ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
ಶಿವಮೊಗ್ಗ ಲೈವ್.ಕಾಂ | SHIMOGA NEWS | 25 JUNE 2021
ಶಿವಮೊಗ್ಗ ಜಿಲ್ಲೆಯಾದ್ಯಂತ ವೀಕೆಂಡ್ ಕರ್ಫ್ಯೂ ಜಾರಿಯಾಗಲಿದೆ. ಶುಕ್ರವಾರ ಸಂಜೆ 7 ಗಂಟೆಯಿಂದೆ ಸೋಮವಾರ ಬೆಳಗ್ಗೆ 5 ಗಂಟೆವರೆಗೆ ವೀಕೆಂಡ್ ಕರ್ಫ್ಯೂ ಇರಲಿದೆ ಎಂದು ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ತಿಳಿಸಿದ್ದಾರೆ.
ಯಾವುದಕ್ಕೆಲ್ಲ ಅವಕಾಶವಿದೆ? ಯಾವುದಕ್ಕಿಲ್ಲ?
ವಾರಾಂತ್ಯ ಕರ್ಫ್ಯೂ ಅವಧಿಯಲ್ಲಿ ಅವಶ್ಯಕ ಮತ್ತು ತುರ್ತು ಚಟುವಟಿಕೆಗಳನ್ನು ಹೊರತುಪಡಿಸಿ ಬೇರೆಲ್ಲಾ ಚಟುವಟಿಕೆಗಳಿಗೆ ನಿರ್ಬಂಧ ವಿಧಿಸಲಾಗಿದೆ.
ದಿನದ 24ಗಂಟೆ ಕಾರ್ಯ ನಿರ್ವಹಿಸಬೇಕಾದ, ತುರ್ತು ಹಾಗೂ ಅವಶ್ಯಕ ಸೇವೆಗಳನ್ನು ಒದಗಿಸುವ ಎಲ್ಲಾ ಕೈಗಾರಿಕೆಗಳು, ಕಂಪೆನಿಗಳು ಮತ್ತು ಸಂಸ್ಥೆಗಳು ಕಾರ್ಯನಿರ್ವಹಿಸಲು ಅನುಮತಿ ನೀಡಲಾಗಿದೆ. ಅಂತಹ ಸಂಸ್ಥೆಗಳು ಸಿಬ್ಬಂದಿಗಳಿಗೆ ಕಡ್ಡಾಯವಾಗಿ ಗುರುತಿನ ಚೀಟಿಯನ್ನು ಒದಗಿಸಿರಬೇಕು.
ಟೆಲಿಕಾಂ ಮತ್ತು ಇಂಟರ್ ನೆಟ್ ಸೇವೆ ಒದಗಿಸುವ ಸಂಸ್ಥೆಗಳ ಸಿಬ್ಬಂದಿಗಳ ವಾಹನ ಸಂಚಾರಕ್ಕೆ ಅವಕಾಶವಿದೆ.
ಆಸ್ಪತ್ರೆಗೆ ತೆರಳಬೇಕಾದ ರೋಗಿಗಳು, ಕೋವಿಡ್ ಲಸಿಕೆ ಪಡೆಯಲು ತೆರಳುವವರ ಸಂಚಾರಕ್ಕೆ ಅನುಮತಿಯಿದೆ.
ದಿನಸಿ, ತರಕಾರಿ, ಹಾಲು ಅವಶ್ಯಕ ವಸ್ತುಗಳ ಮಾರಾಟ ಮಳಿಗೆಗಳಿಗೆ ಬೆಳಿಗ್ಗೆ 6 ರಿಂದ ಮಧ್ಯಾಹ್ನ 2ರವರೆಗೆ ಅವಕಾಶವಿದೆ. ತಳ್ಳುಗಾಡಿ ಮಾರಾಟಗಾರರು ಸಹ ಈ ಅವಧಿಯಲ್ಲಿ ವ್ಯಾಪಾರ ಮಾಡಬಹುದು.
ಮದ್ಯ ಮಾರಾಟ ಅಂಗಡಿಗಳಿಂದ ಪಾರ್ಸೆಲ್ ಮಾತ್ರ ಬೆಳಿಗ್ಗೆ 6 ರಿಂದ ಮಧ್ಯಾಹ್ನ 2ರವರೆಗೆ ಕೊಂಡೊಯ್ಯಬಹುದು.
ಎಲ್ಲಾ ರೀತಿಯ ಸಾಮಾಗ್ರಿಗಳ ಹೋಂ ಡೆಲಿವರಿಗೆ ದಿನವಿಡೀ ಅವಕಾಶವಿದೆ. ರೆಸ್ಟೋರೆಂಟ್‍ಗಳಲ್ಲಿ ಪಾರ್ಸೆಲ್‍ಗೆ ಮಾತ್ರ ಅವಕಾಶವಿದೆ.
ಈಗಾಗಲೇ ನಿಗದಿಯಾಗಿರುವ ವಿವಾಹ ಕಾರ್ಯಕ್ರಮವನ್ನು ಸರ್ಕಾರದ ಮಾರ್ಗಸೂಚಿ ಪ್ರಕಾರ, 40 ಮಂದಿಗೆ ಮೀರದಂತೆ ಮನೆಯಲ್ಲಿ ನೆರವೇರಿಸಬಹುದು.
ಕೋವಿಡ್ ಮಾರ್ಗಸೂಚಿಯನ್ನು ಪಾಲಿಸಿಕೊಂಡು ಗರಿಷ್ಟ 5 ಮಂದಿಗೆ ಸೀಮಿತವಾಗಿ ಅಂತ್ಯಸಂಸ್ಕಾರ ನಡೆಸಲು ಅನುಮತಿ ನೀಡಲಾಗಿದೆ.
ಸಾರ್ವಜನಿಕರು ಸರ್ಕಾರದ ಮಾರ್ಗಸೂಚಿಯನ್ನು ಕಟ್ಟುನಿಟ್ಟಿನಿಂದ ಪಾಲಿಸುವಂತೆ ಅವರು ಸಾರ್ವಜನಿಕರಿಗೆ ಮನವಿ ಮಾಡಿದ್ದಾರೆ.
(ಶಿವಮೊಗ್ಗ ಲೈವ್‍ನ ನಮ್ಮೂರ ನ್ಯೂಸ್ – ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭಗಳು ಸೇರಿದಂತೆ ಸುದ್ದಿಯಾಗುವ ಸಂಗತಿಗಳಿದ್ದರೆ ವಾಟ್ಸಪ್ ಮಾಡಿ. ನಿಮ್ಮೂರ ಸುದ್ದಿ ಜಿಲ್ಲೆಯ ಜನಕ್ಕೆ ತಲುಪಲಿ.)
ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ [email protected]
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422