ಶಿವಮೊಗ್ಗ:ಬೆಂಗಳೂರಿನ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಕೇಂದ್ರ ಕಚೇರಿಯಲ್ಲಿ ಆಯೋಜಿಸಲಾಗಿದ್ದ ರಾಜ್ಯ ಮಟ್ಟದ ಕಲಾ ಪ್ರತಿಭೋತ್ಸವ-2025ರ ವಿವಿಧ ಸ್ಪರ್ಧೆಗಳಲ್ಲಿ ಶಿವಮೊಗ್ಗ ಜಿಲ್ಲೆಯ ಐವರು ಪ್ರತಿಭೆಗಳು ಬಹುಮಾನ (winners) ಪಡೆದುಕೊಂಡಿದ್ದಾರೆ.
ಯುವ ಪ್ರತಿಭೆ ವಿಭಾಗದ ಆಶುಭಾಷಣ ಸ್ಪರ್ಧೆಯಲ್ಲಿ ರಾಷ್ಟ್ರೀಯ ಶಿಕ್ಷಣ ಮಹಾವಿದ್ಯಾಲಯದ ವಿಸ್ಮಿತಾ ವಿ. ಅವರು ಪ್ರಥಮ ಸ್ಥಾನ ಪಡೆಯುವ ಮೂಲಕ ಜಿಲ್ಲೆಗೆ ಕೀರ್ತಿ ತಂದಿದ್ದಾರೆ. ಸುಗಮ ಸಂಗೀತ ಸ್ಪರ್ಧೆಯಲ್ಲಿ ಸೊರಬದ ಭುವನ್ ಅವರು ದ್ವಿತೀಯ ಸ್ಥಾನ ಗಳಿಸಿದ್ದಾರೆ.
ಬಾಲಪ್ರತಿಭೆ ವಿಭಾಗದಲ್ಲಿ ಹಿಂದೂಸ್ತಾನಿ, ಕರ್ನಾಟಕ ವಾದ್ಯ ಸಂಗೀತ ಸ್ಪರ್ಧೆಯಲ್ಲಿ ಜ್ಞಾನದೀಪ ಸೀನಿಯರ್ ಸೆಕೆಂಡರಿ ಶಾಲೆಯ ಸುಮೇರು ವಿ. ಸಕಲೇಶಪುರ ಅವರು ದ್ವಿತೀಯ ಸ್ಥಾನ ಪಡೆದರೆ, ಚಿತ್ರಕಲೆ ಸ್ಪರ್ಧೆಯಲ್ಲಿ ಮೌಂಟ್ ಕಾರ್ಮೆಲ್ ಶಾಲೆಯ ದಿಶಾಂತ್ ಎಂ.ಕೆ. ಅವರು ತೃತೀಯ ಸ್ಥಾನ ಪಡೆದಿದ್ದಾರೆ. ಕಿಶೋರ ಪ್ರತಿಭೆ ವಿಭಾಗದ ಸುಗಮ ಸಂಗೀತ ಸ್ಪರ್ಧೆಯಲ್ಲಿ ಪಿ.ಇ.ಎಸ್ ಶಾಲೆಯ ನವನೀತರಾಜ್ ದ್ವಿತೀಯ ಸ್ಥಾನ ಗಳಿಸಿ ಸಾಧನೆ ಮಾಡಿದ್ದಾರೆ.
ಲೋಕಲ್ ಸುದ್ದಿಗಳು ಲೋಕಕ್ಕೆ ತಿಳಿಸಬೇಕು ಅಂತಾ ನ್ಯೂಸ್ ಚಾನೆಲ್ ದುನಿಯಾದಿಂದ ಹೊರ ಬಂದು ಶಿವಮೊಗ್ಗ ಲೈವ್ ಕಟ್ಟಿದ್ದೇವೆ. ಸ್ಥಳೀಯ ಪತ್ರಿಕೆ, ಕೇಬಲ್ ಚಾನೆಲ್, ರಾಜ್ಯಮಟ್ಟದ ಪತ್ರಿಕೆ, ನ್ಯೂಸ್ ಚಾನೆಲ್’ಗಳ ಬೆಂಗಳೂರು ಕಚೇರಿಯಲ್ಲಿ ವರ್ಷಗಟ್ಟಲೆ ಕೆಲಸ ಮಾಡಿದ್ದೇನೆ.
ಈ ಫೀಲ್ಡಲ್ಲಿ ಹತ್ತು ವರ್ಷಕ್ಕೂ ಹೆಚ್ಚು ಕಾಲದ ಅನುಭವವಿದೆ. ಹಾಗಾಗಿ ಪೇಪರ್, ಟಿವಿಗಳಿಗಿಂತಲೂ ವಿಭಿನ್ನವಾಗಿ ಸುದ್ದಿ ಕೊಡಬೇಕು ಅನ್ನುವ ಹಂಬಲ. ಅದರ ಪ್ರಯತ್ನ ನಿರಂತರವಾಗಿದೆ.ಕ್ವಾಲಿಟಿ ಮತ್ತು ನಿಖರತೆಗೆ ಮೊದಲ ಆದ್ಯತೆ. ಸುದ್ದಿಯ ಒಳಗೆ ನನ್ನ ಅಭಿಪ್ರಾಯ ಹೇರುವುದಕ್ಕೆ ಇಷ್ಟವಿಲ್ಲ. ಸುದ್ದಿಯನ್ನು ಸುದ್ದಿಯಾಗಷ್ಟೆ ಕೊಡಬೇಕು ಎಂಬುದು ನನ್ನ ವಾದ. ಹೀಗಿದ್ದೂ ಕೆಲವೊಮ್ಮೆ ಸುದ್ದಿ ಕೆಳಗೆ ‘ಡ್ಯಾಷ್ ಡ್ಯಾಷ್ ಡ್ಯಾಷ್’ ಅಂತೆಲ್ಲ ಕಮೆಂಟುಗಳು ಬರುತ್ತವೆ. ಆರಂಭದಲ್ಲಿದ್ದ ಟೆಂಪರ್ ಈಗಿಲ್ಲ. ಹಾಗಾಗಿ ರಿಯಾಕ್ಟ್ ಮಾಡಲ್ಲ..!ನಿಮ್ಮೂರ ಸುದ್ದಿಗಳಿದ್ದರೆ ತಿಳಿಸಿ. ಹಣ ಪಡೆದು ಸುದ್ದಿ ಮಾಡುವ ಹವ್ಯಾಸ, ಅಭ್ಯಾಸ ಎರಡೂ ಇಲ್ಲ. ಇನ್ನಷ್ಟು ವಿಭಿನ್ನ ಪ್ರಯತ್ನಗಳು, ನಮ್ಮೂರನ್ನು ಮತ್ತಷ್ಟು ಸುತ್ತಬೇಕು, ನಮ್ಮೂರ ಬಗ್ಗೆ ತಿಳಿದು ಜನರಿಗೆಲ್ಲ ತಿಳಿಸಬೇಕು ಅನ್ನುವ ತವಕವಿದೆ.ಅಂದಹಾಗೆ, ಹೊಸ ಐಡಿಯಾಗಳಿದ್ದರೆ, ಸಲಹೆಗಳಿದ್ದರೆ ತಿಳಿಸಿ.. ‘ಡ್ಯಾಷ್ ಡ್ಯಾಷ್’ ಬಯ್ಯೋದಿದ್ದರೆ ದಯವಿಟ್ಟು ವಾಟ್ಸಪ್’ನಲ್ಲಿ ಮೆಸೇಜು ಮಾಡಿ, ಸಾಕು..! ನನ್ನ ಮೊಬೈಲ್ ನಂಬರ್ 9964634494. ಸಿಕ್ಕಾಗ ತಪ್ಪದೆ ಮಾತಾಡಿಸಿ. ನಿಮ್ಮ ಸ್ನೇಹ ನಂಗೆ ಅಮೂಲ್ಯ.ಶಿವಮೊಗ್ಗದ ಸುದ್ದಿಗಾಗಿ ನಿರಂತರವಾಗಿ ಶಿವಮೊಗ್ಗ ಲೈವ್.ಕಾಂ ಓದುತ್ತಿರಿ