ಶಿವಮೊಗ್ಗ ಪೊಲೀಸರಿಂದ ನಟಿ ಬಂಧನ, ಮೆಗ್ಗಾನ್‌ ಆಸ್ಪತ್ರೆಯಲ್ಲಿ ವೈದ್ಯಕೀಯ ಪರೀಕ್ಷೆ, ಏನಿದು ಕೇಸ್‌?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE | 16 JUNE 2023

SHIMOGA : ವಿಚಾರಣೆಗೆ ಹಾಜರಾಗದ ಹಿನ್ನೆಲೆ ಸಿನಿಮಾ ನಟಿಯೊಬ್ಬಳ (Actress) ವಿರುದ್ಧ ಶಿವಮೊಗ್ಗ ನ್ಯಾಯಾಲಯ ಜಾಮೀನು ರಹಿತ ಬಂಧನ ವಾರೆಂಟ್‌ ಜಾರಿ ಮಾಡಿತ್ತು. ಈ ಹಿನ್ನಲೆ ವಿನೋಬನಗರ ಠಾಣೆ ಪೊಲೀಸರು ನಟಿಯನ್ನು ಬಂಧಿಸಿ ಇವತ್ತು ನ್ಯಾಯಾಲಯದ ಮುಂದೆ ಹಾಜರುಪಡಿಸಿದರು.

Actress-Usha-R-Arrested-by-Shimoga-vinobanagara-police

ನಟಿ ಉಷಾ ಎಂಬಾಕೆ ವಿರುದ್ಧ ವಾರೆಂಟ್‌ ಜಾರಿಯಾಗಿತ್ತು. ಬೆಂಗಳೂರಿನಲ್ಲಿ ನಟಿ (Actress) ಉಷಾಳನ್ನು ಬಂಧಿಸಿದ್ದ ವಿನೋಬನಗರ ಠಾಣೆ ಪೊಲೀಸರು, ಮೆಗ್ಗಾನ್‌ ಆಸ್ಪತ್ರೆಯಲ್ಲಿ ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದರು. ಬಳಿಕ ನ್ಯಾಯಾಧೀಶರ ಮುಂದೆ ಹಾಜರುಪಡಿಸಿದರು. ನಟಿ ಉಷಾ ವಿರುದ್ಧ ಶಿವಮೊಗ್ಗದ ಶರವಣನ್‌ ಎಂಬಾತ ವಂಚನೆ ದೂರು ನೀಡಿದ್ದರು.

ಇದನ್ನೂ ಓದಿ – ಸಂಸದ ರಾಘವೇಂದ್ರ ಸೇರಿ ಹಲವರು ವಶಕ್ಕೆ | ಚಾರ್ಲಿಗಾಗಿ ಬಹುಮಾನ | ಶಿವಮೊಗ್ಗ ನಗರದ 10 ಫಟಾಫಟ್‌ ಸುದ್ದಿ

ತನ್ನಿಂದ ಹಣ ಪಡೆದು ಉಷಾ ಮರಳಿಸಿಲ್ಲ ಎಂದು ಆರೋಪಿಸಿ ಶರವಣನ್‌ ಶಿವಮೊಗ್ಗ ನ್ಯಾಯಾಲಯದಲ್ಲಿ ಖಾಸಗಿ ದೂರು ದಾಖಲಿಸಿದ್ದರು. ವಿಚಾರಣೆಗೆ ನಟಿ ಉಷಾ ಹಾಜರಾಗದ ಹಿನ್ನೆಲೆ ನ್ಯಾಯಾಲಯವು ಜಾಮೀನು ರಹಿತ ಬಂಧನ ವಾರಂಟ್‌ ಜಾರಿಗೊಳಿಸಿತ್ತು. ಸಲಗ ಸಿನಿಮಾದಲ್ಲಿ ಸಹ ಕಲಾವಿದೆಯಾಗಿ ಉಷ ಅಭಿನಯಿಸಿದ್ದರು. ಕಿರುತೆರೆ ಧಾರವಾಹಿಗಳಲ್ಲು ನಟಿಸುತ್ತಿದ್ದಾರೆ. ಶರವಣನ್‌ ಕೂಡ ಧಾರವಾಹಿಗಳಲ್ಲಿ ನಟಿಸಿದ್ದರು.

Parishrama NEET Academy

ಹೆಚ್ಚಿನ ಮಾಹಿತಿಗೆ ಇಲ್ಲಿ CLICK ಮಾಡಿ

 

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : June 16, 2023

Leave a Comment