ಶಿವಮೊಗ್ಗ ಸಿಟಿಯಲ್ಲಿ ಕುಡಿಯುವ ನೀರು ಪೂರೈಕೆ ವ್ಯತ್ಯಯ, ಎಷ್ಟು ದಿನ? ಕಾರಣವೇನು?

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ನಮ್ಮ ವಾಟ್ಸಪ್‌ ನಂಬರ್ 7411700200.

ನಮ್ಮ ಗ್ರೂಪ್‌ ಸೇರಿಲು ಇಲ್ಲಿ ಕ್ಲಿಕ್‌ ಮಾಡಿ
NEWS HIGHLIGHTS

ಶಿವಮೊಗ್ಗ: ನಗರದ ಕೃಷ್ಣರಾಜೇಂದ್ರ ಜಲಶುದ್ಧೀಕರಣ ಘಟಕದಲ್ಲಿ ದುರಸ್ತಿ ಕಾಮಗಾರಿ ಕೈಗೊಂಡಿರುವುದರಿಂದ ಶಿವಮೊಗ್ಗ ನಗರದಾದ್ಯಂತ ದೈನಂದಿನ ಕುಡಿಯುವ ನೀರಿನ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ.

➤ ಸುದ್ದಿಯ ಮುಂದಿನ 1 ಪ್ಯಾರಾಗಳು ಕೆಳಗಿವೆ.

ಘಟಕದಲ್ಲಿರುವ ಕ್ಲಾರಿಫ್ಲೋಕ್ಯೂಲೇಟರ್‌ನಲ್ಲಿ ನೀರು ಸೋರಿಕೆಯಾಗುತ್ತಿದೆ. ತಕ್ಷಣವೇ ದುರಸ್ತಿ ಕಾಮಗಾರಿ ಆರಂಭಿಸಲಾಗಿದೆ. ಈ ಹಿನ್ನೆಲೆ ಕಾಮಗಾರಿ ಪೂರ್ಣಗೊಳ್ಳುವವರೆಗೂ ನೀರಿನ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಪರಿಸ್ಥಿತಿ ಅರಿತು ಮಿತವಾಗಿ ನೀರು ಬಳಸಬೇಕು ಹಾಗೂ ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯೊಂದಿಗೆ ಸಹಕರಿಸಬೇಕು ಎಂದು ಮಂಡಳಿಯ ನಿರ್ವಹಣೆ ಮತ್ತು ಪಾಲನೆ ಉಪ-ವಿಭಾಗದ ಸಹಾಯಕ ಕಾರ್ಯಪಾಲಕ ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Drinking-Water-Tap