ಶಿವಮೊಗ್ಗದ ಬಿದಿರೆಯಲ್ಲಿ ಸೈಟ್ ಮಾರಾಟಕ್ಕಿದೆ. ಸಾಯಿ ಬಾಬಾ ದೇಗುಲ, ರಾಷ್ಟ್ರೀಯ ಹೆದ್ದಾರಿಗೆ ಸಮೀಪದಲ್ಲಿ 30*50 ಅಳತೆಯ ಸೈಟು ಮಾರಾಟಕ್ಕಿದೆ. ಸಂಪರ್ಕಿಸಿ: 8073449559ಸೈಟ್ ಮಾರಾಟಕ್ಕಿದೆ
ಶಿವಮೊಗ್ಗದಲ್ಲಿ ಬಿ.ಇಡಿ ಕೋರ್ಸ್ಗೆ ಪ್ರವೇಶಾತಿ ಆರಂಭ
SHIVAMOGGA LIVE | 16 JUNE 2023
SHIMOGA : ವಿಚಾರಣೆಗೆ ಹಾಜರಾಗದ ಹಿನ್ನೆಲೆ ಸಿನಿಮಾ ನಟಿಯೊಬ್ಬಳ (Actress) ವಿರುದ್ಧ ಶಿವಮೊಗ್ಗ ನ್ಯಾಯಾಲಯ ಜಾಮೀನು ರಹಿತ ಬಂಧನ ವಾರೆಂಟ್ ಜಾರಿ ಮಾಡಿತ್ತು. ಈ ಹಿನ್ನಲೆ ವಿನೋಬನಗರ ಠಾಣೆ ಪೊಲೀಸರು ನಟಿಯನ್ನು ಬಂಧಿಸಿ ಇವತ್ತು ನ್ಯಾಯಾಲಯದ ಮುಂದೆ ಹಾಜರುಪಡಿಸಿದರು.

ನಟಿ ಉಷಾ ಎಂಬಾಕೆ ವಿರುದ್ಧ ವಾರೆಂಟ್ ಜಾರಿಯಾಗಿತ್ತು. ಬೆಂಗಳೂರಿನಲ್ಲಿ ನಟಿ (Actress) ಉಷಾಳನ್ನು ಬಂಧಿಸಿದ್ದ ವಿನೋಬನಗರ ಠಾಣೆ ಪೊಲೀಸರು, ಮೆಗ್ಗಾನ್ ಆಸ್ಪತ್ರೆಯಲ್ಲಿ ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದರು. ಬಳಿಕ ನ್ಯಾಯಾಧೀಶರ ಮುಂದೆ ಹಾಜರುಪಡಿಸಿದರು. ನಟಿ ಉಷಾ ವಿರುದ್ಧ ಶಿವಮೊಗ್ಗದ ಶರವಣನ್ ಎಂಬಾತ ವಂಚನೆ ದೂರು ನೀಡಿದ್ದರು.
ಇದನ್ನೂ ಓದಿ – ಸಂಸದ ರಾಘವೇಂದ್ರ ಸೇರಿ ಹಲವರು ವಶಕ್ಕೆ | ಚಾರ್ಲಿಗಾಗಿ ಬಹುಮಾನ | ಶಿವಮೊಗ್ಗ ನಗರದ 10 ಫಟಾಫಟ್ ಸುದ್ದಿ
ತನ್ನಿಂದ ಹಣ ಪಡೆದು ಉಷಾ ಮರಳಿಸಿಲ್ಲ ಎಂದು ಆರೋಪಿಸಿ ಶರವಣನ್ ಶಿವಮೊಗ್ಗ ನ್ಯಾಯಾಲಯದಲ್ಲಿ ಖಾಸಗಿ ದೂರು ದಾಖಲಿಸಿದ್ದರು. ವಿಚಾರಣೆಗೆ ನಟಿ ಉಷಾ ಹಾಜರಾಗದ ಹಿನ್ನೆಲೆ ನ್ಯಾಯಾಲಯವು ಜಾಮೀನು ರಹಿತ ಬಂಧನ ವಾರಂಟ್ ಜಾರಿಗೊಳಿಸಿತ್ತು. ಸಲಗ ಸಿನಿಮಾದಲ್ಲಿ ಸಹ ಕಲಾವಿದೆಯಾಗಿ ಉಷ ಅಭಿನಯಿಸಿದ್ದರು. ಕಿರುತೆರೆ ಧಾರವಾಹಿಗಳಲ್ಲು ನಟಿಸುತ್ತಿದ್ದಾರೆ. ಶರವಣನ್ ಕೂಡ ಧಾರವಾಹಿಗಳಲ್ಲಿ ನಟಿಸಿದ್ದರು.







