ಶಿವಮೊಗ್ಗದಲ್ಲಿ ರಾಘವೇಂದ್ರ ಗೆಲುವು ತಪ್ಪಿಸಲು ಯಾರಿಂದಲು ಸಾಧ್ಯವಿಲ್ಲ, ಏ.18ರಂದೇ ಕಾಣಲಿದೆ ಗೆಲುವಿನ ಸಂಭ್ರಮ

SHIVAMOGGA LIVE NEWS | 16 APRIL 2024

ELECTION NEWS : ಬಿ.ವೈ.ರಾಘವೇಂದ್ರ ಅವರ ಗೆಲುವು ತಪ್ಪಿಸಲು ಯಾರಿಂದಲು ಸಾಧ್ಯವಿಲ್ಲ. ಏ.18ರಂದು ಮೈತ್ರಿ ಅಭ್ಯರ್ಥಿ ರಾಘವೇಂದ್ರ ನಾಮಪತ್ರ ಸಲ್ಲಿಕೆ ಸಂದರ್ಭ ಹೆಚ್ಚಿನ ಸಂಖ್ಯೆಯ ಜನ ಸೇರಿಲಿದ್ದಾರೆ. ಎಲ್ಲರಲ್ಲಿಯು ಗೆಲುವಿನ ಸಂಭ್ರಮ ಕಾಣಲಿದೆ ಎಂದು ಜೆಡಿಎಸ್‌ ಪಕ್ಷದ ರಾಜ್ಯ ಉಪಾಧ್ಯಕ್ಷ ಕೆ.ಬಿ.ಪ್ರಸನ್ನ ಕುಮರ್‌ ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಪ್ರಸನ್ನ ಕುಮಾರ್‌, ಬಿಜೆಪಿ ಮತ್ತು ಜೆಡಿಎಸ್‌ ಪಕ್ಷಗಳ ಮೈತ್ರಿ ಅಭ್ಯರ್ಥಿ ಬಿ.ವೈ.ರಾಘವೇಂದ್ರ ಏ.18ರಂದು ನಾಮಪತ್ರ ಸಲ್ಲಿಸಲಿದ್ದಾರೆ. ಮಾಜಿ ಮುಖ್ಯಮಂತ್ರಿ ಹೆಚ್‌.ಡಿ.ಕುಮಾರಸ್ವಾಮಿ ಈ ಸಂದರ್ಭ ಉಪಸ್ಥಿತರಿರಲಿದ್ದಾರೆ. ಜಿಲ್ಲೆಯ ವಿವಿಧೆಡೆಯ ಜೆಡಿಎಸ್‌ ಮುಖಂಡರು, ಬೂತ್‌ ಮಟ್ಟದ ಕಾರ್ಯಕರ್ತರು ಅಂದು ಆಗಮಿಸಲಿದ್ದಾರೆ ಎಂದು ತಿಳಿಸಿದರು.

ಪ್ರಚಾರ ಮಾಡಿದಲ್ಲೆಲ್ಲ ರಾಘವೇಂದ್ರ ಅವರಿಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಹಾಗಾಗಿ ರಾಘವೇಂದ್ರ ಅವರ ಗೆಲುವನ್ನು ಯಾರೂ ತಡೆಯಲು ಸಾಧ್ಯವಿಲ್ಲ. ಕಾಂಗ್ರೆಸ್‌ ಪಕ್ಷಕ್ಕೆ ಪ್ರಚಾರಕ್ಕೆ  ಗ್ಯಾರಂಟಿ ಹೊರತು ಉಳಿದ್ಯಾವ ವಿಚಾರವು ಇಲ್ಲ. ಆದ್ದರಿಂದ ಕುಮಾರಸ್ವಾಮಿ ಅವರ ಹೇಳಿಕೆಗಳ ಕುರಿತು ಅಪಪ್ರಚಾರ ನಡೆಸಲಾಗುತ್ತಿದೆ. ಈಚೆಗೆ ಕುಮಾರಸ್ವಾಮಿ ನೀಡಿದ ಹೇಳಿಕೆಗೆ ತಪ್ಪು ಅರ್ಥ ನೀಡಲಾಗಿದೆ ಎಂದು ಆರೋಪಿಸಿದರು.

Kalleshwara-Enterprises.webp

ಇನ್ನು, ತಮ್ಮ ಚುನಾವಣೆ ಬಳಿಕ ಮಾಜಿ ಮುಖ್ಯಮಂತ್ರಿ ಹೆಚ್‌.ಡಿ.ಕುಮಾರಸ್ವಾಮಿ ಅವರು ಮತ್ತೊಮ್ಮೆ ಶಿವಮೊಗ್ಗಕ್ಕೆ ಭೇಟಿ ನೀಡಲಿದ್ದಾರೆ. ಶಿವಮೊಗ್ಗ, ಶಿವಮೊಗ್ಗ ಗ್ರಾಮಾಂತರ, ತೀರ್ಥಹಳ್ಳಿ ಮತ್ತು ಭದ್ರಾವತಿಯಲ್ಲಿ ಪ್ರಚಾರ ನಡೆಸಲಿದ್ದಾರ ಎಂದು ತಿಳಿಸಿದರು.

ಇದನ್ನೂ ಓದಿ – ರಾಘವೇಂದ್ರ ನಾಮಪತ್ರ, ಬೃಹತ್‌ ಮೆರವಣಿಗೆಗೆ ಪ್ಲಾನ್‌, ಯಡಿಯೂರಪ್ಪ, ಕುಮಾರಸ್ವಾಮಿ ಭಾಗಿ, ಯಾವಾಗ?

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ವಾಟ್ಸಪ್‌ ಮಾಡಬಹುದು. ಉಚಿತವಾಗಿ ಪ್ರಕಟಿಸುತ್ತೇವೆ. ವಾಟ್ಸಪ್‌ ನಂಬರ್: 7411700200
Kalleshwara-Enterprises.webp

Leave a Comment