ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
ಶಿವಮೊಗ್ಗದ ಲೈವ್.ಕಾಂ | SHIMOGA NEWS | 28 ಡಿಸೆಂಬರ್ 2021
ಬೇಸಿಗೆ ಹಂಗಾಮಿನ ಬೆಳೆಗಾಗಿ ಭದ್ರಾ ಎಡ ಮತ್ತು ಬಲ ದಂಡೆ ನಾಲೆಗಳಲ್ಲಿ120 ದಿನ ನೀರು ಹರಿಸಲು ನಿರ್ಧರಿಸಲಾಗಿದೆ. ಭದ್ರಾ ಯೋಜನಾ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ಮಲವಗೊಪ್ಪದಲ್ಲಿರುವ ಭದ್ರಾ ಅಚ್ಚುಕಟ್ಟು ಅಭಿವೃದ್ಧಿ ಪ್ರಾಧಿಕಾರದ ಸಭಾಂಗಣದಲ್ಲಿ ಭದ್ರಾ ಯೋಜನೆ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ನಾಲೆಗಳಿಗೆ ನೀರು ಹರಿಸುವ ನಿರ್ಧಾರ ಕೈಗೊಳ್ಳಲಾಯಿತು.
ಡಿ.29ರ ಮಧ್ಯರಾತ್ರಿಯಿಂದ ಎಡ ದಂಡೆ ನಾಲೆಗಳಿಗೆ ನೀರು ಹರಿಸಲಾಗುತ್ತದೆ. ಡಿ.30ರ ರಾತ್ರಿಯಿಂದ ಬಲ ದಂಡೆ ನಾಲೆ ಮೂಲಕ ನೀರು ಹರಿಸಲಾಗುತ್ತದೆ. ಬೇಸಿಗೆ ಬೆಳೆಗಾಗಿ 120 ದಿನ ನಾಲೆಗಳ ಮೂಲಕ ನೀರು ಹರಿಸಲು ನಿರ್ಧರಿಸಲಾಗಿದೆ ಎಂದು ಭದ್ರಾ ಅಚ್ಚುಕಟ್ಟು ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷೆ ಪವಿತ್ರಾ ರಾಮಾಯ್ಯ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಭದ್ರಾವತಿ ಶಾಸಕ ಸಂಗಮೇಶ್ವರ್, ರೈತ ಸಂಘದ ಕಾರ್ಯಾಧ್ಯಕ್ಷ ಹೆಚ್.ಆರ್.ಬಸವರಾಜಪ್ಪ, ಪ್ರಮುಖರಾದ ಷಡಾಕ್ಷರಪ್ಪ, ತೇಜಸ್ವಿ ಪಟೇಲ್ ಸೇರಿದಂತೆ ಹಲವರು ಸಭೆಯಲ್ಲಿದ್ದರು.