ಶಿವಮೊಗ್ಗ ನಗರದಾದ್ಯಂತ ಮಾರ್ಚ್ 6ರಿಂದ ಕುಡಿಯುವ ನೀರು ಪೂರೈಕೆಯಲ್ಲಿ ವ್ಯತ್ಯಯ ಸಾಧ್ಯತೆ, ಕಾರಣವೇನು?

ಸೈಟ್‌ ಮಾರಾಟಕ್ಕಿದೆ

ಶಿವಮೊಗ್ಗದ ಬಿದಿರೆಯಲ್ಲಿ ಸೈಟ್‌ ಮಾರಾಟಕ್ಕಿದೆ. ಸಾಯಿ ಬಾಬಾ ದೇಗುಲ, ರಾಷ್ಟ್ರೀಯ ಹೆದ್ದಾರಿಗೆ ಸಮೀಪದಲ್ಲಿ 30*50 ಅಳತೆಯ ಸೈಟು ಮಾರಾಟಕ್ಕಿದೆ. ಸಂಪರ್ಕಿಸಿ: 8073449559

ಶಿವಮೊಗ್ಗದಲ್ಲಿ ಬಿ.ಇಡಿ ಕೋರ್ಸ್‌ಗೆ ಪ್ರವೇಶಾತಿ ಆರಂಭ

⇒ ಪೂರ್ತಿ ಡಿಟೇಲ್ಸ್‌ಗೆ ಇಲ್ಲಿ ಕ್ಲಿಕ್‌ ಮಾಡಿ

SHIVAMOGGA LIVE NEWS | 3 MARCH 2023

SHIMOGA : ಸೇವೆ ಕಾಯಂಗೊಳಿಸಬೇಕು ಸೇರಿದಂತೆ ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಶಿವಮೊಗ್ಗ ಮಹಾನಗರ ಪಾಲಿಕೆ ನೀರು ಸರಬರಾಜು (Water Supply) ವಿಭಾಗದ ನೌಕರರು ಮುಷ್ಕರ ನಡೆಸಲು ನಿರ್ಧರಿಸಿದ್ದಾರೆ. ಮಾರ್ಚ್ 6ರಿಂದ ಅನಿರ್ದಿಷ್ಟಾವಧಿ ಮುಷ್ಕರ ಕೈಗೊಳ್ಳಲು ನಿರ್ಧರಿಸಿದ್ದಾರೆ. ಇದರಿಂದ ನಗರದಲ್ಲಿ ನೀರು ಸರಬರಾಜು ವ್ಯತ್ಯಯವಾಗುವ ಸಾಧ್ಯತೆ ಇದೆ.

Water-Supply-Shimoga-Mahanagara-Palike

115 ನೌಕರರಿಂದ ಕೆಲಸ ಸ್ಥಗಿತ

ಶಿವಮೊಗ್ಗ ಮಹಾನಗರ ಪಾಲಿಕೆ ನೀರು ಸರಬರಾಜು ವಿಭಾಗದ ೧೧೫ ನೌಕರರು ಕೆಲಸ ಸ್ಥಗಿತ ಮಾಡಿ ಅನಿರ್ದಿಷ್ಠಾವದಿ ಮುಷ್ಕರ ನಡೆಸಲು ನಿರ್ದರಿಸಲಾಗಿದೆ ಎಂದು ಶಿವಮೊಗ್ಗ ಮಹಾನಗರಪಾಲಿಕೆ ಹೊರಗುತ್ತಿಗೆ ನೀರು ಸರಬರಾಜು ನೌಕರರ ಸಂಘ ತಿಳಿಸಿದೆ.

ಬೇಡಿಕೆಗಳೇನು?

ಎಲ್ಲಾ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಹೊರಗುತ್ತಿಗೆ ಅಡಿಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ನೀರು ಸರಬರಾಜು ನೌಕರರನ್ನು ಖಾಯಂಗೊಳಿಸಿ ಸಮಾನ ವೇತನ ನೀಡಬೇಕು.ಗುತ್ತಿಗೆ ಪದ್ಧತಿಯನ್ನು ಖಾಯಂ ಆಗಿ ರದ್ದು ಪಡಿಸಲೇ ಬೇಕು.

ದಿನಕ್ಕೆ ಎಂಟು ಗಂಟೆ ಕೆಲಸ, ಹೆಚ್ಚುವರಿ ಕೆಲಸಕ್ಕೆ ಕಾನೂನು ಬದ್ಧ ವೇತನ ನೀಡಬೇಕು. ರಜೆ, ಆರೋಗ್ಯ ವಿಮೆ, ನಿವೃತ್ತ ವೇತನ,ಉಪಧನ ಕೊಡುವ ಆದೇಶ ಹೊರಡಿಸಬೇಕು. ಪಿಎಫ್,ಇಎಸ್‌ಐಗಳನ್ನು ಸ್ಥಳೀಯ ಸಂಸ್ಥೆಗಳ ಮೂಲಕವೇ ಕೊಡಬೇಕು. ಗೃಹ ಭಾಗ್ಯ ಯೋಜನೆಯಡಿ ನಿವೇಶನ ನೀಡಬೇಕೆಂದು ಮನವಿಯಲ್ಲಿ ತಿಳಿಸಲಾಗಿದೆ.

Water Tap image

ಬೇಡಿಕೆಗೆ ಸ್ಪಂದಿಸಿಲ್ಲ

ತಮ್ಮ ಬೇಡಿಕೆ ಈಡೇರಿಸುವಂತೆ ಹಲವು ಬಾರಿ ಮುಖ್ಯಮಂತ್ರಿ ಮತ್ತು ಸಚಿವರಿಗೆ ಮನವಿ ಮಾಡಲಾಗಿದೆ. ಆದರೆ ಈವರೆಗೂ ತಮ್ಮ ಬೇಡಿಕೆ ಈಡೇರಿಲ್ಲ. ಈ ಸಂಬಂಧ ಸರ್ಕಾರಕ್ಕೆ ನೀಡಿದ್ದ ಗಡುವು ಮುಗಿದಿದೆ. ಈ ಹಿನ್ನೆಲೆ ಮಾರ್ಚ್ 6ರಿಂದ ಮುಷ್ಕರ ನಡೆಸಲು ನಿರ್ಧರಿಸಲಾಗಿದೆ ಎಂದು ಸಂಘಟನೆ ಅಧ್ಯಕ್ಷ ನಾಗರಾಜ್, ಕಾರ್ಯದರ್ಶಿ ಕಿರಣ್‌ಕುಮಾರ್ ಡಿ.ಎನ್.ಉಪಾಧ್ಯಕ್ಷ ರಘುರಾಂ ಕೆ ಹಾಗೂ ಖಜಾಂಚಿ ವಿನಯ್ ಅವರುಗಳು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ – ಯಾವುದಕ್ಕೂ ಸಾಕಾಗುತ್ತಿಲ್ಲ ಸರ್ಕಾರದ ಹಣ, 30 ಸಾವಿರಕ್ಕೆ ಹೆಚ್ಚಿಸುವಂತೆ ವಿದ್ಯಾರ್ಥಿಗಳ ಆಗ್ರಹ

ನೀರು ಸರಬರಾಜು ವ್ಯತ್ಯಯ ಸಂಭವ

ನೀರು ಸರಬರಾಜು (Water Supply) ನೌಕರರು ಮುಷ್ಕರ ನಡೆಸಲು ನಿರ್ಧರಿಸಿರುವುದರಿಂದ ಶಿವಮೊಗ್ಗ ನಗರದಲ್ಲಿ ಕುಡಿಯುವ ನೀರು ಪೂರೈಕೆಯಲ್ಲಿ ವ್ಯತ್ಯಯವಾಗುವ ಸಂಭವವಿದೆ.

JNNCE College VTU Ranking

Leave a Comment