ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ನವದೆಹಲಿ: ಆಗುಂಬೆ ಘಾಟ್ (Agumbe Ghat) ಮೂಲಕ ಹಾದುಹೋಗುವ ರಾಷ್ಟ್ರೀಯ ಹೆದ್ದಾರಿ-169ಎ ರಸ್ತೆಯನ್ನು ಎರಡು ಲೇನ್ ರಸ್ತೆ, ಎರಡೂ ಬದಿ ಪಾದಚಾರಿ ಮಾರ್ಗ ಸಹಿತ ವಿಸ್ತರಿಸುವ ಉದ್ದೇಶದಿಂದ ಕಾರ್ಯ ಸಾಧ್ಯತಾ ಅಧ್ಯಯನ ಹಾಗೂ ವಿವರವಾದ ಯೋಜನಾ ವರದಿ ತಯಾರಿಸಲು ಕೇಂದ್ರ ಭೂಸಾರಿಗೆ ಇಲಾಖೆ ಟೆಂಡರ್ ಆಹ್ವಾನಿಸಿದೆ.
ಡಿಪಿಆರ್ ವ್ಯಾಪ್ತಿಯು ನಿರ್ದಿಷ್ಟವಾಗಿ ಸುರಂಗ ವಿನ್ಯಾಸ ತಜ್ಞರು ಮತ್ತು ಹಿರಿಯ ಭೂ-ಭೌತಶಾಸ್ತ್ರಜ್ಞರ ತೊಡಗಿಸಿ ಕೊಳ್ಳುವಿಕೆ ಒಳಗೊಂಡಿದೆ. ಆಗುಂಬೆ ಘಾಟ್ ರಸ್ತೆಯಲ್ಲಿ ಸುರಂಗ ಮಾರ್ಗ ನಿರ್ಮಾಣದ ಆಯ್ಕೆಯ ಕಾರ್ಯ ಸಾಧ್ಯತೆ ಪರೀಕ್ಷಿಸಲು, ವಿವರವಾದ ಭೂ-ತಾಂತ್ರಿಕ ಪರಿಶೀಲನೆಗೆ ಮೀಸಲಾದ ಬಜೆಟ್ ನಿಬಂಧನೆಗಳೊಂದಿಗೆ ಅವಕಾಶ ಕಲ್ಪಿಸಲಾಗಿದೆ. ದಶಕಗಳಿಂದಲೂ ಬಾಕಿ ಉಳಿದಿದ್ದ ಆಗುಂಬೆ ಘಾಟ್ ಮೇಲ್ದರ್ಜೆಗೇರಿಸುವ ಜನರ ಬೇಡಿಕೆಗೆ ಇದು ಸ್ಪಷ್ಟ ಹೆಜ್ಜೆಯಾಗಿದೆ ಎಂದು ಸಂಸದ ಬಿ.ವೈ ರಾಘವೇಂದ್ರ ತಿಳಿಸಿದ್ದಾರೆ.

ಘಾಟ್ ರಸ್ತೆ ಅಭಿವೃದ್ಧಿಯಿಂದ ಮಲೆನಾಡು – ಕರಾವಳಿ ಜಿಲ್ಲೆಗಳ ಅಭಿವೃದ್ಧಿಗೆ ಹೊಸ ದಿಕ್ಕು ಲಭ್ಯ ವಾಗಲಿದ್ದು ಸ್ಥಳೀಯ ನಿವಾಸಿಗಳು, ರೈತರು, ಅಕ್ಕಪಕ್ಕದ ಜಿಲ್ಲೆಗಳು, ಪ್ರವಾಸೋದ್ಯಮ, ತುರ್ತು ಸೇವೆಗಳಿಗೆ ಗಣನೀಯ ಲಾಭವಾಗಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಮುಂದಿನ ಹಂತಗಳಲ್ಲಿ ಯೋಜನೆ ಸುಗಮವಾಗಿ ಸಾಗಲು ಕೇಂದ್ರದೊಂದಿಗೆ ನಿರಂತರ ಸಮನ್ವಯ ಮುಂದುವರಿಸಲಾಗುವುದು. ಭೂಸ್ವಾಧೀನ ಮತ್ತು ಕಾನೂನು ಪ್ರಕ್ರಿಯೆಗಳಲ್ಲಿ ರಾಜ್ಯ ಸರ್ಕಾರ ಸಂಪೂರ್ಣ ಸಹಕಾರ ನೀಡಬೇಕು ಎಂದು ಮನವಿ ಮಾಡಿದ್ದಾರೆ.
ಇದನ್ನೂ ಓದಿ – ಶಿವಮೊಗ್ಗದ ವಿದ್ಯಾರ್ಥಿನಿ ರಾಜ್ಯಕ್ಕೆ ಫಸ್ಟ್, ತಾಯಿಯಂತೆ ರ್ಯಾಂಕ್ ಗಳಿಸಿದ ಮಾಜಿ MLA ಮೊಮ್ಮಗಳು
LATEST NEWS
- ಸಾಗರ ಮಾರಿಕಾಂಬ ಜಾತ್ರೆ, ಮಧ್ಯಾಹ್ನದಿಂದ ಯಾರಿಗೂ ದೇವಿ ದರ್ಶನವಿಲ್ಲ, ಕಾರಣವೇನು?

- ಶಿವಮೊಗ್ಗದಲ್ಲಿ ಬಿಸಿಲು ಹೆಚ್ಚಳ, ಚಳಿಯು ತುಸು ಜೋರು, ಇಂದಿನ ಹವಾಮಾನ ವರದಿ

- ಆಗುಂಬೆ ಘಾಟಿ ಸುರಂಗ ಮಾರ್ಗ, ಮಹತ್ವದ ನಿರ್ಧಾರ ಪ್ರಕಟ, ಏನಂದ್ರು ಸಂಸದ ರಾಘವೇಂದ್ರ?

- ಭದ್ರಾವತಿಯ ಮೂವರು ಮಹಿಳೆಯರಿಗೆ 10 ವರ್ಷ ಕಠಿಣ ಜೈಲು ಶಿಕ್ಷೆ, ₹1.61 ಲಕ್ಷ ದಂಡ, ಕಾರಣವೇನು?

- ಇಂದಿನ ಪಂಚಾಂಗ – ಯಾವ್ಯಾವ ಸಮಯ ಯಾವಾಗಿದೆ?

About The Editor
ನಿತಿನ್ ಆರ್.ಕೈದೊಟ್ಲು





