ಶಿವಮೊಗ್ಗದಲ್ಲಿ ನೀರಿನ ಸಂಪರ್ಕ ಕಡಿತದ ವಾರ್ನಿಂಗ್‌, ಕಾರಣವೇನು?

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ನಮ್ಮ ವಾಟ್ಸಪ್‌ ನಂಬರ್ 7411700200.

ನಮ್ಮ ಗ್ರೂಪ್‌ ಸೇರಿಲು ಇಲ್ಲಿ ಕ್ಲಿಕ್‌ ಮಾಡಿ

SHIVAMOGGA LIVE NEWS, 3 JANUARY 2024

ಶಿವಮೊಗ್ಗ : ನೀರಿನ (water) ಕಂದಾಯ ಮತ್ತು ಬಾಕಿ ಕರ ವಸೂಲಾತಿ ಮಾಡಲು ನಗರದ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ನಿರ್ವಹಣಾ ವಿಭಾಗ ಮತ್ತು ಉಪವಿಭಾಗದ ವತಿಯಿಂದ ಜ.5ರ ವಿಶೇಷ ವಸೂಲಾತಿ ಕೌಂಟರ್‌ಗಳನ್ನು ತರೆಯಲಾಗಿದೆ ಸಹಾಯಕ ಕಾರ್ಯಪಾಲಕ ಅಭಿಯಂತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಸುದ್ದಿಯ ಮುಂದಿನ 4 ಪ್ಯಾರಾಗಳು ಕೆಳಗಿವೆ.

ವಿಶೇಷ ಕೌಂಟರ್‌ ಎಲ್ಲೆಲ್ಲಿ ಸ್ಥಾಪನೆ?

ಗುಂಡಪ್ಪಶೆಡ್ ಪಾರ್ಕ್ ಹತ್ತಿರ, ಆರ್‌ಎಂಎಲ್ ನಗರ, ಭಾರತೀಯ ಸಭಾಭವನ, ವಿನೋಬನಗರ ಪೊಲೀಸ್ ಠಾಣೆ ಎದುರು ಪೊಲೀಸ್ ಚೌಕಿ, ಗಾಂಧಿನಗರ ಪಾರ್ಕ್ ಹತ್ತಿರ, ನೇತಾಜಿ ಸರ್ಕಲ್ ಆಟೋ ಸ್ಟಾಂಡ್‌ ಹತ್ತಿರ ವಿಶೇಷ ವಸೂಲಾತಿ ಕೌಂಟರ್ ತೆರೆಯಲಾಗಿದೆ.

Web-Design-by-New-Web-techy

ಇದನ್ನೂ ಓದಿ » ಚಲಿಸುತ್ತಿದ್ದ ಆಟೋದಲ್ಲಿ ಚಾಲಕನ ಕುತ್ತಿಗೆ ಹಿಸುಕಲು ಯತ್ನಿಸಿದ ಪ್ರಯಾಣಿಕ

ನೀರಿನ ಖಾತೆದಾರರು ಬಾಕಿ ಉಳಿಸಿಕೊಂಡಿರುವ ನೀರಿನ ಕಂದಾಯವನ್ನು ಪಾವತಿಸದಿದ್ದಲ್ಲಿ ನೀರಿನ ಸಂಪರ್ಕವನ್ನು ಕಡಿತಗೊಳಿಸಲಾಗುವುದು ಎಂದು ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯ ಸಹಾಯಕ ಕಾರ್ಯಪಾಲಕ ಅಭಿಯಂತರು ತಿಳಿಸಿದ್ದಾರೆ.

Leave a Comment