ಶಿವಮೊಗ್ಗದಲ್ಲಿ ಹೆಂಡತಿ ಜೊತೆ ಲಾಡ್ಜ್‌ಗೆ ಬಂದ ವ್ಯಕ್ತಿ, ಬಾತ್‌ ರೂಂಗೆ ಹೋಗಿ ಹೊರ ಬಂದಾಗ ಕಾದಿತ್ತು ಶಾಕ್‌

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 27 APRIL 2023

SHIMOGA : ಲಾಡ್ಜ್‌ ರೂಂನಲ್ಲಿ (Lodge Room) ಪತಿಯನ್ನು ಲಾಕ್‌ ಮಾಡಿ, ಆತನ ಮೊಬೈಲ್‌ ಫೋನ್‌, ಪರ್ಸ್‌, ಬಟ್ಟೆ ಬ್ಯಾಗ್‌ ಸಹಿತ ಪತ್ನಿ ನಾಪತ್ತೆಯಾಗಿದ್ದಾಳೆ. ಪತ್ನಿಯನ್ನು ಹುಡುಕಿ ಕೊಡುವಂತೆ ಪತಿ ಪೊಲೀಸ್‌ ಠಾಣೆ ಮೆಟ್ಟಿಲೇರಿದ್ದಾನೆ.

Crime-News-General-Image

ಶಿವಮೊಗ್ಗ ಬಸ್‌ ನಿಲ್ದಾಣದ ಎದುರಿನ ಅಶೋಕ ಲಾಡ್ಜ್‌ನಲ್ಲಿ ಘಟನೆ ಸಂಭವಿಸಿದೆ. ಹಾವೇರಿ ಜಿಲ್ಲೆಯ ಶ್ರೀಕಾಂತ ಎಂಬುವವರು ತಮ್ಮ ಪತ್ನಿಯೊಂದಿಗೆ ಲಾಡ್ಜ್‌ನಲ್ಲಿ ರೂಂ (Lodge Room) ಮಾಡಿದ್ದಾಗ ಘಟನೆ ಸಂಭವಿಸಿದೆ.

ಇದನ್ನೂ ಓದಿ – ಶಿವಮೊಗ್ಗ ಜೈಲಿನಿಂದ ಪೊಲೀಸ್‌ ಭದ್ರತೆಯಲ್ಲಿ ಭದ್ರಾವತಿ ಠಾಣೆಗೆ ತೆರಳಿ ದೂರು ನೀಡಿದ ಕೈದಿ, ಕಾರಣವೇನು?

ಮಾವನ ಮನೆಗೆ ಬಂದಿದ್ದರು

ಶ್ರೀಕಾಂತ ತನ್ನ ಪತ್ನಿ ತೇಜಸ್ವಿನಿ ಜೊತೆ ಲಕ್ಕವಳ್ಳಿಯಲ್ಲಿನ ಮಾವನ ಮನೆಗೆ ಬಂದಿದ್ದರು. ಅಲ್ಲಿಂದ ತಮ್ಮೂರಿಗೆ ಹಿಂತಿರುಗುವಾಗ, ಶಿವಮೊಗ್ಗದಲ್ಲಿ ಲಾಡ್ಜ್‌ ರೂಂ ಮಾಡುವಂತೆ ಪತ್ನಿ ಒತ್ತಾಯಿಸಿದ್ದಾಳೆ. ಹಾಗಾಗಿ ಅಶೋಕ ಲಾಡ್ಜ್‌ನಲ್ಲಿ ಶ್ರೀಕಾಂತ ರೂಂ ಮಾಡಿದ್ದಾರೆ. ಸಂಜೆ ವೇಳೆಗೆ ಶ್ರೀಕಾಂತ್‌ ಬಾತ್‌ ರೂಂಗೆ ಹೋಗಿ ಹೊರಬಂದಾಗ ರೂಂನಲ್ಲಿ ಪತ್ನಿ ಇರಲಿಲ್ಲ. ರೂಂ ಬಾಗಿಲು ಹೊರಗಿನಿಂದ ಲಾಕ್‌ ಆಗಿತ್ತು ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ಇದನ್ನೂ ಓದಿ – ಸೊಳ್ಳೆ ಬತ್ತಿ ತರಲು ಹೋಗಿದ್ದಾಗ ಕಿರಿಕ್‌, ಯುವಕನ ಕೈಗೆ ಚಾಕುವಿನಿಂದ ಹಲ್ಲೆ ಆರೋಪ, ದೂರು, ಪ್ರತಿದೂರು ದಾಖಲು

ಮೊಬೈಲು, ಪರ್ಸು, ಬ್ಯಾಗ್‌ ಇರಲಿಲ್ಲ

ಶ್ರೀಕಾಂತನ ಪತ್ನಿ ತೇಜಸ್ವಿನಿ ಆತನ ಮೊಬೈಲ್‌ ಫೋನ್‌, ಫರ್ಸ್‌, ಬ್ಯಾಗನ್ನು ಎತ್ತಿಕೊಂಡು ರೂಂ ಬಾಗಿಲು ಲಾಕ್‌ ಮಾಡಿಕೊಂಡು ಹೋಗಿದ್ದಳು. ರೂಂ ಬಾಯ್‌ ಸಹಾಯದಿಂದ ಶ್ರೀಕಾಂತ್‌ ಬಾಗಿಲು ತೆಗೆಸಿ ಎಲ್ಲೆಡೆ ಹುಡುಕಾಡಿದ್ದಾರೆ. ತೇಜಸ್ವಿನಿ ತನ್ನದು ಮತ್ತು ಪತಿಯ ಮೊಬೈಲ್‌ ಫೋನುಗಳನ್ನು ಸ್ವಿಚ್‌ ಆಫ್‌ ಮಾಡಿದ್ದಾಳೆ. ದಿಕ್ಕು ತೋಚದೆ ಶ್ರೀಕಾಂತ್‌ ದೊಡ್ಡಪೇಟೆ ಠಾಣೆಯಲ್ಲಿ ದೂರು ನೀಡಿದ್ದಾನೆ. ಪ್ರಕರಣ ದಾಖಲಾಗಿದ್ದು ತನಿಖೆ ನಡೆಯುತ್ತಿದೆ.

shivamogga live news whatsappa number

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : April 27, 2023

ಸಹ್ಯಾದ್ರಿ ಉತ್ಸವ, ಸಮಗ್ರ ಪ್ರಶಸ್ತಿ ಇಂದಿರಾ ಗಾಂಧಿ ಮಹಿಳಾ ಕಾಲೇಜು ಮುಡಿಗೆ

ಸಹ್ಯಾದ್ರಿ ಉತ್ಸವ, ಸಮಗ್ರ ಪ್ರಶಸ್ತಿ ಇಂದಿರಾ ಗಾಂಧಿ ಮಹಿಳಾ ಕಾಲೇಜು ಮುಡಿಗೆ

ಮಾವನ ಕುತ್ತಿಗೆ ಸೀಳಿ ಕೊಲೆಗೆ ಯತ್ನಿಸಿದ ಅಳಿಯ, ಎಲ್ಲಿ? ಕಾರಣವೇನು?

ಮಾವನ ಕುತ್ತಿಗೆ ಸೀಳಿ ಕೊಲೆಗೆ ಯತ್ನಿಸಿದ ಅಳಿಯ, ಎಲ್ಲಿ? ಕಾರಣವೇನು?

ಗೆಜ್ಜೇನಹಳ್ಳಿಯಲ್ಲಿ ಹಿಟ್ ಅಂಡ್ ರನ್ ಅಪಘಾತ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು

ಗೆಜ್ಜೇನಹಳ್ಳಿಯಲ್ಲಿ ಹಿಟ್ ಅಂಡ್ ರನ್ ಅಪಘಾತ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು

ಶಿವಮೊಗ್ಗ ಜಿಲ್ಲೆಯಲ್ಲಿ ಮುಂದುವರೆದ ಮಳೆ, ಇವತ್ತು ಎಷ್ಟಿರಲಿದೆ ತಾಪಮಾನ?

ಶಿವಮೊಗ್ಗ ಜಿಲ್ಲೆಯಲ್ಲಿ ಮುಂದುವರೆದ ಮಳೆ, ಇವತ್ತು ಎಷ್ಟಿರಲಿದೆ ತಾಪಮಾನ?

ತೀರ್ಥಹಳ್ಳಿಯ ಕುಡುವಳ್ಳಿಯಲ್ಲಿ ಸಬ್‌ ಇನ್ಸ್‌ಪೆಕ್ಟರ್‌ ಸಚಿನ್‌ ಅಂತ್ಯಕ್ರಿಯೆ

ತೀರ್ಥಹಳ್ಳಿಯ ಕುಡುವಳ್ಳಿಯಲ್ಲಿ ಸಬ್‌ ಇನ್ಸ್‌ಪೆಕ್ಟರ್‌ ಸಚಿನ್‌ ಅಂತ್ಯಕ್ರಿಯೆ

ಇಂದಿನ ಪಂಚಾಂಗ, ಇವತ್ತು ಶುಭ ಸಮಯ ಎಷ್ಟೊತ್ತಿಗಿದೆ? ದಿನ ನಕ್ಷತ್ರ ಯಾವುದು?

ಇಂದಿನ ಪಂಚಾಂಗ, ಇವತ್ತು ಶುಭ ಸಮಯ ಎಷ್ಟೊತ್ತಿಗಿದೆ? ದಿನ ನಕ್ಷತ್ರ ಯಾವುದು?

ಶಿವಮೊಗ್ಗ ಜಿಲ್ಲೆಯ ರೈತರ ಮಕ್ಕಳಿಗೆ 10 ತಿಂಗಳು ತರಬೇತಿ, ಯಾರೆಲ್ಲ ಅರ್ಜಿ ಸಲ್ಲಿಸಬಹುದು?

ಶಿವಮೊಗ್ಗ ಜಿಲ್ಲೆಯ ರೈತರ ಮಕ್ಕಳಿಗೆ 10 ತಿಂಗಳು ತರಬೇತಿ, ಯಾರೆಲ್ಲ ಅರ್ಜಿ ಸಲ್ಲಿಸಬಹುದು?

ಹೊಂಬುಜದಲ್ಲಿ ಕುಂಕುಮೋತ್ಸವದ ಓಕಳಿಯಲ್ಲಿ ಮಿಂದೆದ್ದ ಭಕ್ತರು

ಹೊಂಬುಜದಲ್ಲಿ ಕುಂಕುಮೋತ್ಸವದ ಓಕಳಿಯಲ್ಲಿ ಮಿಂದೆದ್ದ ಭಕ್ತರು

ರೈಲಿಗೆ ಸಿಲುಕಿ 74 ವರ್ಷದ ವ್ಯಕ್ತಿ ಸಾವು, ಹೇಗಾಯ್ತು ಘಟನೆ?

ರೈಲಿಗೆ ಸಿಲುಕಿ 74 ವರ್ಷದ ವ್ಯಕ್ತಿ ಸಾವು, ಹೇಗಾಯ್ತು ಘಟನೆ?

ದ್ವಿತೀಯ ಪಿಯುಸಿ ಉತ್ತರಪತ್ರಿಕೆ ಮೌಲ್ಯಮಾಪನ ಬಹಿಷ್ಕರಿಸುವ ಎಚ್ಚರಿಕೆ, ಕಾರಣವೇನು?

ದ್ವಿತೀಯ ಪಿಯುಸಿ ಉತ್ತರಪತ್ರಿಕೆ ಮೌಲ್ಯಮಾಪನ ಬಹಿಷ್ಕರಿಸುವ ಎಚ್ಚರಿಕೆ, ಕಾರಣವೇನು?

Leave a Comment