ಶಿವಮೊಗ್ಗ ಡಿಸಿ ಕಚೇರಿ ಮುಂದೆ ನ್ಯಾಯದೇವತೆ, ಪೊಲೀಸ್, ಯೋಧರ ಸಮವಸ್ತ್ರದಲ್ಲಿ ಮಕ್ಕಳ ಅಣಕು ಪ್ರದರ್ಶನ

ನಿಮ್ಮ ಊರಿನ ಸುದ್ದಿಗಳನ್ನು ನಮಗೆ ವಾಟ್ಸಪ್ ಮಾಡಿ 7411700200

ಶಿವಮೊಗ್ಗ ಲೈವ್.ಕಾಂ | SHIMOGA NEWS | 20 ಸೆಪ್ಟೆಂಬರ್ 2021

ಅತ್ಯಾಚಾರಿಗಳಿಗೆ ಕಠಿಣ ಶಿಕ್ಷೆ ವಿಧಿಸಬೇಕು, ಮಹಿಳೆಯರಿಗೆ ರಕ್ಷಣೆ ಒದಗಿಸಬೇಕು ಅಂತಾ ಆಗ್ರಹಿಸಿ ಶಿವಮೊಗ್ಗ ಜಿಲ್ಲಾಧಿಕಾರಿ ಕಚೇರಿ ಮುಂದೆ ಮಕ್ಕಳು ಅಣಕು ಪ್ರದರ್ಶನ ಮಾಡಿದರು.

ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾದ ವತಿಯಿಂದ ಆಯೋಜಿಸಿದ್ದ ಪ್ರತಿಭಟನೆಯಲ್ಲಿ, ಪೊಲೀಸ್ ಮತ್ತು ಯೋಧರ ಸಮವಸ್ತ್ರ, ನ್ಯಾಯದೇವತೆಯ ಧಿರಿಸು ಧರಿಸಿದ್ದ ಮಕ್ಕಳು, ಮಹಿಳೆಯರ ರಕ್ಷಣೆ ಕುರಿತು ಅಣಕು ಪ್ರದರ್ಶನ ಮಾಡಿದರು.

ದೌರ್ಜನ್ಯ ತಡೆಗೆ ಆಗ್ರಹ

ದೇಶದಲ್ಲಿ ಲೈಂಗಿಕ ದೌರ್ಜನ್ಯ, ಕೊಲೆ, ಅತ್ಯಾಚಾರ, ಲೈಂಗಿಕ ಟೀಕೆ ಪ್ರಕರಣಗಳು ಹೆಚ್ಚುತ್ತಿವೆ. ಕಳೆದೊಂದು ವರ್ಷದಲ್ಲಿ ದೌರ್ಜನ್ಯ ಪ್ರಕರಣಗಳು ಶೇ.43ರಷ್ಟು ಏರಿಕೆಯಾಗಿವೆ. ದೌರ್ಜನ್ಯ ಎಸಗುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಪ್ರತಿಭಟನಾನಿರತರು ಆಗ್ರಹಿಸಿದರು.

ಇನ್ನು, ದೌರ್ಜನ್ಯಕ್ಕೊಳಗಾದ ಮಹಿಳೆಯರಿಗೆ ನೆರವು ನೀಡಬೇಕಾದ ಸಾಂತ್ವನ ಕೇಂದ್ರಗಳನ್ನು, ಆರ್ಥಿಕ ಕೊರತೆಯಿಂದ ಸ್ಥಗಿತಗೊಳಿಸಲು ರಾಜ್ಯ ಸರ್ಕಾರ ಮುಂದಾಗಿದೆ. ಇದಕ್ಕೆ ವೆಲ್ಫೇರ್ ಪಾರ್ಟಿ ಮುಖಂಡರು ವಿರೋಧ ವ್ಯಕ್ತಪಡಿಸಿದರು. ಅಲ್ಲದೆ ಮಹಿಳೆಯರ ಸುರಕ್ಷತೆಗಾಗಿ ವಿಶೇಷ ಕಾನೂನು ಜಾರಿಗೊಳಿಸಬೇಕು ಎಂದು ಆಗ್ರಹಿಸಿದರು.

ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾದ ಜಿಲ್ಲಾ ಸಂಚಾಲಕಿ ಆಯಿಷಾ ಏಜಾಜ್, ಜಿಲ್ಲಾಧ್ಯಕ್ಷ ಮುಜಾಮ್ಮಿಲ್ ಅನ್ವರ್, ಜಿಲ್ಲಾ ಕಾರ್ಯದರ್ಶಿ ಜೀಷಾನ್ ಸೇರಿದಂತೆ ಹಲವರು ಪ್ರತಿಭಟನೆಯಲ್ಲಿದ್ದರು.

ADVT JULY NANJAPPA HOSPITAL HOME LAB TESTING

(ಶಿವಮೊಗ್ಗ ಲೈವ್.ಕಾಂ ನಮ್ಮೂರ ನ್ಯೂಸ್ ವಿಭಾಗ – ನಿಮ್ಮೂರ ನ್ಯೂಸ್‍ಗೆ ನೀವೇ ವರದಿಗಾರರು. ನಿಮ್ಮೂರ ಪ್ರಮುಖ ಘಟನೆಗಳನ್ನು ನೀವೇ ವರದಿ ಮಾಡಬಹುದು. ಫೋಟೊ, ವಿಡಿಯೋ ಸಹಿತ ವರದಿಯನ್ನು ವಾಟ್ಸಪ್ ಅಥವಾ ಈ ಮೇಲ್ ಮಾಡಬಹುದು)

ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494

ವಾಟ್ಸಪ್ ಮೂಲಕ ಸುದ್ದಿಗಾಗಿ 7411700200

ಹೆಚ್ಚಿನ Shimoga News, Shivamogga News ಮತ್ತು SHIVAMOGGA CITY ಸುದ್ದಿಗಳಿಗಾಗಿ ಶಿವಮೊಗ್ಗ ಲೈವ್ ನೋಡಿ.
Kalleshwara-Enterprises.webp

© ಶಿವಮೊಗ್ಗ ಲೈವ್‌ : ಸೆಪ್ಟೆಂಬರ್ 20, 2021

Leave a Comment