ಶಿವಮೊಗ್ಗದ ಬಿದಿರೆಯಲ್ಲಿ ಸೈಟ್ ಮಾರಾಟಕ್ಕಿದೆ. ಸಾಯಿ ಬಾಬಾ ದೇಗುಲ, ರಾಷ್ಟ್ರೀಯ ಹೆದ್ದಾರಿಗೆ ಸಮೀಪದಲ್ಲಿ 30*50 ಅಳತೆಯ ಸೈಟು ಮಾರಾಟಕ್ಕಿದೆ. ಸಂಪರ್ಕಿಸಿ: 8073449559ಸೈಟ್ ಮಾರಾಟಕ್ಕಿದೆ
ಶಿವಮೊಗ್ಗ: ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿಯಿಂದ, ಅಕಾಡೆಮಿಯ ಕಚೇರಿಯಲ್ಲಿ ನ.11 ರಿಂದ 15 ರವರೆಗೆ ‘ಸಂಶೋಧನೆ, ಪ್ರಕಟಣೆ ನೀತಿಶಾಸ್ತ್ರ ಮತ್ತು ದತ್ತಾಂಶ ವಿಶ್ಲೇಷಣೆ’ ಕುರಿತು ಐದು ದಿನಗಳ ಕಾರ್ಯಾಗಾರ (Workshop) ಆಯೋಜಿಸಲಾಗಿದೆ.
ಪ್ರತಿಷ್ಠಿತ ಸಂಸ್ಥೆಗಳ ಹೆಸರಾಂತ ವಿಜ್ಞಾನಿಗಳು ಮತ್ತು ತಜ್ಞರು ಉಪನ್ಯಾಸ ನೀಡಲಿದ್ದು, ಆಸಕ್ತ ವಿಜ್ಞಾನ ಪದವಿ, ಸ್ನಾತಕೋತ್ತರ ವಿಜ್ಞಾನ ಪದವೀಧರ ವಿದ್ಯಾರ್ಥಿಗಳು, ಸಂಶೋಧನಾ ವಿದ್ಯಾರ್ಥಿಗಳು, ಉಪನ್ಯಾಸಕರು/ಪ್ರಾಧ್ಯಾಪಕರು ಹಾಗೂ ವಿಜ್ಞಾನಾಸಕ್ತರು ಭಾಗವಹಿಸಬಹುದಾಗಿದೆ.
ಆಸಕ್ತರು ನ.5ರೊಳಗೆ https://forms.gle/ UNrBg9wiBzgQBMVD6 ಮೂಲಕ ಹೆಸರು ನೋಂದಾಯಿಸಿಕೊಳ್ಳುವಂತೆ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಆರ್.ಆನಂದ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹೆಚ್ಚಿನ ಮಾಹಿತಿಗಾಗಿ ಕಾರ್ಯಾಗಾರದ ಸಂಯೋಜಕ ಶ್ರೀನಿವಾಸ್ ವಿ.ಕೆ, ದೂರವಾಣಿ ಸಂಖ್ಯೆ: 9620767819 ಅಥವಾ ವೆಬ್‌ಸೈಟ್ https://kstacademy.in ಗೆ ಸಂಪರ್ಕಿಸಬಹುದು.
ಇದನ್ನೂ ಓದಿ » ಚಂದ್ರಗುತ್ತಿ ದೇಗುಲದಲ್ಲಿ ಹುಂಡಿ ಎಣಿಕೆ, ಎಷ್ಟಿತ್ತು ಭಕ್ತರು ಅರ್ಪಿಸಿದ ಕಾಣಿಕೆ?






