ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS, 3 JANUARY 2024
ಶಿವಮೊಗ್ಗ : ನೀರಿನ (water) ಕಂದಾಯ ಮತ್ತು ಬಾಕಿ ಕರ ವಸೂಲಾತಿ ಮಾಡಲು ನಗರದ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ನಿರ್ವಹಣಾ ವಿಭಾಗ ಮತ್ತು ಉಪವಿಭಾಗದ ವತಿಯಿಂದ ಜ.5ರ ವಿಶೇಷ ವಸೂಲಾತಿ ಕೌಂಟರ್ಗಳನ್ನು ತರೆಯಲಾಗಿದೆ ಸಹಾಯಕ ಕಾರ್ಯಪಾಲಕ ಅಭಿಯಂತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಗುಂಡಪ್ಪಶೆಡ್ ಪಾರ್ಕ್ ಹತ್ತಿರ, ಆರ್ಎಂಎಲ್ ನಗರ, ಭಾರತೀಯ ಸಭಾಭವನ, ವಿನೋಬನಗರ ಪೊಲೀಸ್ ಠಾಣೆ ಎದುರು ಪೊಲೀಸ್ ಚೌಕಿ, ಗಾಂಧಿನಗರ ಪಾರ್ಕ್ ಹತ್ತಿರ, ನೇತಾಜಿ ಸರ್ಕಲ್ ಆಟೋ ಸ್ಟಾಂಡ್ ಹತ್ತಿರ ವಿಶೇಷ ವಸೂಲಾತಿ ಕೌಂಟರ್ ತೆರೆಯಲಾಗಿದೆ.ವಿಶೇಷ ಕೌಂಟರ್ ಎಲ್ಲೆಲ್ಲಿ ಸ್ಥಾಪನೆ?
ಇದನ್ನೂ ಓದಿ » ಚಲಿಸುತ್ತಿದ್ದ ಆಟೋದಲ್ಲಿ ಚಾಲಕನ ಕುತ್ತಿಗೆ ಹಿಸುಕಲು ಯತ್ನಿಸಿದ ಪ್ರಯಾಣಿಕ
ನೀರಿನ ಖಾತೆದಾರರು ಬಾಕಿ ಉಳಿಸಿಕೊಂಡಿರುವ ನೀರಿನ ಕಂದಾಯವನ್ನು ಪಾವತಿಸದಿದ್ದಲ್ಲಿ ನೀರಿನ ಸಂಪರ್ಕವನ್ನು ಕಡಿತಗೊಳಿಸಲಾಗುವುದು ಎಂದು ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯ ಸಹಾಯಕ ಕಾರ್ಯಪಾಲಕ ಅಭಿಯಂತರು ತಿಳಿಸಿದ್ದಾರೆ.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422