ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
ಶಿವಮೊಗ್ಗ ಲೈವ್.ಕಾಂ | SHIMOGA NEWS | 02 FEBRUARY 2021
ಆನ್ಲೈನ್ನಲ್ಲಿ ಮದ್ಯ ಮಾರಾಟ ಮಾಡುವ ಪ್ರಸ್ತಾವನೆಯನ್ನು ಸರ್ಕಾರ ಕೈಬಿಡಬೇಕು ಎಂದು ಆಗ್ರಹಿಸಿ ವೈನ್ ಮರ್ಚೆಂಟ್ಸ್ ಅಸೋಸಿಯೇಷನ್ ವತಿಯಿಂದ ಶಿವಮೊಗ್ಗದಲ್ಲಿ ಪ್ರತಿಭಟನೆ ನಡೆಸಲಾಯಿತು.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿದ ಮದ್ಯ ಮಾರಾಟಗಾರರು, ಆನ್‍ಲೈನ್ ಮೂಲಕ ಮದ್ಯ ಮಾರಾಟ ಮಾಡುವ ಪ್ರಸ್ತಾವನೆಯನ್ನು ಸರ್ಕಾರ ಕೂಡಲೆ ಕೈಬಿಡಬೇಕು ಎಂದು ಒತ್ತಾಯಿಸಿದರು.
ಐದು ಸಾವಿರ ಅಥವಾ ಅದಕ್ಕಿಂತಲೂ ಹೆಚ್ಚು ಜನಸಂಖ್ಯೆ ಇರುವ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಸಿಎಲ್ 6ಎ, ಸಿಎಲ್ 7 ಲೈಸೆನ್ಸ್‍ನ ಮದ್ಯದ ಅಂಗಡಿ ತೆರೆಯಲು ಪರವಾನಗಿ ನೀಡುವ ಆದೇಶ ರದ್ದುಪಡಿಸಬೇಕು. ಹೊಸ ಎಂಎಸ್‍ಐಎಲ್ ಮಳಿಗೆಗಳಿವೆ ಅವಕಾಶ ನೀಡಬಾರದು. ಕೋವಿಡ್ ಸಂದರ್ಭ ಮದ್ಯ ಮಾರಾಟಗಾರರಿಗೆ ಆಗಿರುವ ನಷ್ಟಕ್ಕೆ ಪರಿಹಾರ ನೀಡಬೇಕು ಎಂದು ಮನವಿ ಮಾಡಿದರು.
ಅಬಕಾರಿ ಇಲಾಖೆ ಅಧಿಕಾರಿಗಳು ಮದ್ಯ ಮಾರಾಟಗಾರರಿಂದ ಲಂಚಕ್ಕಾಗಿ ಗಂಭೀರ ತೊಂದರೆ ನೀಡುತ್ತಿರುವುದನ್ನು ತಡೆಯಬೇಕು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಆಗ್ರಹಿಸಿದರು.
ವೈನ್ ಮರ್ಚೆಂಟ್ಸ್ ಅಸೋಸಿಯೇಷನ್ ಜಿಲ್ಲಾಧ್ಯಕ್ಷ ಸಿ.ಎಂ.ಗೌಡ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು. ಸಂಘದ ಪದಾಧಿಕಾರಿಗಳು, ಮದ್ಯ ಮಾರಾಟಗಾರರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.
VIDEO REPORT
ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ [email protected]