ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS | 28 MARCH 2024
ಮತ್ತಷ್ಟು ಸುದ್ದಿ ಕೆಳಗಿದೆ ಸುಲಭ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ ಮೊಬೈಲ್ ನಂಬರ್ : 9972194422
ಭೂಮಿ ದಲಿತ ಕುಟುಂಬಗಳಿಗೆ ಮಂಜೂರು ಮಾಡಿಸಿ
SHIMOGA : ಸರ್ಕಾರಿ ಭೂಮಿಯನ್ನು ಅಕ್ರಮವಾಗಿ ಖಾಸಗಿ ಸಂಸ್ಥೆಯೊಂದಕ್ಕೆ ಮಾರಾಟ ಮಾಡಿರುವುದನ್ನು ರದ್ದುಗೊಳಿಸಿ ವ್ಯವಸಾಯ ಮಾಡುತ್ತಿರುವ ದಲಿತ ಕುಟುಂಬಗಳಿಗೆ ಮಂಜೂರು ಮಾಡಬೇಕು ಎಂದು ಕರ್ನಾಟಕ ದಲಿತ ಸಂಘರ್ಷ ಸಮಿತಿ ಆಗ್ರಹಿಸಿದೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಜಿಲ್ಲಾ ಸಂಚಾಲಕ ಹರಮಘಟ್ಟ ರಂಗಪ್ಪ, ಆಯನೂರು ಹೋಬಳಿ ಮಳಲಿಕೊಪ್ಪ ಗ್ರಾಮದಲ್ಲಿ ಸರ್ಕಾರಿ ಜಂಗಲ್ ಖರಾಬು ಭೂಮಿಯಲ್ಲಿ ಹಲವು ವರ್ಷದಿಂದ ದಲಿತ ಕುಟುಂಬಗಳು ವ್ಯವಸಾಯ ಮಾಡುತ್ತಿವೆ. ಆದರೆ ಸರ್ಕಾರಕ್ಕೆ ನಕಲಿ ದಾಖಲೆ ಒದಗಿಸಿ ಒಂದೇ ಕುಟುಂಬಕ್ಕೆ 119 ಎಕರೆ ಖರಾಬು ಜಮೀನು ಮಂಜೂರು ಮಾಡಿಸಿಕೊಂಡಿದ್ದಾರೆ ಎಂದು ಆರೋಪಿಸಿದರು.
» ವಾಟ್ಸಪ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
» ಫೇಸ್ಬುಕ್ ಮೆಸೆಂಜರ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
ಕೇಜ್ರಿವಾಲ್ ಬಂಧನ ಖಂಡಿಸಿ ಪ್ರತಿಭಟನೆ
SHIMOGA : ಆಮ್ ಆದ್ಮಿ ಪಕ್ಷದ ಸ್ಥಾಪಕ, ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಬಂಧನ ಖಂಡಿಸಿ ಮಾ.31ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಪಕ್ಷದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ನಜೀರ್ ಅಹಮದ್ ತಿಳಿಸಿದರು. ಜಾರಿ ನಿರ್ದೇಶನಾಲಯ ಮತ್ತು ಸಿಬಿಐ ಸಂಸ್ಥೆಗಳು ಕೇಂದ್ರ ಸರ್ಕಾರದ ಕೈಗೊಂಬೆಯಾಗಿವೆ. ಲೋಕಸಭೆ ಚುನಾವಣೆ ಸಂದರ್ಭ ಬಿಜೆಪಿಗೆ ಹಿನ್ನಡೆ ಆಗುವುದನ್ನು ತಡೆಯಲು ಅರವಿಂದ ಕೇಜ್ರಿವಾಲ್ ಅವರನ್ನು ಬಂಧಿಸಲಾಗಿದೆ ಎಂದು ಆರೋಪಿಸಿದರು.
ಜಿಲ್ಲಾ ಮಟ್ಟ ಮಹಿಳಾ ದಿನಾಚರಣೆ
SHIMOGA : ಗುರುರೇಣುಕಾ ವೀರಶೈವ ಜಂಗಮ ಮಹಿಳಾ ಸಂಘಟನೆ ವತಿಯಿಂದ ಶಿವಮೊಗ್ಗದ ಚೌಕಿಮಠದ ವೀರಭದ್ರೇಶ್ವರ ದೇವಸ್ಥಾನದ ಆವರಣದಲ್ಲಿ ಮಾ.29ರಂದು ಜಿಲ್ಲಾ ಮಟ್ಟದ ಮಹಿಳಾ ದಿನಾಚರಣೆ ಆಯೋಜಿಸಲಾಗಿದೆ ಎಂದು ಸಂಘದ ಜಿಲ್ಲಾಧ್ಯಕ್ಷೆ ನಾಗರತ್ನಮ್ಮ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. ಮಧ್ಯಾಹ್ನ 12 ಗಂಟೆಗೆ ಬಿಳಕಿಮಠದ ರಾಚೋಟೇಶ್ವರ ಸ್ವಾಮೀಜಿ ಉದ್ಘಾಟಿಸಲಿದ್ದಾರೆ ಎಂದರು. ಪ್ರೊ. ಸುಮನಾರಾಣಿ, ಸುಶೀಲಾ ದಳವಾಯಿ, ಉಮಾದೇವಿ, ಶಾಂಭವಿ ಇದ್ದರು.
ಇದನ್ನೂ ಓದಿ – ದುರ್ಗಿಗುಡಿ ದುರ್ಗಮ್ಮ ಜಾತ್ರೆ ವೇಳೆ ದೇಗುಲದ ಬಾಗಿಲ ಬಳಿ ಬಂದು ನಿಂತಿದ್ದ ಮಹಿಳೆಗೆ ಕಾದಿತ್ತು ಶಾಕ್