ಶಿವಮೊಗ್ಗದಲ್ಲಿ ಬೀದಿಗಿಳಿದ ಮಹಿಳೆಯರು, ಮೈಕ್ರೋ ಫೈನಾನ್ಸ್ ವಿರುದ್ಧ ಭಾರೀ ಆಕ್ರೋಶ

ಶಿವಮೊಗ್ಗ
LIVE

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ (HOME LOAN)

ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!
ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ ಸೌಲಭ್ಯ.

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ:

99721 94422
*ಷರತ್ತುಗಳು ಅನ್ವಯಿಸುತ್ತವೆ

ಶಿವಮೊಗ್ಗ ಲೈವ್.ಕಾಂ | SHIMOGA | 16 ಡಿಸೆಂಬರ್ 2019

ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್‌ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:

ಮೈಕ್ರೋ ಫೈನಾನ್ಸ್’ಗಳು ನೀಡಿದ ಕಾನೂನುಬಾಹಿರ ಸಾಲ ಮನ್ನಾ ಮಾಡಬೇಕು ಹಾಗೂ ಮೈಕ್ರೋ ಫೈನಾನ್ಸ್’ಗಳ ದೌರ್ಜನ್ಯ, ದಬ್ಬಾಳಿಕೆ ವಿರುದ್ಧ ಜಿಲ್ಲಾ ಋಣಮುಕ್ತ ಹೋರಾಟ ಸಮಿತಿ  ನೇತೃತ್ವದಲ್ಲಿ ಸಂತ್ರಸ್ಥ ಮಹಿಳೆಯರು ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿದರು.

ಜಿಲ್ಲೆಯ ಹಲವು ಗ್ರಾಮಗಳಲ್ಲಿ ರಾಷ್ಟ್ರೀಯ ಬ್ಯಾಂಕುಗಳ ಶಾಖೆಗಳಿದ್ದರೂ ಸಹ ಆರ್ಥಿಕ ಕಾರ್ಯವ್ಯಾಪ್ತಿಯಲ್ಲಿ ಸಾಲದ ಅಗತ್ಯ ಇರುವ ಬಡ ಜನತೆಗೆ ಸಾಲ ನೀಡುತ್ತಿಲ್ಲ. ಅದರ ಪರಿಣಾಮ ಜನರು ಸುಲಭವಾಗಿ ಮೈಕ್ರೋ ಫೈನಾನ್ಸ್’ಗಳ ಬಲೆಗೆ ಬೀಳುವಂತಾಗಿದೆ ಎಂದು ಪ್ರತಿಭಟನಾಕಾರರು ಆರೋಪಿಸಿದರು.

ಮೈಕ್ರೋ ಫೈನಾನ್ಸ್ ಸಂಸ್ಥೆಗಳು ಬಡವರ ಅಭಿವೃದ್ದಿಗಾಗಿ ಸೇವೆ ಮಾಡುವುದಾಗಿ ಅನುಮತಿ ಪಡೆದಿವೆ. ಆದರೆ ಈ ಸಂಸ್ಥೆಗಳು ಸೇವೆಯ ಬದಲಿಗೆ ವ್ಯಾಪಾರೀಕರಣ ಮಾಡಿ ಶೇ.26ರಿಂದ 30ರವರೆಗೆ ಬಡ್ಡಿ ವಿಧಿಸಿ ಬಡವರಿಗೆ ಸಂಕಷ್ಟ ನೀಡುತ್ತಿವೆ ಎಂದು ಪ್ರತಿಭಟನಾಕಾರರು ಆರೋಪಿಸಿದರು.

ಜಿಲ್ಲಾ ಋಣಮುಕ್ತ ಹೋರಾಟ ಸಮಿತಿ ಮುಖಂಡರಾದ ಕಲಗೋಡು ರತ್ನಾಕರ್, ತೀ.ನಾ.ಶ್ರೀನಿವಾಸ್ ಪ್ರತಿಭಟನೆಯ ನೇತೃತ್ವ ವಹಿಸಿದ್ದರು. 400ಕ್ಕೂ ಹೆಚ್ಚು ಸಂತ್ರಸ್ಥ ಮಹಿಳೆಯರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

ಶಿವಮೊಗ್ಗ ಲೈವ್.ಕಾಂ ವಾಟ್ಸಪ್ ನಂಬರ್ – 7411700200

ಸುದ್ದಿಗಾಗಿ ಕರೆ ಮಾಡಿ – 9964634494

ಈ ಮೇಲ್ ಐಡಿ | shivamoggalive@gmail.com

Women Protested against Micro Finance Institutions in the district. Around 400 women protested in front of Deputy Commissioner’s office.

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment