SHIVAMOGGA LIVE NEWS, 4 JANUARY 2024
ಶಿವಮೊಗ್ಗ : ಭದ್ರಾ ಜಲಾಶಯದ (DAM) ಎಡದಂಡೆ ಮತ್ತು ಬಲದಂಡೆ ನಾಲೆಗಳಲ್ಲಿ ನೀರು ಹರಿಸಲು ದಿನಾಂಕ ನಿಗದಿಪಡಿಸಲಾಗಿದೆ. ಜ.4ರಿಂದ ಎಡದಂಡೆ ಮತ್ತು ಜ.8ರಿಂದ ಬಲದಂಡೆ ನಾಲೆಗೆ ನೀರು ಹರಿಸಲು ನಿರ್ಧರಿಸಲಾಗಿದೆ.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಅಧ್ಯಕ್ಷತೆಯಲ್ಲಿ ಮಲವಗೊಪ್ಪದ ಭದ್ರಾ ಅಚ್ಚುಕಟ್ಟು ಅಭಿವೃದ್ಧಿ ಪ್ರಾಧಿಕಾರ ಕಚೇರಿಯಲ್ಲಿ ನಡೆದ ಭದ್ರಾ ಯೋಜನಾ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ.
ಎಷ್ಟು ದಿನ ನೀರು ಹರಿಸಲಾಗುತ್ತೆ?
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಭದ್ರ ಕಾಡಾ ಅಧ್ಯಕ್ಷ ಡಾ. ಅಂಶುಮಂತ್, ಭದ್ರಾ ಜಲಾಶಯದ ನಾಲೆಗಳಿಗೆ ನಿರಂತರವಾಗಿ 120 ದಿನ ನೀರು ಹರಿಸಲಾಗುತ್ತದೆ. ನಾಲೆಗಳ ಮೂಲಕ ಒಟ್ಟು 32 ಟಿಎಂಸಿ ನೀರು ಹರಿಸಲಾಗುತ್ತದೆ. ಎಡದಂಡೆ ನಾಲೆಗೆ 380 ಕ್ಯೂಸೆಕ್, ಬಲದಂಡೆಗೆ 2650 ಕ್ಯೂಸೆಕ್ ನೀರು ಹರಿಸಲಾಗುತ್ತದೆ ಎಂದು ತಿಳಿಸಿದರು.
ರೈತರು ಯಾವುದೆ ವದಂತಿಗೆ ಕಿವಿಗೊಡದೆ ಉತ್ತಮ ಬೆಳೆ ಬೆಳೆಯಬಹುದು. ರೈತರಿಗೆ ಯಾವುದೆ ತೊಂದರೆ ಆಗದಂತೆ ನೀರು ಹರಿಸುವಂತೆ ನೀರಾವರಿ ಸಲಹಾ ಸಮಿತಿ ಅಧ್ಯಕ್ಷ, ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ.
– ಡಾ.ಅಂಶುಂತ್, ಭದ್ರಾ ಕಾಡ ಅಧ್ಯಕ್ಷ
ಪ್ರಸ್ತುತ ಜಲಾಶಯದಲ್ಲಿ 66.964 ಟಿಎಂಸಿ ನೀರು ಸಂಗ್ರಹವಿದೆ ಎಂದು ತಿಳಿಸಿದರು.
ಅಮೆರಿಕದಿಂದ ಆನ್‌ಲೈನ್ ಮೂಲಕ ಸಚಿವ ಮಧು ಬಂಗಾರಪ್ಪ ಸಭೆಯಲ್ಲಿ ಭಾಗವಹಿಸಿದ್ದರು. ವಿಧಾನ ಪರಿಷತ್ ಸದಸ್ಯೆ ಬಲ್ಕಿಷ್ ಬಾನು, ಕಾಡಾ ಆಡಳಿತಾಧಿಕಾರಿ ಸತೀಶ್, ತಾಂತ್ರಿಕ ವಿಭಾಗದ ಎಲ್‌ಡಿಒ ಪ್ರಶಾಂತ್, ನೀರಾವರಿ ಇಲಾಖೆ ಅಧಿಕಾರಿಗಳು ಇದ್ದರು. ಜಿಲ್ಲಾಧಿಕಾರಿಗಳು, ಜಿಲ್ಲಾ ರಕ್ಷಣಾಧಿಕಾರಿಗಳು ಕೂಡ ಆನ್‌ಲೈನ್‌ನಲ್ಲಿ ಭಾಗವಹಿಸಿದ್ದರು.
ಇದನ್ನೂ ಓದಿ » ಶಿವಮೊಗ್ಗ ಪಾಲಿಕೆ ಸ್ಥಬ್ಧ, ಕಚೇರಿಗಳು ಬಂದ್, ನೌಕರರಿಂದ ದಿಢೀರ್ ಪ್ರತಿಭಟನೆ