ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIMOGA, 7 AUGUST 2024 : ಜಿಲ್ಲಾ ಮಹಿಳಾ ನ್ಯಾಯವಾದಿಗಳ ಸಮಿತಿ ಮತ್ತು ಶಿವಮೊಗ್ಗ ಜಿಲ್ಲಾ ನ್ಯಾಯವಾದಿಗಳ ಸಂಘದ ಸಹಯೋಗದಲ್ಲಿ ಆ.10ರಂದು ನಗರದ ಸರ್ಕಾರಿ ನೌಕರರ ಭವನದಲ್ಲಿ ಬೆಳಗ್ಗೆ 10ಕ್ಕೆ ದಕ್ಷಿಣ ಕರ್ನಾಟಕ ಮಹಿಳಾ ನ್ಯಾಯವಾದಿಗಳ ಸಮ್ಮೇಳನ (Conference) ಹಮ್ಮಿಕೊಂಡಿದ್ದೇವೆ ಎಂದು ಸಮಿತಿಯ ಜಿಲ್ಲಾಧ್ಯಕ್ಷೆ ಸರೋಜ ಚಂಗೊಳ್ಳಿ ತಿಳಿಸಿದರು.
ಮತ್ತಷ್ಟು ಸುದ್ದಿ ಕೆಳಗಿದೆ ಸುಲಭ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ ಮೊಬೈಲ್ ನಂಬರ್ : 9972194422
ಪತ್ರಿಕಾ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದ ದಕ್ಷಿಣದ ಜಿಲ್ಲೆಗಳು ಸೇರಿದಂತೆ ವಿವಿಧೆಡೆಯಿಂದ ಮಹಿಳಾ ನ್ಯಾಯವಾದಿಗಳು ಕಾರ್ಯಕ್ರಮಕ್ಕೆ ಆಗಮಿಸಲಿದ್ದಾರೆ ಎಂದರು.
» ವಾಟ್ಸಪ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
» ಫೇಸ್ಬುಕ್ ಮೆಸೆಂಜರ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
ಹೈಕೋರ್ಟ್ ನ್ಯಾಯಮೂರ್ತಿ ನ್ಯಾ.ಶ್ಯಾಮ್ ಪ್ರಸಾದ್ ಸಮ್ಮೇಳನ ಉದ್ಘಾಟಿಸಲಿದ್ದಾರೆ. ಮುಖ್ಯ ಅತಿಥಿಯಾಗಿ ಹೈಕೋರ್ಟ್ ನ್ಯಾಯಮೂರ್ತಿ ನ್ಯಾ. ಎಮ್.ಜಿ.ಉಮಾ, ಅತಿಥಿಗಳಾಗಿ ಸಚಿವ ಮಧು ಬಂಗಾರಪ್ಪ, ಸಂಸದ ಬಿ.ವೈ.ರಾಘವೇಂದ್ರ, ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಮಂಜುನಾಥ್ ನಾಐಕ್, ಎಐಎಫ್‌ಡಬ್ಲುಎಲ್ ಅಧ್ಯಕ್ಷೆ ಶೀಲಾ ಅನೀಶ್, ಜಿಲ್ಲಾಧಿಕಾರಿ ಗುರುದತ್ತ ಹೆಗಡೆ, ವಕೀಲರ ಸಂಘದ ಅಧ್ಯಕ್ಷ ಜಿ.ಆರ್.ರಾಘವೇಂದ್ರ ಸ್ವಾಮಿ ಸೇರಿದಂತೆ ಹಲವರು ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.
ಸಮ್ಮೇಳನದಲ್ಲಿ ಎರಡು ವಿಚಾರಗೋಷ್ಠಿ ಇರಲಿದೆ. ಮೊದಲ ಗೋಷ್ಠಿಯಲ್ಲಿ ಹೊಸ ಕಾಯಿದೆಗಳ ಕುರಿತು ಅರಿವು ಮೂಡಿಸಲಾಗುತ್ತದೆ. ಎರಡನೇ ವಿಚಾರಗೋಷ್ಠಿಯಲ್ಲಿ ಮಹಿಳಾ ವಕೀಲರ ವೃತ್ತಿಪರತೆಯ ಸಮಸ್ಯೆಗಳು, ಸವಾಲುಗಳು ಮತ್ತು ಪರಿಹಾರೋಪಾಯಗಳು ಚರ್ಚೆ ನಡೆಯಲಿದೆ. 600ಕ್ಕೂ ಹೆಚ್ಚು ಮಹಿಳಾ ನ್ಯಾಯವಾದಿಗಳು ಭಾಗವಹಿಸಲಿದ್ದಾರೆ ಎಂದರು.
ಸುದ್ದಿಗೋಷ್ಠಿಯಲ್ಲಿ ಜಿ.ಆರ್.ರಾಘವೇಂದ್ರಸ್ವಾಮಿ, ಎಸ್.ಎ. ಶ್ರೀನಿವಾಸ್, ನಂದಿನಿ, ಪ್ರಮೀಳಾ, ಪೂರ್ಣಿಮಾ, ಅಶ್ವಿನಿ, ರೇಖಾ, ವಿದ್ಯಾ ರಾಣಿ ಇದ್ದರು.