ಶಿವಮೊಗ್ಗ ಲೈವ್.ಕಾಂ | SHIMOGA NEWS | 27 FEBRUARY 2021
ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಹುಟ್ಟುಹಬ್ಬದ ಹಿನ್ನೆಲೆ ಶಿವಮೊಗ್ಗದ ರವೀಂದ್ರನಗರ ಗಣಪತಿ ದೇವಾಲಯದಲ್ಲಿ ವಿಶೇಷ ಪೂಜೆ ನೆರವೇರಿಸಲಾಯಿತು. ವಿಧಾನ ಪರಿಷತ್ ಸದಸ್ಯ ರುದ್ರೇಗೌಡ ಅವರ ನೇತೃತ್ವದಲ್ಲಿ ಪೂಜೆ ನಡೆಯಿತು.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ಪೂಜೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಂಸದ ಬಿ.ವೈ. ರಾಘವೇಂದ್ರ, ಮಾರ್ಚ್ 8 ರಂದು ಯಡಿಯೂರಪ್ಪ ಅವರು ಬಜೆಟ್ ಮಂಡಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ವಿಶೇಷ ಪೂಜೆ ನೆರವೇರಿಸಲಾಗಿದೆ. ಸುಸ್ಥಿರ ಆಡಳಿತ, ಅಧಿಕಾರ ಸುಗಮವಾಗಿ ನಡೆಯಲು ಪ್ರಾರ್ಥಿಸಲಾಗಿದೆ. ಯಡಿಯೂರಪ್ಪ ಅವರ ಹುಟ್ಟುಹಬ್ಬದ ಹಿನ್ನೆಲೆ ನಗರದಲ್ಲಿ ವಿಶೇಷ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದರು.
ದಕ್ಷಿಣ ಭಾರತದಲ್ಲಿ ಕಳೆದ ಐವತ್ತು ವರ್ಷದಲ್ಲಿ ಸುದೀರ್ಘ ರಾಜಕಾರಣ ಮಾಡಿಕೊಂಡು ಬಂದಿದ್ದಾರೆ. ಸಂಘಟನೆ ಬಲಪಡಿಸಿ ಸಮಾಜವಾದಿ ನೆಲೆಯಲ್ಲಿ ರಾಷ್ಟ್ರೀಯ ಸಿದ್ಧಾಂತದೊಂದಿಗೆ ಪಕ್ಷ ಬಲಪಡಿಸಿದ್ದಾರೆ. ಇಡಿ ರಾಜ್ಯದಲ್ಲಿ ಪಕ್ಷವನ್ನು ಪ್ರಬಲವಾಗಿ ಸಂಘಟಿಸಿ ಅಧಿಕಾರಕ್ಕೆ ತಂದಿದ್ದಾರೆ. ನಾಲ್ಕು ಬಾರಿ ಮುಖ್ಯಮಂತ್ರಿಯಾಗಿದ್ದಾರೆ. ಅನೇಕ ಸವಾಲುಗಳನ್ನು ಎದುರಿಸಿದ್ದಾರೆ ಎಂದರು.
ಬಿಜೆಪಿ ಪಕ್ಷದ ಹಲವು ಮುಖಂಡರು, ಯಡಿಯೂರಪ್ಪ ಅವರ ಅಭಿಮಾನಿಗಳು ಪೂಜೆಯಲ್ಲಿ ಪಾಲ್ಗೊಂಡಿದ್ದರು.
ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ [email protected]