‘ರೈತರಿಂದ ಸಾಲ ವಸೂಲಾತಿ ನಿಲ್ಲಬೇಕು, ಪ್ರತಿ ಎಕರೆಗೆ 25 ಸಾವಿರ ರೂ. ಪರಿಹಾರ ನೀಡಬೇಕುʼ

ಶಿವಮೊಗ್ಗ
LIVE

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ (HOME LOAN)

ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!
ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ ಸೌಲಭ್ಯ.

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ:

99721 94422
*ಷರತ್ತುಗಳು ಅನ್ವಯಿಸುತ್ತವೆ

SHIVAMOGGA LIVE NEWS | 20 SEPTEMBER 2023

ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್‌ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:

SHIMOGA : ರಾಜ್ಯ ಸರ್ಕಾರ 161 ತಾಲೂಕುಗಳ ಜತೆಗೆ ಉಳಿದ 74 ತಾಲೂಕುಗಳನ್ನು ಬರಪೀಡಿತ (Drought) ಎಂದು ಘೋಷಿಸುವಂತೆ ರಾಜ್ಯ ರೈತ ಸಂಘದ ಅಧ್ಯಕ್ಷ ಎಚ್.ಆರ್.ಬಸವರಾಜಪ್ಪ ಆಗ್ರಹಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯಾದ್ಯಂತ ಬರದ ಛಾಯೆ ಆವರಿಸಿದೆ. ರಾಜ್ಯ ಸರ್ಕಾರ ಕೇವಲ 161 ತಾಲೂಕುಗಳನ್ನು ಬರಪೀಡಿತ (Drought) ಎಂದು ಘೋಷಿಸಿದೆ. ಇದು ಸರಿಯಾದ ಕ್ರಮವಲ್ಲ. ಕೇಂದ್ರದ ಅನುಮತಿಗೆ ಕಾಯದೆ ಇಡೀ ರಾಜ್ಯವನ್ನು ಬರಪೀಡಿತ ಎಂದು ಘೋಷಿಸಬೇಕು ಎಂದು ಆಗ್ರಹಿಸಿದರು.

ರೈತರಿಗೆ ಪ್ರತಿ ಎಕರೆಗೆ 25 ಸಾವಿರ ಪರಿಹಾರ ನೀಡಬೇಕು. ಬೆಳೆ ವಿಮೆ ಆಧರಿಸಿ ಮಧ್ಯಂತರ ಪರಿಹಾರ ಘೋಷಿಸಬೇಕು. ಬೇಸಿಗೆ ವೇಳೆ ಬೆಳೆಗಳಿಗೆ ನೀರು ಪೂರೈಸಲು ಎಲ್ಲ ರೀತಿಯ ಅಗತ್ಯ ಕ್ರಮ ಕೈಗೊಳ್ಳಬೇಕು, ರೈತರಿಂದ ಸಾಲ ವಸೂಲಾತಿ ಕಿರುಕುಳ ನಿಲ್ಲಬೇಕು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಸೆ.25ರಂದು ಜಿಲ್ಲಾ ಹಾಗೂ ತಾಲೂಕು ಕೇಂದ್ರಗಳಲ್ಲಿ ರೈತ ಸಂಘದಿಂದ ಧರಣಿ ನಡೆಸಲಾಗುವುದು ಎಂದರು.

ಇದನ್ನೂ ಓದಿ – ಬರಪೀಡತ ತಾಲೂಕುಗಳ ಪಟ್ಟಿ ಪ್ರಕಟ, ಶಿವಮೊಗ್ಗ ಜಿಲ್ಲೆಯ ಪರಿಸ್ಥಿತಿ ಏನು?

ಪತ್ರಿಕಾಗೋಷ್ಠಿಯಲ್ಲಿ ಪಿ.ಡಿ.ಮಂಜಪ್ಪ, ಕೆ.ರಾಘವೇಂದ್ರ, ಎಸ್.ಶಿವಮೂರ್ತಿ, ಸಿ.ಚಂದ್ರಪ್ಪ, ಕಸಟ್ಟಿ ರುದ್ರೇಶ್ ಮತ್ತಿತರರಿದ್ದರು.

ಇದನ್ನೂ ಓದಿ – ಅಡಿಕೆ ಧಾರಣೆ | 20 ಸೆಪ್ಟೆಂಬರ್‌ 2023 | ಎಲ್ಲೆಲ್ಲಿ ಎಷ್ಟಿದೆ ಅಡಿಕೆ ರೇಟ್?

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment