ಶಿವಮೊಗ್ಗ ಸಿಟಿಯಲ್ಲಿ ಒಂದು ದಿನ ಕುಡಿಯುವ ನೀರು ಪೂರೈಕೆ ಇರಲ್ಲ, ಯಾವಾಗ? ಯಾಕೆ?

ಶಿವಮೊಗ್ಗ: ನಗರದ ಕೃಷ್ಣರಾಜೇಂದ್ರ ಜಲಶುದ್ಧೀಕರಣ ಘಟಕದಲ್ಲಿ ತುರ್ತು ನಿರ್ವಹಣಾ ಕಾಮಗಾರಿ ಹಮ್ಮಿಕೊಳ್ಳಲಾಗಿದೆ. ಆದ್ದರಿಂದ ನವೆಂಬರ್ 13 ರಂದು ಶಿವಮೊಗ್ಗ ನಗರದಲ್ಲಿ ದೈನಂದಿನ ಕುಡಿಯುವ ನೀರು  ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯ ನಿರ್ವಹಣೆ ಹಾಗೂ ಪಾಲನೆ ಉಪ-ವಿಭಾಗದ ಸಹಾಯಕ ಕಾರ್ಯಪಾಲಕ ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. (ಈ ಸುದ್ದಿಯನ್ನು ಇನ್ನು 23 ಸೆಕೆಂಡ್‌ಗಳಲ್ಲಿ ಓದಿ ಮುಗಿಸಬಹುದು)

ನೀರು ಸರಬರಾಜಿನಲ್ಲಿ ವ್ಯತ್ಯಯವಾಗಲಿರುವ ಹಿನ್ನೆಲೆ ಸಾರ್ವಜನಿಕರು ಮುನ್ನೆಚ್ಚರಿಕೆ ವಹಿಸಬೇಕು ಹಾಗೂ ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯೊಂದಿಗೆ ಸಹಕರಿಸಬೇಕು ಎಂದು ತಿಳಿಸಲಾಗಿದೆ.

Drinking-Water-Tap