ಭದ್ರಾ ಬಲದಂಡೆ ನಾಲೆಗೆ ನೀರು ಹರಿಸುವ ದಿನಾಂಕ ಪ್ರಕಟ, ಎಡದಂಡೆ ನಾಲೆಗೆ ಯಾವಾಗ?

ಶಿವಮೊಗ್ಗ: ಮುಂಗಾರು ಬೆಳೆಗೆ ಭದ್ರಾ ಜಲಾಶಯದ ಬಲದಂಡೆ ನಾಲಗೆ (Canal) ಜುಲೈ 22ರಿಂದ 120 ದಿನ ನೀರು ಹರಿಸಲು ತೀರ್ಮಾನಿಸಲಾಗಿದೆ. ಶಿವಮೊಗ್ಗದ ಮಲವಗೊಪ್ಪದ ಭದ್ರ ಕಾಡಾ ಕಚೇರಿಯಲ್ಲಿ ಸಚಿವ ಮಧು ಬಂಗಾರಪ್ಪ ಅಧ್ಯಕ್ಷತೆಯಲ್ಲಿ ಭದ್ರಾ ಯೋಜನಾ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ.

ಸುದ್ದಿಯ ಮುಂದಿನ ಭಾಗ ಕೆಳಗಿದೆ

ಜು.22 ರಿಂದ ಬಲದಂಡೆ ನಾಲೆಗೆ 120 ದಿನ ನೀರು ಹರಿಸಲು ಸಭೆ ನಿರ್ಧರಿಸಿದೆ. ಸುರಕ್ಷತಾ ಕ್ರಮ‌ಗಳನ್ನು ಕೈಗೊಂಡು ನೀರು ಬಿಡಬೇಕು. ಎಡದಂಡ ನಾಲೆಯಲ್ಲಿ ರಿಪೇರಿ ಕಾರ್ಯ ನಡೆಯುತ್ತಿದ್ದು, ಶೀಘ್ರ ಕಾಮಗಾರಿ ಪೂರ್ಣಗೊಳಿಸುವಂತೆ ಸೂಚಿಸಲಾಯಿತು. ಎಡದಂಡ ನಾಲೆಗೆ ನೀರು ಹರಿಸಲು ದಿನಾಂಕ ನಿಗದಿಗೊಳಿಸಲು ಸಭೆಯಲ್ಲಿ ತೀರ್ಮಾನಿಸಲಾಗಿದೆ.

ಇದನ್ನೂ ಓದಿ » ಶಿವಮೊಗ್ಗದಲ್ಲಿ ಅಧಿಕಾರಿಗಳಿಂದಲೇ ಕಡತಗಳಿಗೆ ಬೆಂಕಿ ಆರೋಪ, ಕಚೇರಿ ಮುಂದೆ ದಿಢೀರ್‌ ಹೋರಾಟ

Nanjappa Hospital Advertisement

ಚಿಕ್ಕಮಗಳೂರು ಜಿಲ್ಲೆಗೆ ನೀರು ಹಂಚಿಕೆ ಕುರಿತು ನೀರಾವರಿ ಸಚಿವರೊಂದಿಗೆ ಸಭೆ ನಿಗದಿಪಡಿಸಿ ಚರ್ಚಿಸಬೇಕು. ಕಾಡಾ ವ್ಯಾಪ್ತಿಯಲ್ಲಿ 537 ನೀರು ಬಳಕೆದಾರರ ಸಂಘಗಳಿದ್ದು, ಇವುಗಳಿಗೆ ನೀರು ಬಳಕೆ, ಇತರೆ ರೈತ ಚಟುವಟಿಕೆ ಕುರಿತು ಕಾರ್ಯಾಗಾರ ಮಾಡಿದರೆ ಒಳಿತು.ಮಧು ಬಂಗಾರಪ್ಪ, ಸಚಿವ

Bhadra-Cada-meeting-Minister-Madhu-Bangarappa

ರೈತ ಪರ ಕಾಳಜಿ ‌ವಹಿಸಿ ಕೊನೆ ಭಾಗದ ರೈತರಿಗೆ ನೀರು ತಲುಪಿಸಬೇಕು. ಅಕ್ರಮ ಪಂಪ್ ಸೆಟ್ ತೆರವು ಕಷ್ಟವಾಗಿದೆ. ಕೆರೆ ತುಂಬಿಸಲು, ಕುಡಿಯುವ ನೀರಿಗಾಗಿ ಭದ್ರಾ ನಾಲೆಯನ್ನು ಸೀಳುತ್ತಾ ಹೋಗುವುದು ಅಷ್ಟು ಸರಿಯಲ್ಲ. ‌ನಾಲೆಗಳ ರಿಪೇರಿ ಹಾಗೂ ಹೂಳು ತೆಗೆಯಲು ಅನುದಾನ ನೀಡಬೇಕು.

June-2025-Report-Shivamogga-Live-New-New.

ಸವಳು ಜವಳು ಯೋಜನೆ ಜಾರಿಗೆ‌ ರೈತರ ಸಹಕಾರ ಅಗತ್ಯ. ಭೂಮಿಯ ಫಲವತ್ತತೆ, ಸುರಕ್ಷತೆ ಬಗ್ಗೆಯು ಕಾಡಾ ಕೆಲಸ ಮಾಡುತ್ತಿದೆ. ಕಾಡಾ ವ್ಯಾಪ್ತಿಯಲ್ಲಿ 35 ನೀರಾವರಿ ಯೋಜನೆಗಳು ಬರುತ್ತವೆ. ಒಟ್ಟು ಸಂಘಗಳ ಪೈಕಿ 110 ಸಂಘಗಳಿಗೆ ಸರ್ಕಾರ ₹1,00,000 ಅನುದಾನ ನೀಡಲಾಗಿದೆ. ನರೇಗಾ ಯೋಜನೆ ಅಡಿ ಕೆಲಸಕ್ಕೆ ಮುಂದಾಗಿದ್ದೇವೆ. ನೀರಾವರಿ ಸಮಸ್ಯೆ ಪರಿಹರಿಸಲು ಬದ್ದವಾಗಿದೆ.

ಶಾಸಕರಾದ ಶಾಂತನಗೌಡ, ಜಿ.ಹೆಚ್‌.ಶ್ರೀನಿವಾಸ್‌, ಎಸ್.ಎನ್.ಚನ್ನಬಸಪ್ಪ, ಶಾಂತನಗೌಡ, ಬಿ.ಪಿ.ಹರೀಶ್, ವಿಧಾನ ಪರಿಷತ್ ಸದಸ್ಯೆ ಬಲ್ಕಿಸ್‌ ಬಾನು, ರೈತರು, ಇಂಜಿನಿಯರ್‌ಗಳು ಸಭೆಯಲ್ಲಿದ್ದರು.

📍 ನಿಮ್ಮೂರ ಸುದ್ದಿ
ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ವಾಟ್ಸಪ್‌ ಮಾಡಬಹುದು. ಉಚಿತವಾಗಿ ಪ್ರಕಟಿಸುತ್ತೇವೆ.
Shivamogga Live Promotion

Leave a Comment