ಸರ್ಕಾರಿ ಮಹಿಳಾ ನೌಕರರ ಸಂಘ ಅಸ್ಥಿತ್ವಕ್ಕೆ, ಉದ್ದೇಶವೇನು? ರಾಜ್ಯಾಧ್ಯಕ್ಷೆ ಏನೆಲ್ಲ ಹೇಳಿದರು?

Published On : ಫೆಬ್ರವರಿ 6, 2026

Published By : ನಿತಿನ್‌ ಆರ್‌.ಕೈದೊಟ್ಲು 

ಶಿವಮೊಗ್ಗ: ರಾಜ್ಯದ ಮಹಿಳಾ ಸರ್ಕಾರಿ ನೌಕರರ (Women Employees) ಬೇಡಿಕೆಗಳು ಹಾಗೂ ಅವರ ಹಿತರಕ್ಷಣೆಗಾಗಿ ಅಖಿಲ ಕರ್ನಾಟಕ ರಾಜ್ಯ ಸರ್ಕಾರಿ ಮಹಿಳಾ ನೌಕರರ ಸಂಘಟನೆ ಸ್ಥಾಪಿಸಲಾಗಿದೆ. ಶಿವಮೊಗ್ಗ, ಮಂಗಳೂರು ಸೇರಿದಂತೆ ಎಲ್ಲಾ ಜಿಲ್ಲೆಗಳಲ್ಲಿ ಘಟಕ ರಚಿಸಲಾಗುತ್ತದೆ ಎಂದು ಸಂಘದ ರಾಜ್ಯಾಧ್ಯಕ್ಷೆ ರೋಶಿನಿ ಗೌಡ ತಿಳಿಸಿದರು.

ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ರೋಶಿನಿ ಗೌಡ, ಮಹಿಳಾ ನೌಕರರ ಸಮಸ್ಯೆಗಳ ಪರಿಹಾರಕ್ಕಾಗಿ ಸಂಘಟನೆ ಸ್ಥಾಪಿಸಲಾಗಿದೆ. ಇದು ರಾಜ್ಯ ಸರ್ಕಾರಿ ನೌಕರರ ಸಂಘಕ್ಕೆ ಪರ್ಯಾಯವಲ್ಲ ಎಂದು ಸ್ಪಷ್ಟಪಡಿಸಿದರು.

ರೋಶಿನಿ ಗೌಡ ಏನೆಲ್ಲ ಹೇಳಿದರು?

1 ಸಂಘದ ಸತತ ಪ್ರಯತ್ನದಿಂದಾಗಿ ರಾಜ್ಯದ ಮಹಿಳಾ ನೌಕರರಿಗೆ ಋತುಚಕ್ರದ ರಜೆಮಂಜೂರಾಗಿದೆ. ಇದೇ ಮಾದರಿಯಲ್ಲಿ ಗರ್ಭಿಣಿ ನೌಕರರಿಗೆ ವೇತನ ಸಹಿತ ವಿಶೇಷ ಸಾಂದರ್ಭಿಕ ರಜೆ ನೀಡಬೇಕು ಹಾಗೂ ಮಾತೃತ್ವ ರಜೆಯನ್ನು ಒಂದು ವರ್ಷಕ್ಕೆ ವಿಸ್ತರಿಸಬೇಕು. ಸೆಪ್ಟೆಂಬರ್ 13 ರಂದು ರಾಜ್ಯದ ಮಹಿಳಾ ನೌಕರರ ದಿನಾಚರಣೆ ಎಂದು ಅಧಿಕೃತವಾಗಿ ಘೋಷಿಸಬೇಕು.

w2
2 ಮಹಿಳಾ ಅಧಿಕಾರಿಗಳ ರಕ್ಷಣೆಗೆ ಕಡ್ಡಾಯವಾಗಿ ಮಹಿಳಾ ಚಾಲಕರನ್ನೇ ನೇಮಕ ಮಾಡಬೇಕು. ಇದು ಮಹಿಳಾ ನೌಕರರ ಮೇಲೆ ನಡೆಯುವ ದೌರ್ಜನ್ಯ ಮತ್ತು ಕಿರುಕುಳ ತಡೆಯಲು ಸಹಕಾರಿ ಆಗಲಿದೆ.

3 ಪ್ರತಿ ಸರ್ಕಾರಿ ಕಚೇರಿಗಳಲ್ಲಿ ಕೆಲಸ ಮಾಡುವ ತಾಯಂದಿರ ಅನುಕೂಲಕ್ಕಾಗಿ ಸುಸಜ್ಜಿತ ಶಿಶುಪಾಲನಾ ಕೇಂದ್ರಗಳನ್ನು ಸ್ಥಾಪಿಸಬೇಕು.

060226 women Government Employees Union president Roshini Gowda press meet
4 8ನೇ ವೇತನ ಆಯೋಗದ ಶಿಫಾರಸುಗಳನ್ನು ತಕ್ಷಣ ಜಾರಿಗೆ ತರಬೇಕು. ಹೊಸ ಪಿಂಚಣಿ ಯೋಜನೆ (NPS) ರದ್ದುಗೊಳಿಸಿ ಹಳೆಯ ಪಿಂಚಣಿ ಯೋಜನೆ (OPS) ಅನ್ನು ಪುನಃಸ್ಥಾಪಿಸಬೇಕು.

ಇದನ್ನೂ ಓದಿ – MRPಗಿಂತಲು ಹೆಚ್ಚು ವಸೂಲಿ, ಫ್ಲಿಪ್‌ಕಾರ್ಟ್‌ ಸಂಸ್ಥೆಗೆ ಬಿಸಿ ಮುಟ್ಟಿಸಿದ ಶಿವಮೊಗ್ಗ ಗ್ರಾಹಕ ನ್ಯಾಯಾಲಯ

ರಾಜ್ಯದಲ್ಲಿ ಸುಮಾರು 2.5 ಲಕ್ಷ ಮಹಿಳಾ ನೌಕರರು ಇದ್ದಾರೆ. ಅವರನ್ನೆಲ್ಲ ಮಹಿಳಾ ನೌಕರರ ಸಂಘದ ಸದಸ್ಯರಾಗಬಹುದು. ವೆಬ್‌ಸೈಟ್‌ ಮೂಲಕ ಸದಸ್ಯತ್ವ ನೋಂದಣಿ ಮಾಡಿಕೊಳ್ಳಬಹುದು. ಸದಸ್ಯತ್ವ ಶುಲ್ಕ ₹100 ಇರಲಿದೆ ಎಂದು ರೋಶಿನಿ ಗೌಡ ತಿಳಿಸಿದರು.

w1

ಸುದ್ದಿಗೋಷ್ಠಿಯಲ್ಲಿ ರಾಜ್ಯ ಗೌರವಾಧ್ಯಕ್ಷೆ ಗೀತಾ ಮಣಿ, ರಾಜ್ಯ ಖಜಾಂಚಿ ಡಾ. ವೀಣಾ ಕೃಷ್ಣಮೂರ್ತಿ ಇದ್ದರು.

Shivamogga Live reached 2.8 million views in January-2026 - Editor : Nitin Kaidotlu

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : ಫೆಬ್ರವರಿ 6, 2026

Leave a Comment