ಶಿವಮೊಗ್ಗ: ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮೀ ಚೌಧರಿ ನ.23 ರಂದು ರಾತ್ರಿ 9.40ಕ್ಕೆ ಶಿವಮೊಗ್ಗಕ್ಕೆ ಆಗಮಿಸಿ ವಾಸ್ತವ್ಯ ಮಾಡಲಿದ್ದಾರೆ. ನ.24 ರಿಂದ ಮೂರು ದಿನ ಜಿಲ್ಲೆಯ ವಿವಿಧೆಡೆ ಪ್ರವಾಸ ಕೈಗೊಳ್ಳಲಿದ್ದಾರೆ.
ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:
ಎಲ್ಲೆಲ್ಲಿ ಯಾವ್ಯಾವ ಕಾರ್ಯಕ್ರಮದಲ್ಲಿ ಭಾಗಿ?
ನ.24 ರಂದು ಬೆಳಗ್ಗೆ 9ಕ್ಕೆ ಮೆಗ್ಗಾನ್ ಜಿಲ್ಲಾ ಆಸ್ಪತ್ರೆ ಮತ್ತು ಶಿವಮೊಗ್ಗ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಆಸ್ಪತ್ರೆಗೆ ಭೇಟಿ ನೀಡಲಿದ್ದಾರೆ. 10.30ಕ್ಕೆ ನಗರದ ಅಂಬೇಡ್ಕರ್ ಭವನದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಪೊಲೀಸ್ ಇಲಾಖೆ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಹಯೋಗದಲ್ಲಿ ಆಯೋಜಿಸಿರುವ ಪಿಯು ಹಾಗೂ ಪದವಿ ವಿದ್ಯಾರ್ಥಿನಿಯರೊಂದಿಗೆ ಸಂವಾದ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವರು.
ಮಧ್ಯಾಹ್ಯ 12 ಕ್ಕೆ ನಗರದ ಸಹ್ಯಾದ್ರಿ ಕಲಾ ಹಾಗೂ ವಿಜ್ಞಾನ ಕಾಲೇಜ್‌ನಲ್ಲಿ ಏರ್ಪಡಿಸಲಿರುವ ವಿದ್ಯಾರ್ಥಿನಿಯರೊಂದಿಗಿನ ಸಂವಾದ ಕಾರ್ಯಕ್ರಮ ಹಾಗೂ ಕಾನೂನು ಅರಿವಿನ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. ಸಂಜೆ 4.30ಕ್ಕೆ ನಗರದ ಮಹಿಳಾ ಪೊಲೀಸ್ ಠಾಣೆಗೆ ಭೇಟಿ ನೀಡಲಿದ್ದಾರೆ. ಸಂಜೆ 5.30ಕ್ಕೆ ನಗರದ ಬಿ.ಸಿ.ಎಂ. ಇಂಜಿನಿಯರಿಂಗ್ ಮತ್ತು ಮೆಡಿಕಲ್ ವಿದ್ಯಾರ್ಥಿನಿಯರ ವಸತಿನಿಲಯಕ್ಕೆ ಭೇಟಿ ನೀಡಲಿದ್ದಾರೆ.
ನ.25 ರಂದು ಬೆಳಗ್ಗೆ 10ಕ್ಕೆ ನಗರದ ಅಂಬೇಡ್ಕರ್ ಭವನದಲ್ಲಿ ಮಹಿಳಾ ಆಯೋಗ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಹಯೋಗದೊಂದಿಗೆ ಆಯೋಜಿಸಿರುವ “POSH” ಅಧಿನಿಯಮ 2013ರ ತರಬೇತಿ ಕಾರ್ಯಾಗಾರ ಹಾಗೂ ಅರಿವು ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಬೆಳಗ್ಗೆ 11.45ಕ್ಕೆ ಶಿಕಾರಿಪುರದ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಗಳು ಹಾಗೂ ಮಹಿಳಾ ಬೋಧಕರೊಂದಿಗೆ ಸಂವಾದ ನಡೆಸಲಿದ್ದಾರೆ.
ಮಧ್ಯಾಹ್ನ12.45ಕ್ಕೆ ಶಿಕಾರಿಪುರ ತಾಲೂಕು ಸಾರ್ವಜನಿಕ ಆಸ್ಪತ್ರೆಗೆ ಭೇಟಿ, ಮಧ್ಯಾಹ್ನ 1.30ಕ್ಕೆ ಕಿತ್ತೂರು ರಾಣಿ ಚನ್ನಮ್ಮ ವಸತಿ ಶಾಲೆಗೆ ಭೇಟಿ, ಮಧ್ಯಾಹ್ನ 2.30ಕ್ಕೆ ಉಡುತಡಿ ಅಕ್ಕಮಹಾದೇವಿ ಜನ್ಮಸ್ಥಳಕ್ಕೆ ಭೇಟಿ, ಸಂಜೆ 4ಕ್ಕೆ ಶಿಕಾರಿಪುರ ಪೊಲೀಸ್ ಠಾಣೆಗೆ ಭೇಟಿ, ಸಂಜೆ 5ಕ್ಕೆ ಚನ್ನಕೇಶವ ನಗರದ ಅಲ್ಪಸಂಖ್ಯಾತರ ಪೋಸ್ಟ್ ಮೆಟ್ರಿಕ್ ಬಾಲಕಿಯರ ವಸತಿ ನಿಲಯಕ್ಕೆ ಭೇಟಿ ನೀಡಲಿದ್ದು, ಸಂಜೆ 7.45ಕ್ಕೆ ಶಿವಮೊಗ್ಗಕ್ಕೆ ಆಗಮಿಸಿ ವಾಸ್ತವ್ಯ ಮಾಡಲಿದ್ದಾರೆ.
View this post on Instagram
ನ.26 ರಂದು ಬೆಳಗ್ಗೆ 10.30ಕ್ಕೆ ಶಿವಮೊಗ್ಗ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಶಿವಮೊಗ್ಗ ಜಿಲ್ಲೆಯ “POSH” ಕಾಯ್ದೆಯ ಅನುಷ್ಠಾನದ ಕುರಿತು ಅಧಿಕಾರಿಗಳೊಂದಿಗೆ ಪರಿಶೀಲನೆ ನಡೆಸಲಿದ್ದಾರೆ. ಬೆಳಗ್ಗೆ 11ಕ್ಕೆ ಮಹಿಳಾ ಸ್ಪಂದನಾ ಕಾರ್ಯಕ್ರಮ ನಡೆಸಲಿದ್ದಾರೆ. ಮಧ್ಯಾಹ್ನ 12ಕ್ಕೆ ಮಹಿಳಾ ಪ್ರಗತಿ ಪರಿಶೀಲನಾ ಸಭೆ ನಡೆಸಲಿದ್ದಾರೆ. ಮಧ್ಯಾಹ್ನ 3ಕ್ಕೆ ಪತ್ರಿಕಾಗೋಷ್ಠಿ ನಡೆಸಲಿದ್ದಾರೆ. ಸಂಜೆ 4ಕ್ಕೆ ಶಿವಮೊಗ್ಗದಿಂದ ಉಡುಪಿಗೆ ತೆರಳಲಿದ್ದಾರೆ ಎಂದು ಅಧ್ಯಕ್ಷರ ಆಪ್ತ ಕಾರ್ಯದರ್ಶಿ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ಇದನ್ನೂ ಓದಿ » ಆರು ಪೌರಾಣಿಕ ಪ್ರಸಂಗಗಳ ಯಕ್ಷಗಾನ ಪ್ರದರ್ಶನ, 50ಕ್ಕು ಹೆಚ್ಚು ಕಲಾವಿದರು ಭಾಗಿ
LATEST NEWS
- ಶಿವಮೊಗ್ಗಕ್ಕೆ ಬರ್ತಿದ್ದಾರೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಎಲ್ಲೆಲ್ಲಿ ತೆರಳಲಿದ್ದಾರೆ?

- ಹಸಿದ ಚಿರತೆ ಮರಿ ರಕ್ಷಣೆ, ತಾಯಿ ಚಿರತೆಯ ಭೀತಿಯಲ್ಲಿ ಜನ, ಎಲ್ಲಿ? ಏನಿದು ಪ್ರಕರಣ?

- ನಗದು ತುಂಬಿದ್ದ ಪರ್ಸ್ ವಾರಸುದಾರರಿಗೆ ವಾಪಸ್, ಆಯನೂರು ನಿವಾಸಿಗಳ ಕಾರ್ಯಕ್ಕೆ ಮೆಚ್ಚುಗೆ

- ಬಿಆರ್ಪಿ ಲೆಜೆಂಡ್ಸ್ ಕ್ರಿಕೆಟ್ ಪಂದ್ಯಾವಳಿಯಲ್ಲಿ ಸ್ನೇಹ ಸಮ್ಮಿಲನ

- ನೆಹರು ರಸ್ತೆಯ ಸಭಾಂಗಣದಲ್ಲಿ ಒಂದು ದಿನದ ಕಾರ್ಯಾಗಾರ, ಯಾರೆಲ್ಲ ಬರ್ತಾರೆ? ಏನೆಲ್ಲ ಚರ್ಚೆಯಾಗಲಿದೆ?

About The Editor
ನಿತಿನ್ ಆರ್.ಕೈದೊಟ್ಲು






