SHIMOGA : ವಿಧಾನಸಭೆ ಚುನಾವಣೆ ಮುಗಿದಿದ್ದು ಅಭ್ಯರ್ಥಿಗಳ ಭವಿಷ್ಯ ನಿರ್ಧರಿಸುವ ಮತ ಯಂತ್ರಗಳು ಸ್ಟ್ರಾಂಗ್ ರೂಂ ಸೇರಿವೆ. ಶಿವಮೊಗ್ಗದ ಸಹ್ಯಾದ್ರಿ ಕಾಲೇಜಿನಲ್ಲಿ ಸ್ಟ್ರಾಂಗ್ ರೂಂನ (Strong Room) ಸ್ಥಾಪಿಸಲಾಗಿದೆ.
ಹೇಗಿದೆ ಸ್ಟ್ರಾಂಗ್ ರೂಂ?
1ಮತದಾನದ ಬಳಿಕ ಆಯಾ ಕ್ಷೇತ್ರದಲ್ಲಿನ ಡಿಮಸ್ಟರಿಂಗ್ ಕೇಂದ್ರಗಳಿಗೆ ಮತ ಯಂತ್ರಗಳನ್ನು ಕೊಂಡೊಯ್ದು ಅಧಿಕಾರಿಗಳು ಒಪ್ಪಿಸಿದ್ದಾರೆ. ಕ್ಷೇತ್ರವಾರು ಮತ ಯಂತ್ರಗಳನ್ನು ಒಟ್ಟುಗೂಡಿಸಿ, ಶಿವಮೊಗ್ಗದ ಸಹ್ಯಾದ್ರಿ ಕಾಲೇಜಿನಲ್ಲಿ ಸ್ಥಾಪಿಸಲಾಗಿರುವ ಸ್ಟ್ರಾಂಗ್ ರೂಂಗೆ ತರಲಾಗಿದೆ.
2ಸಹ್ಯಾದ್ರಿ ಕಾಲೇಜಿನ ವಿವಿಧ ಕೊಠಡಿಗಳಲ್ಲಿ ಕ್ಷೇತ್ರವಾರು ಪ್ರತ್ಯೇಕವಾಗಿ ಮತ ಯಂತ್ರಗಳನ್ನು ಇರಿಸಲಾಗಿದೆ. ಬೆಳಗಿನ ಜಾವದ ತನಕ ಸ್ಟ್ರಾಂಗ್ ರೂಂನಲ್ಲಿ ಮತ ಯಂತ್ರಗಳನ್ನು ಜೋಡಿಸುವ ಕೆಲಸ ನಡೆಯಿತು. ಈ ವೇಳೆ ಚುನಾವಣಾಧಿಕಾರಿಗಳು, ಭದ್ರತಾ ಸಿಬ್ಬಂದಿ ಹಾಜರಿದ್ದರು. ಪ್ರತಿಯೊಂದರ ವಿಡಿಯೋ ಚಿತ್ರೀಕರಣವನ್ನು ಮಾಡಲಾಗಿದೆ.
3ಸ್ಟ್ರಾಂಗ್ ರೂಂ (Strong Room) ಕೊಠಡಿಯೊಳಗೆ ಮತಗಟ್ಟೆ ಸಂಖ್ಯೆವಾರು ಮತ ಯಂತ್ರಗಳನ್ನು ಜೋಡಿಸಿ ಬಾಗಿಲಿಗೆ ಬೀಗ ಹಾಕಿ, ಸೀಲ್ ಮಾಡಲಾಗಿದೆ. ವಿದ್ಯುತ್ ಸಂಪರ್ಕವನ್ನು ಕಡಿತಗೊಳಿಸಲಾಗಿದೆ. ಇನ್ನು, ಪ್ರತಿ ಬಾಗಿಲು, ಕಿಟಕಿ ಸಂಪೂರ್ಣ ಬಂದ್ ಆಗುವಂತೆ ಪ್ಲೇ ವುಡ್ ಮುಚ್ಚಿ, ಅದಕ್ಕೆ ಮೊಳೆ ಹೊಡೆಯಲಾಗಿದೆ.
4ಸ್ಟ್ರಾಂಗ್ ರೂಂ ಸುತ್ತಲು ಸಿಆರ್‌ಪಿಎಫ್ ಯೋಧರನ್ನು ನಿಯೋಜನೆ ಮಾಡಲಾಗಿದೆ. ರಾಜ್ಯ ಪೊಲೀಸರು ಕೂಡ ಭದ್ರತೆಯ ಜವಾಬ್ದಾರಿ ನಿಭಾಯಿಸುತ್ತಿದ್ದಾರೆ. ರಾತ್ರಿ ಹೊತ್ತಿನಲ್ಲಿ ಸ್ಟ್ರಾಂಗ್ ರೂಂ ಸುತ್ತಲು ಯಾರೊಬ್ಬರೂ ಸುಳಿಯದಂತೆ ನೋಡಿಕೊಳ್ಳಲು ಬೆಳಕಿನ ವ್ಯವಸ್ಥೆ ಮಾಡಲಾಗಿದೆ. ಸಹ್ಯಾದ್ರಿ ಕಾಲೇಜು ಕಟ್ಟಡದ ಸುತ್ತಲು ಲೈಟ್‌ಗಳನ್ನು ಅಳವಡಿಸಲಾಗಿದೆ. WATCH VIDEO
ಹೆಚ್ಚಿನ ಮಾಹಿತಿಗೆ ಇಲ್ಲಿ CLICK ಮಾಡಿ5ಸ್ಟ್ರಾಂಗ್ ರೂಂ ಇರುವ ಕಟ್ಟಡದೊಳಗೆ ಯಾರಂದರೆ ಅವರು ಪ್ರವೇಶಕ್ಕೆ ಅವಕಾಶ ಇರುವುದಿಲ್ಲ. ನಿಗದಿತ ಚುನಾವಣಾಧಿಕಾರಿಗಳಗೆ ಮಾತ್ರ ಕಟ್ಟಡದೊಳಗೆ ಹೋಗಿ ಬರಲು ಅವಕಾಶವಿರುತ್ತದೆ. ಮತ ಎಣಿಕೆ ದಿನವ ಪಾಸ್ ಇದ್ದವರಿಗೆ ಮಾತ್ರ ಒಳ ಹೋಗಲು ಅವಕಾಶವಿರಲಿದೆ.
ಲೋಕಲ್ ಸುದ್ದಿಗಳು ಲೋಕಕ್ಕೆ ತಿಳಿಸಬೇಕು ಅಂತಾ ನ್ಯೂಸ್ ಚಾನೆಲ್ ದುನಿಯಾದಿಂದ ಹೊರ ಬಂದು ಶಿವಮೊಗ್ಗ ಲೈವ್ ಕಟ್ಟಿದ್ದೇವೆ. ಸ್ಥಳೀಯ ಪತ್ರಿಕೆ, ಕೇಬಲ್ ಚಾನೆಲ್, ರಾಜ್ಯಮಟ್ಟದ ಪತ್ರಿಕೆ, ನ್ಯೂಸ್ ಚಾನೆಲ್’ಗಳ ಬೆಂಗಳೂರು ಕಚೇರಿಯಲ್ಲಿ ವರ್ಷಗಟ್ಟಲೆ ಕೆಲಸ ಮಾಡಿದ್ದೇನೆ.
ಈ ಫೀಲ್ಡಲ್ಲಿ ಹತ್ತು ವರ್ಷಕ್ಕೂ ಹೆಚ್ಚು ಕಾಲದ ಅನುಭವವಿದೆ. ಹಾಗಾಗಿ ಪೇಪರ್, ಟಿವಿಗಳಿಗಿಂತಲೂ ವಿಭಿನ್ನವಾಗಿ ಸುದ್ದಿ ಕೊಡಬೇಕು ಅನ್ನುವ ಹಂಬಲ. ಅದರ ಪ್ರಯತ್ನ ನಿರಂತರವಾಗಿದೆ.ಕ್ವಾಲಿಟಿ ಮತ್ತು ನಿಖರತೆಗೆ ಮೊದಲ ಆದ್ಯತೆ. ಸುದ್ದಿಯ ಒಳಗೆ ನನ್ನ ಅಭಿಪ್ರಾಯ ಹೇರುವುದಕ್ಕೆ ಇಷ್ಟವಿಲ್ಲ. ಸುದ್ದಿಯನ್ನು ಸುದ್ದಿಯಾಗಷ್ಟೆ ಕೊಡಬೇಕು ಎಂಬುದು ನನ್ನ ವಾದ. ಹೀಗಿದ್ದೂ ಕೆಲವೊಮ್ಮೆ ಸುದ್ದಿ ಕೆಳಗೆ ‘ಡ್ಯಾಷ್ ಡ್ಯಾಷ್ ಡ್ಯಾಷ್’ ಅಂತೆಲ್ಲ ಕಮೆಂಟುಗಳು ಬರುತ್ತವೆ. ಆರಂಭದಲ್ಲಿದ್ದ ಟೆಂಪರ್ ಈಗಿಲ್ಲ. ಹಾಗಾಗಿ ರಿಯಾಕ್ಟ್ ಮಾಡಲ್ಲ..!ನಿಮ್ಮೂರ ಸುದ್ದಿಗಳಿದ್ದರೆ ತಿಳಿಸಿ. ಹಣ ಪಡೆದು ಸುದ್ದಿ ಮಾಡುವ ಹವ್ಯಾಸ, ಅಭ್ಯಾಸ ಎರಡೂ ಇಲ್ಲ. ಇನ್ನಷ್ಟು ವಿಭಿನ್ನ ಪ್ರಯತ್ನಗಳು, ನಮ್ಮೂರನ್ನು ಮತ್ತಷ್ಟು ಸುತ್ತಬೇಕು, ನಮ್ಮೂರ ಬಗ್ಗೆ ತಿಳಿದು ಜನರಿಗೆಲ್ಲ ತಿಳಿಸಬೇಕು ಅನ್ನುವ ತವಕವಿದೆ.ಅಂದಹಾಗೆ, ಹೊಸ ಐಡಿಯಾಗಳಿದ್ದರೆ, ಸಲಹೆಗಳಿದ್ದರೆ ತಿಳಿಸಿ.. ‘ಡ್ಯಾಷ್ ಡ್ಯಾಷ್’ ಬಯ್ಯೋದಿದ್ದರೆ ದಯವಿಟ್ಟು ವಾಟ್ಸಪ್’ನಲ್ಲಿ ಮೆಸೇಜು ಮಾಡಿ, ಸಾಕು..! ನನ್ನ ಮೊಬೈಲ್ ನಂಬರ್ 9964634494. ಸಿಕ್ಕಾಗ ತಪ್ಪದೆ ಮಾತಾಡಿಸಿ. ನಿಮ್ಮ ಸ್ನೇಹ ನಂಗೆ ಅಮೂಲ್ಯ.ಶಿವಮೊಗ್ಗದ ಸುದ್ದಿಗಾಗಿ ನಿರಂತರವಾಗಿ ಶಿವಮೊಗ್ಗ ಲೈವ್.ಕಾಂ ಓದುತ್ತಿರಿ