SHIVAMOGGA LIVE NEWS | 6 JANUARY 2024
SHIMOGA : ಭದ್ರಾ ಜಲಾಶಯದ ಎಡದಂಡೆ ಮತ್ತು ಬಲದಂಡೆ ನಾಲೆಗಳಲ್ಲಿ ನೀರು ಹರಿಸಲು ದಿನಾಂಕ ನಿಗದಿಪಡಿಸಲಾಗಿದೆ. ಜ.10ರಿಂದ ಎಡದಂಡೆ ಮತ್ತು ಜ.20ರಿಂದ ಬಲದಂಡೆ ನಾಲೆಗೆ ನೀರು ಹರಿಸಲು ನಿರ್ಧರಿಸಲಾಗಿದೆ.
ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಅಧ್ಯಕ್ಷತೆಯಲ್ಲಿ ಮಲವಗೊಪ್ಪದ ಭದ್ರಾ ಅಚ್ಚುಕಟ್ಟು ಅಭಿವೃದ್ಧಿ ಪ್ರಾಧಿಕಾರ ಕಚೇರಿಯಲ್ಲಿ ನಡೆದ ಭದ್ರಾ ಯೋಜನಾ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ.
ಆನ್ ಆಫ್ ಮಾದರಿ
ನಾಲೆಗಳಿಗೆ ನೀರು ಹರಿಸಲು ಆನ್ ಆಫ್ ಮಾದರಿ ಅನುಸರಿಸಲು ತೀರ್ಮಾನಿಸಲಾಗಿದೆ. ಎಡದಂಡ ನಾಲೆಗೆ ಜ.10 ರಿಂದ ನೀರು ಹರಿಸಲಾಗುತ್ತೆ. ಜ.10 ರಿಂದ 16 ದಿನ ಆನ್ ಮತ್ತು 15 ದಿನ ಆಫ್. ನಂತರ 17 ದಿನ ಆನ್, 15 ದಿನ ಆಫ್. 18 ದಿನ ಆನ್ 15 ದಿನ ಆಫ್. 20 ದಿನ ಆನ್, 15 ದಿನ ಆಫ್ ಇರುತ್ತದೆ.
ಬಲದಂಡ ನಾಲೆಗೆ ಜ.20 ರಿಂದ ನೀರು ಹರಿಸಲಾಗುತ್ತದೆ. ಮೊದಲಿಗೆ 12 ದಿನ ಆನ್, 20 ದಿನ ಆಫ್. 12 ದಿನ ಆನ್ 20 ದಿನ ಆಫ್. 14 ದಿನ ಆನ್ 20 ದಿನ ಆಫ್. 15 ದಿನ ಆನ್ 20 ದಿನ ಆಫ್ ಇರಲಿದೆ.
ಮಳೆ ಕೊರೆತೆ ಡ್ಯಾಂನಲ್ಲಿ ನೀರು ಕಡಿಮೆ
ಮಳೆ ಪ್ರಮಾಣ ಕಡಿಮೆಯಾದ್ದರಿಂದ ಭದ್ರಾ ಜಲಾಶಯದಲ್ಲಿ ನೀರಿನ ಕೊರತೆಯಾಗಿದೆ. ಜಲಾಶಯದ ಗರಿಷ್ಟ ನೀರಿನ ಸಂಗ್ರಹಣಾ ಮಟ್ಟ 186 ಅಡಿ, ಪ್ರಸ್ತುತ 35.370 ಅಡಿ ಸಂಗ್ರಹವಿದೆ. ಪ್ರಸ್ತತ ಜಲಾಶಯದಲ್ಲಿ ನೀರಾವರಿ ಬಳಕೆಗೆ 12.50 ಟಿಎಂಸಿ ನೀರಿದೆ. ಬಲದಂಡ ನಾಲೆಗೆ 2650 ಕ್ಯೂಸೆಕ್, ಎಡದಂಡ ನಾಲೆಗೆ 380 ಕ್ಯೂಸೆಕ್ ಮತ್ತು ಗೊಂದಿ ನಾಲೆ ಸೇರಿದಂತೆ ಪ್ರತಿದಿನ 0.27 ಟಿಎಂಸಿ ನೀರು ಹರಿಸಿದಲ್ಲಿ 47 ದಿನಗಳಿಗೆ ನೀರು ಹರಿಸಬಹುದಾಗಿದೆ ಎಂದು ಸಭೆಯಲ್ಲಿ ಅಧಿಕಾರಿಗಳು ತಿಳಿಸಿದರು.
ಇದನ್ನೂ ಓದಿ – ಶಿವಮೊಗ್ಗದಲ್ಲಿ ಎರಡು ದಿನ ರೈತರಿಗೆ ತರಬೇತಿ, ಏನೆಲ್ಲ ತರಬೇತಿ ನೀಡಲಾಗುತ್ತದೆ? ಅರ್ಜಿ ಸಲ್ಲಿಸುವುದು ಹೇಗೆ?
ಸಭೆಯಲ್ಲಿ ಶಾಸಕರಾದ ಎಸ್.ಎನ್.ಚನ್ನಬಸಪ್ಪ, ಶಾರದಾ ಪೂರ್ಯಾನಾಯ್ಕ, ಲತಾ ಮಲ್ಲಿಕಾರ್ಜುನ್, ಬಿ.ಕೆ.ಸಂಗಮೇಶ್, ಡಿ.ಜೆ. ಶಾಂತನಗೌಡ, ಬಸವರಾಜಪ್ಪ, ಶ್ರೀನಿವಾಸ್, ಬಸವರಾಜು ಶಿವಗಂಗ, ಕಾಡಾ ಮುಖ್ಯ ಇಂಜಿನಿಯರ್ ಶಿವಾನಂದ ಬಣಕಾರ್, ಆಡಳಿತಾಧಿಕಾರಿ ಮುರಳೀಧರ್, ಅಭಿಯಂತರರು, ಅಧಿಕಾರಿಗಳು, ರೈತ ಮುಖಂಡರು ಉಪಸ್ಥಿತರಿದ್ದರು.
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200