ಶಿವಮೊಗ್ಗ: ಮಹಿಳೆ ಮತ್ತು ಮಕ್ಕಳ ಮೇಲಿನ ದೌರ್ಜನ್ಯ, ಕಿರುಕುಳ, ಹಿಂಸೆ ನೀಡುವವರ ವಿರುದ್ಧ ಕ್ರಮ ಕೈಗೊಳ್ಳಬೇಕು. ವಿಧವೆಯರು, ವೃದ್ಧಾಪ್ಯ ವೇತನ ಹಾಗೂ ವಿಶೇಷಚೇತನರ ಮಾಸಾಶನ ಹೆಚ್ಚಳಕ್ಕೆ ಆಗ್ರಹಿಸಿ ಸಮೃದ್ಧ್ ಸ್ವ ಸಹಾಯ ಸಂಘಗಳ ತಾಲೂಕು ಒಕ್ಕೂಟ ಹಾಗೂ ಅರುಣೋದಯ ಮಹಿಳಾ (Women) ಜಿಲ್ಲಾ ಒಕ್ಕೂಟ ಜಂಟಿಯಾಗಿ ಆಗ್ರಹಿಸಿವೆ.
ಶಿವಮೊಗ್ಗ ಲೈವ್ನ ಪ್ರತಿ ಅಪ್ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್ಗಳನ್ನು ಜಾಯಿನ್ ಆಗಿ:
ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿ, ಜಿಲ್ಲಾಡಳಿತದ ಮೂಲಕ ರಾಜ್ಯ ಸರಕಾರಕ್ಕೆ ಮನವಿ ಸಲ್ಲಿಸಲಾಯಿತು. ಮಹಿಳೆಯರ ಮೇಲೆ ದೌರ್ಜನ್ಯ ಎಸಗಿದವರ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಲಾಯಿತು.
ಲೈಂಗಿಕ ದೌರ್ಜನ್ಯ ಪ್ರಕರಣಗಳು ಹೆಚ್ಚುತ್ತಿವೆ. ಇದರಿಂದ ಹೆಣ್ಣುಮಕ್ಕಳು ಜೀವನ ನಡೆಸುವುದು ಕಷ್ಟವಾಗಿದೆ. ಇಂತಹ ನೀಚ ಕೃತ್ಯ ಎಸಗುವವರಿಗೆ ಸೂಕ್ತ ಶಿಕ್ಷೆ ಆಗಬೇಕು. ಇದಕ್ಕಾಗಿ ಕಠಿಣ ಕಾನೂನುಗಳನ್ನು ಜಾರಿ ಮಾಡಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.

ಶುಭಾ, ಎಂ.ಪಿ.ಶ್ವೇತಾ, ನಯನ, ಸುನೀತಾ, ಸುಧಾ, ಚಂದ್ರಿಕಾ, ವಸಂತಾ, ಉಮ್ಮೆಸಲ್ಮಾ, ಮಂಜಮ್ಮ ಮತ್ತಿತರರಿದ್ದರು.
Bhada
ಇದನ್ನೂ ಓದಿ » ಶಿವಮೊಗ್ಗದಿಂದ ಹೊಸ ರೈಲ್ವೆ ಮಾರ್ಗಗಳು, ರೈಲ್ವೆ ಸೌಧದಲ್ಲಿ ಸಂಸದ ರಾಘವೇಂದ್ರ ಮಹತ್ವದ ಮೀಟಿಂಗ್, ಇಲ್ಲಿದೆ ಡಿಟೇಲ್ಸ್
LATEST NEWS
- ಶಿವಮೊಗ್ಗಕ್ಕೆ ಬರ್ತಿದ್ದಾರೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಎಲ್ಲೆಲ್ಲಿ ತೆರಳಲಿದ್ದಾರೆ?

- ಹಸಿದ ಚಿರತೆ ಮರಿ ರಕ್ಷಣೆ, ತಾಯಿ ಚಿರತೆಯ ಭೀತಿಯಲ್ಲಿ ಜನ, ಎಲ್ಲಿ? ಏನಿದು ಪ್ರಕರಣ?

- ನಗದು ತುಂಬಿದ್ದ ಪರ್ಸ್ ವಾರಸುದಾರರಿಗೆ ವಾಪಸ್, ಆಯನೂರು ನಿವಾಸಿಗಳ ಕಾರ್ಯಕ್ಕೆ ಮೆಚ್ಚುಗೆ

- ಬಿಆರ್ಪಿ ಲೆಜೆಂಡ್ಸ್ ಕ್ರಿಕೆಟ್ ಪಂದ್ಯಾವಳಿಯಲ್ಲಿ ಸ್ನೇಹ ಸಮ್ಮಿಲನ

- ನೆಹರು ರಸ್ತೆಯ ಸಭಾಂಗಣದಲ್ಲಿ ಒಂದು ದಿನದ ಕಾರ್ಯಾಗಾರ, ಯಾರೆಲ್ಲ ಬರ್ತಾರೆ? ಏನೆಲ್ಲ ಚರ್ಚೆಯಾಗಲಿದೆ?

About The Editor
ನಿತಿನ್ ಆರ್.ಕೈದೊಟ್ಲು





