ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
ಶಿವಮೊಗ್ಗ ಲೈವ್.ಕಾಂ | SHIMOGA NEWS | 8 MARCH 2021
ಮಾಸ್ಕ್ ಹಾಕದೆ ಇದ್ದರೂ, ಸಾಮಾಜಿಕ ಅಂತರ ಕಾಪಾಡದಿದ್ದರೂ ಮುಖ್ಯಮಂತ್ರಿ, ಸಚಿವರು, ಸಂಸದರ ವಿರುದ್ಧ ಅಧಿಕಾರಿಗಳು ಶಿವಮೊಗ್ಗದಲ್ಲಿ ವಿದ್ಯಾರ್ಥಿ ಸಂಘಟನೆ ಆಕ್ರೋಶ ವ್ಯಕ್ತಪಡಿಸಿದೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ವಿದ್ಯಾರ್ಥಿ ಸಂಘಟನೆ ಮುಖಂಡ ವಿನಯ್ ರಾಜವತ್, ಮಾಸ್ಕ್ ಧರಿಸದೆ ಇರುವ 12 ಸಾವಿರ ಮಂದಿ ವಿರುದ್ಧ ಪ್ರಕರಣ ದಾಖಲು ಮಾಡಲಾಗಿದೆ. 20 ಲಕ್ಷ ರೂ. ದಂಡ ವಸೂಲಿ ಮಾಡಲಾಗಿದೆ. ಆದರೆ ಇದೇ ಅವಧಿಯಲ್ಲಿ ಮುಖ್ಯಮಂತ್ರಿ, ಸಚಿವರು, ಸಂಸದರು ಮಾಸ್ಕ್ ಇಲ್ಲದೆ, ಸಾಮಾಜಿಕ ಅಂತರ ಕಾಪಾಡದೆ ಸಭೆ, ಸಮಾರಂಭಗಳನ್ನು ಮಾಡಿದ್ದಾರೆ ಎಂದು ಆರೋಪಿಸಿದರು.
ರಾಜ್ಯದಲ್ಲಿ ಜನಪ್ರತಿನಿಧಿಗಳಿಗೆ ಒಂದು ಕಾನೂನು, ಜನರಿಗೆ ಒಂದು ಕಾನೂನು ಇದೆಯಾ ಎಂದು ವಿನಯ್ ರಾಜವತ್ ಪ್ರಶ್ನಿಸಿದರು.
ವೆಂಕಟೇಶ್ ನಾಯ್ಕ್, ಶಶಿಕಾಂತ್, ಸೈಯದ್ ಶೋಯಬ್ ಸೇರಿದಂತೆ ಹಲವರು ಸುದ್ದಿಗೋಷ್ಠಿಯಲ್ಲಿದ್ದರು.
ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ [email protected]
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422