ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS | 20 DECEMBER 2022
ಶಿವಮೊಗ್ಗ : ನೊಟೀಸ್ ನೀಡದೆ ಒತ್ತುವರಿ ತೆರವು ಮಾಡಲು ಮುಂದಾಗಿದ್ದರಿಂದ ಮಹಿಳೆಯೊಬ್ಬರು ವಿಷ ಸೇವಿಸಿ ಆತ್ಮಹತ್ಯೆಗೆ (suicide attempt) ಯತ್ನಿಸಿದ್ದಾರೆ. ಆಕ್ರೋಶಗೊಂಡ ದಲಿತ ಸಂಘರ್ಷ ಸಮಿತಿ ಸದಸ್ಯರು ಜಿಲ್ಲಾ ಪಂಚಾಯಿತಿ ಸಭಾಂಗಣದ ಮುಂದೆ ಪ್ರತಿಭಟನೆ ನಡೆಸಿದರು. ಇವೆಲ್ಲದರ ನಡುವೆ ಪಿಡಿಒ ಅವರನ್ನು ಅಮಾನತು ಮಾಡಲಾಗಿದೆ.
ಚೋರಡಿ ಗ್ರಾಮದಲ್ಲಿ ಗ್ರಾಮ ಠಾಣಾ ಜಾಗವನ್ನು ಒತ್ತುವರಿ ಮಾಡಿಕೊಳ್ಳಲಾಗಿದೆ. ಗ್ರಾಮ ಪಂಚಾಯಿತಿ ಆಡಳಿತ ಸೋಮವಾರ ಒತ್ತುವರಿ ತೆರವಿಗೆ ಮುಂದಾಗಿದೆ. ಜೆಸಿಬಿ ಮೂಲಕ ಕಾರ್ಯಾಚರಣೆ ನಡೆಸಿತು.
(suicide attempt)
ರೈತರ ವಿರೋಧದ ನಡುವೆ ಕಾರ್ಯಾಚರಣೆ
ಗ್ರಾಮದಲ್ಲಿ ಹಲವು ರೈತರು ಗ್ರಾಮ ಠಾಣಾ ಜಾಗವನ್ನು ಒತ್ತುವರಿ ಮಾಡಿಕೊಂಡು ಹಲವು ವರ್ಷದಿಂದ ಕೃಷಿ ಚಟುವಟಿಕೆ ನಡೆಸುತ್ತಿದ್ದಾರೆ. ಆದರೆ ‘ಗ್ರಾಮ ಪಂಚಾಯಿತಿ ಆಡಳಿತ ನೊಟೀಸ್ ನೀಡದೆ ಏಕಾಏಕಿ ತೆರವು ಕಾರ್ಯಾಚರಣೆ ನಡೆಸುತ್ತಿದೆ’ ಎಂದು ರೈತರು ಆರೋಪಿಸಿದ್ದಾರೆ. ಚಂದ್ರಮ್ಮ ಅವರು ತಮ್ಮ ಜಮೀನಿನ ಪಕ್ಕದಲ್ಲಿರುವ ಸುಮಾರು 20 ಅಡಿ ಜಾಗವನ್ನು ಒತ್ತುವರಿ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಇದರ ತೆರವು ಕಾರ್ಯಾಚರಣೆ ವೇಳೆ ಆಕ್ರೋಶ ವ್ಯಕ್ತಪಡಿಸಿದ ಅವರು ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಕೂಡಲೆ ಅವರನ್ನು ಮೆಗ್ಗಾನ್ ಆಸ್ಪತ್ರೆಗೆ ಕರೆದೊಯ್ದು ದಾಖಲಿಸಲಾಯಿತು.
(suicide attempt)
ಶಿವಮೊಗ್ಗದಲ್ಲಿ ಡಿಎಸ್ಎಸ್ ಧರಣಿ
ನೊಟೀಸ್ ನೀಡದೆ ಒತ್ತುವರಿ ತೆರವು, ಚಂದ್ರಮ್ಮ ವಿಷ ಸೇವಿಸಿದ ಪ್ರಕರಣದ ಹಿನ್ನೆಲೆ ದಲಿತ ಸಂಘರ್ಷ ಸಮಿತಿ ವತಿಯಿಂದ ಧರಣಿ ನಡೆಸಲಾಯಿತು. ಡಿಎಸ್ಎಸ್ ಮುಖಂಡ ಹಾಲೇಶಪ್ಪ ನೇತೃತ್ವದಲ್ಲಿ ಜಿಲ್ಲಾ ಪಂಚಾಯಿತಿ ಸಭಾಂಗಣದ ಮುಂದೆ ಗ್ರಾಮಸ್ಥರು ಧರಣಿ ನಡೆಸಿದರು.
ಇದನ್ನೂ ಓದಿ – ಬೆಡ್ ರೂಂ ಚೇರ್ ಮೇಲಿಟ್ಟಿದ್ದ ಮಾಂಗಲ್ಯ ಸರ ಮಾಯ, ಒಬ್ಬನ ಮೇಲೆ ಅನುಮಾನ, ಗೃಹಿಣಿ ದೂರು
ಈ ಬೆಳವಣಿಗೆಗಳ ನಡುವೆ ಪಿಡಿಒ ಹೆಚ್.ಜೆ.ಜಿ.ಆಚಾರ್ ಅವರನ್ನು ಅಮಾನತುಗೊಳಿಸಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಕಾಶ್ ಅವರು ಆದೇಶಿಸಿದ್ದಾರೆ.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422