, ನಾಯಾಜ್ ಅಹಮದ್ ಖಾನ್, ನರಸಿಂಹಮೂರ್ತಿ ಅವರು ಟಿಕೆಟ್ ಗಾಗಿ ಅರ್ಜಿ ಸಲ್ಲಿಸಿದ್ದಾರೆ.

ಇದನ್ನೂ ಓದಿ – ನೀತಿ ಸಂಹಿತೆ, ಏನಿದು? ಹೇಗಿರುತ್ತೆ? ಜನ ತಿಳಿದುಕೊಳ್ಳಬೇಕಾದ 10 ಸಂಗತಿ ಇಲ್ಲಿದೆ

ಆಯನೂರು ಮಂಜುನಾಥ್ ಅವರಿಗೆ ಕಾಂಗ್ರೆಸ್ ಟಿಕೆಟ್ ಸಿಗಲಿದೆ ಎಂಬ ಚರ್ಚೆಗಳು ಗರಿಗೆದರುತ್ತಿದ್ದಂತೆ ಆಕಾಂಕ್ಷಿಗಳು ರಾಜ್ಯ ಮುಖಂಡರನ್ನು ಸಂಪರ್ಕಿಸಿದ್ದಾರೆ. ಆಯನೂರು ಮಂಜುನಾಥ್ ಅವರಿಗೆ ಟಿಕೆಟ್ ನೀಡದಂತೆ ಒತ್ತಡ ಹೇರುತ್ತಿದ್ದಾರೆ. ಸದ್ಯ ಟಿಕೆಟ್ ವಿಚಾರ ಕಾಂಗ್ರೆಸ್ ನಲ್ಲಿ ತೀವ್ರ ಕುತೂಹಲ ಮತ್ತು ಚರ್ಚೆಗೆ ಕಾರಣವಾಗಿದೆ.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment