ಶಿವಮೊಗ್ಗ ಲೈವ್
ಶಿವಮೊಗ್ಗ: ಶಿವಮೊಗ್ಗ ನಗರದ ಕೃಷ್ಣರಾಜೇಂದ್ರ ಜಲಶುದ್ಧೀಕರಣ ಘಟಕದ ಭೂಗತ ಕೇಬಲ್ ದುರಸ್ತಿ ಕಾಮಗಾರಿ ನಡೆಸಲಾಗತುತಿದೆ. ಆದ್ದರಿಂದ ಅಕ್ಟೋಬರ್ 8 ರಂದು ಶಿವಮೊಗ್ಗ ನಗರದಲ್ಲಿ ದೈನಂದಿನ ಕುಡಿಯುವ ನೀರಿನ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ. ಸಾರ್ವಜನಿಕರು ಈ ಪರಿಸ್ಥಿತಿಯನ್ನು ಅರಿತು ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯೊಂದಿಗೆ ಸಹಕರಿಸಬೇಕು ಎಂದು ಶಿವಮೊಗ್ಗದ ಕನನೀಸ ಮತ್ತು ಒಳ ಮಂಡಳಿ ನಿರ್ವಹಣೆ ಮತ್ತು ಪಾಲನೆ ಉಪ-ವಿಭಾಗದ ಸಹಾಯಕ ಕಾರ್ಯಪಾಲಕ ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
