SHIVAMOGGA LIVE NEWS | 3 MARCH 2023
SHIMOGA : ಸೇವೆ ಕಾಯಂಗೊಳಿಸಬೇಕು ಸೇರಿದಂತೆ ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಶಿವಮೊಗ್ಗ ಮಹಾನಗರ ಪಾಲಿಕೆ ನೀರು ಸರಬರಾಜು (Water Supply) ವಿಭಾಗದ ನೌಕರರು ಮುಷ್ಕರ ನಡೆಸಲು ನಿರ್ಧರಿಸಿದ್ದಾರೆ. ಮಾರ್ಚ್ 6ರಿಂದ ಅನಿರ್ದಿಷ್ಟಾವಧಿ ಮುಷ್ಕರ ಕೈಗೊಳ್ಳಲು ನಿರ್ಧರಿಸಿದ್ದಾರೆ. ಇದರಿಂದ ನಗರದಲ್ಲಿ ನೀರು ಸರಬರಾಜು ವ್ಯತ್ಯಯವಾಗುವ ಸಾಧ್ಯತೆ ಇದೆ.
115 ನೌಕರರಿಂದ ಕೆಲಸ ಸ್ಥಗಿತ
ಶಿವಮೊಗ್ಗ ಮಹಾನಗರ ಪಾಲಿಕೆ ನೀರು ಸರಬರಾಜು ವಿಭಾಗದ ೧೧೫ ನೌಕರರು ಕೆಲಸ ಸ್ಥಗಿತ ಮಾಡಿ ಅನಿರ್ದಿಷ್ಠಾವದಿ ಮುಷ್ಕರ ನಡೆಸಲು ನಿರ್ದರಿಸಲಾಗಿದೆ ಎಂದು ಶಿವಮೊಗ್ಗ ಮಹಾನಗರಪಾಲಿಕೆ ಹೊರಗುತ್ತಿಗೆ ನೀರು ಸರಬರಾಜು ನೌಕರರ ಸಂಘ ತಿಳಿಸಿದೆ.
ಬೇಡಿಕೆಗಳೇನು?
ಎಲ್ಲಾ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಹೊರಗುತ್ತಿಗೆ ಅಡಿಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ನೀರು ಸರಬರಾಜು ನೌಕರರನ್ನು ಖಾಯಂಗೊಳಿಸಿ ಸಮಾನ ವೇತನ ನೀಡಬೇಕು.ಗುತ್ತಿಗೆ ಪದ್ಧತಿಯನ್ನು ಖಾಯಂ ಆಗಿ ರದ್ದು ಪಡಿಸಲೇ ಬೇಕು.
ದಿನಕ್ಕೆ ಎಂಟು ಗಂಟೆ ಕೆಲಸ, ಹೆಚ್ಚುವರಿ ಕೆಲಸಕ್ಕೆ ಕಾನೂನು ಬದ್ಧ ವೇತನ ನೀಡಬೇಕು. ರಜೆ, ಆರೋಗ್ಯ ವಿಮೆ, ನಿವೃತ್ತ ವೇತನ,ಉಪಧನ ಕೊಡುವ ಆದೇಶ ಹೊರಡಿಸಬೇಕು. ಪಿಎಫ್,ಇಎಸ್‌ಐಗಳನ್ನು ಸ್ಥಳೀಯ ಸಂಸ್ಥೆಗಳ ಮೂಲಕವೇ ಕೊಡಬೇಕು. ಗೃಹ ಭಾಗ್ಯ ಯೋಜನೆಯಡಿ ನಿವೇಶನ ನೀಡಬೇಕೆಂದು ಮನವಿಯಲ್ಲಿ ತಿಳಿಸಲಾಗಿದೆ.
ಬೇಡಿಕೆಗೆ ಸ್ಪಂದಿಸಿಲ್ಲ
ತಮ್ಮ ಬೇಡಿಕೆ ಈಡೇರಿಸುವಂತೆ ಹಲವು ಬಾರಿ ಮುಖ್ಯಮಂತ್ರಿ ಮತ್ತು ಸಚಿವರಿಗೆ ಮನವಿ ಮಾಡಲಾಗಿದೆ. ಆದರೆ ಈವರೆಗೂ ತಮ್ಮ ಬೇಡಿಕೆ ಈಡೇರಿಲ್ಲ. ಈ ಸಂಬಂಧ ಸರ್ಕಾರಕ್ಕೆ ನೀಡಿದ್ದ ಗಡುವು ಮುಗಿದಿದೆ. ಈ ಹಿನ್ನೆಲೆ ಮಾರ್ಚ್ 6ರಿಂದ ಮುಷ್ಕರ ನಡೆಸಲು ನಿರ್ಧರಿಸಲಾಗಿದೆ ಎಂದು ಸಂಘಟನೆ ಅಧ್ಯಕ್ಷ ನಾಗರಾಜ್, ಕಾರ್ಯದರ್ಶಿ ಕಿರಣ್‌ಕುಮಾರ್ ಡಿ.ಎನ್.ಉಪಾಧ್ಯಕ್ಷ ರಘುರಾಂ ಕೆ ಹಾಗೂ ಖಜಾಂಚಿ ವಿನಯ್ ಅವರುಗಳು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಇದನ್ನೂ ಓದಿ – ಯಾವುದಕ್ಕೂ ಸಾಕಾಗುತ್ತಿಲ್ಲ ಸರ್ಕಾರದ ಹಣ, 30 ಸಾವಿರಕ್ಕೆ ಹೆಚ್ಚಿಸುವಂತೆ ವಿದ್ಯಾರ್ಥಿಗಳ ಆಗ್ರಹ
ನೀರು ಸರಬರಾಜು ವ್ಯತ್ಯಯ ಸಂಭವ
ನೀರು ಸರಬರಾಜು (Water Supply) ನೌಕರರು ಮುಷ್ಕರ ನಡೆಸಲು ನಿರ್ಧರಿಸಿರುವುದರಿಂದ ಶಿವಮೊಗ್ಗ ನಗರದಲ್ಲಿ ಕುಡಿಯುವ ನೀರು ಪೂರೈಕೆಯಲ್ಲಿ ವ್ಯತ್ಯಯವಾಗುವ ಸಂಭವವಿದೆ.
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200