ಕಂಪನಿಯಲ್ಲಿ ಅಮಾನತು ಮಾಡಿದ್ದಕ್ಕೆ ನಡು ರಸ್ತೆಯಲ್ಲಿ ಸೇಲ್ಸ್ ಮ್ಯಾನೇಜರ್ ಮೇಲೆ ದಾಳಿ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 4 NOVEMBER 2022

SHIMOGA | ಸರಿಯಾಗಿ ಕೆಲಸ ಮಾಡಲಿಲ್ಲ ಎಂದು ಫ್ಯಾಕ್ಟರಿಯಲ್ಲಿ ನೊಟೀಸ್ ನೀಡಿದ್ದಕ್ಕೆ ಸಿಟ್ಟಿಗೆದ್ದ ಕಾರ್ಮಿಕರು ಸೇಲ್ಸ್ ಮ್ಯಾನೇಜರ್ ಒಬ್ಬರನ್ನು ಅಡ್ಡಗಟ್ಟಿ ಹಲ್ಲೆ ನಡೆಸಿದ್ದಾರೆ. ಗಾಯಗೊಂಡಿದ್ದ ಸೇಲ್ಸ್ ಮ್ಯಾನೇಜರನ್ನು (sales manager) ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

Shimoga nanjappa HOspital

ವಿನೋಬನಗರ ನಿವಾಸಿ ಪ್ರವೀಣ್ ಅಂಬಳೆ ಎಂಬುವವರ ಮೇಲೆ ಹಲ್ಲೆಯಾಗಿದೆ. ಪರ್ಫೆಕ್ಟ್ ಅಲಾಯ್ಸ್ ಕಂಪನಿಯಲ್ಲಿ ಸೇಲ್ಸ್ ಮ್ಯಾನೇಜರ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ.

(sales manager)

ಕಾರ್ಮಿಕರಿಗೆ ನೊಟೀಸ್, ಒಬ್ಬ ಅಮಾನತು

ಕಂಪನಿಯಲ್ಲಿ ಪ್ರವೀಣ್ ಅಂಬಳೆ ಅವರು ಅಡಿ 24 ಮಂದಿ ಕೆಲಸ ನಿರ್ವಹಿಸುತ್ತಿದ್ದಾರೆ. ಈ ಫೈಕಿ ವಿನಯ್ ಮತ್ತು ಜ್ಞಾನೇಶ್ ಎಂಬುವವರು ಸರಿಯಾಗಿ ಕೆಲಸ ಮಾಡುತ್ತಿರಲಿಲ್ಲ ಎಂದು ಆರೋಪಿಸಲಾಗಿದೆ. ಈ ಹಿನ್ನೆಲೆ ಜ್ಞಾನೇಶ್ ಗೆ ನೊಟೀಸ್ ಜಾರಿ ಮಾಡಿ ತಾತ್ಕಾಲಿಕವಾಗಿ ಅಮಾನತು ಮಾಡಲಾಗಿದೆ. ವಿನಯ್ ಗೆ ಮೌಖಿಕವಾಗಿ ಎಚ್ಚರಿಕೆ ನೀಡಲಾಗಿತ್ತು.

(sales manager)

ರಸ್ತೆಯಲ್ಲಿ ಅಡ್ಡಗಟ್ಟಿ ಹಲ್ಲೆ

ಕೆಲಸ ಮುಗಿಸಿ ಪ್ರವೀಣ್ ಅಂಬಳೆ ಅವರು ಮನೆಗೆ ತೆರಳುತ್ತಿದ್ದಾಗ ವಿನಯ್ ಮತ್ತು ಜ್ಞಾನೇಶ್ ಬೈಕ್ ಅಡ್ಡಗಟ್ಟಿದ್ದಾರೆ. ವಿನೋಬನಗರದ ಶಿವಾಲಯ ಬಳಿ ಘಟನೆ ನಡೆದಿದೆ. ಇಬ್ಬರು ಪ್ರವೀಣ್ ಅಂಬಳೆಯನ್ನು ಅವಾಚ್ಯವಾಗಿ ನಿಂದಿಸಿ, ದೊಣ್ಣೆ, ರಾಡ್ ನಿಂದ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ.

ಕ್ಲಿಕ್ ಮಾಡಿ ಇದನ್ನೂ ಓದಿ ಶಿವಮೊಗ್ಗದ ರೈಲ್ವೆ ನಿಲ್ದಾಣದ ಪ್ಲಾಟ್ ಫಾರಂನಲ್ಲಿ ಅಸ್ವಸ್ಥಳಾಗಿ ಬಿದ್ದ ಮಹಿಳೆ ಮೆಗ್ಗಾನ್ ಆಸ್ಪತ್ರೆಯಲ್ಲಿ ಸಾವು

ಮುಖ, ಬೆನ್ನು, ಕಾಲಿಗೆ ಹೊಡೆದಿದ್ದರಿಂದ ಪ್ರವೀಣ್ ಅಂಬಳೆ ಗಾಯಗೊಂಡಿದ್ದಾರೆ. ಈ ವೇಳೆ ಜೋರಾಗಿ ಕೂಗಿಕೊಂಡಿದ್ದರಿಂದ ಜನ ಸೇರಿದ್ದಾರೆ. ಆಗ ಆರೋಪಿಗಳು ಜೀವ ಬೆದರಿಕೆ ಒಡ್ಡಿ ಪರಾರಿಯಾಗಿದ್ದಾರೆ ಎಂದು ಆರೋಪಿಸಲಾಗಿದೆ.

ಕ್ಲಿಕ್ ಮಾಡಿ ಇದನ್ನೂ ಓದಿ ಬೆಳ್ಳಂಬೆಳಗ್ಗೆ ಗಾಂಧಿ ಬಜಾರ್ ನಲ್ಲಿ ಜೆಸಿಬಿ ಘರ್ಜನೆ, ಎರಡನೇ ದಿನಕ್ಕೆ ತೆರವು ಕಾರ್ಯಾಚರಣೆ

ಪ್ರವೀಣ್ ಅಂಬಳೆ ಅವರನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಘಟನೆ ಸಂಬಂಧ ವಿನೋಬನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ತನಿಖೆ ನಡೆಯುತ್ತಿದೆ.

Shimoga nanjappa hospital

ADVERTISEMENT

  • ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
  • ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422

SHIVAMOGGA LIVE WHATSAPP

ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment