ಶಿವಮೊಗ್ಗ ಲೈವ್.ಕಾಂ | SHIMOGA NEWS | 27 ಆಗಸ್ಟ್ 2021
ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ದುಬಾರಿ ಕಾರು ಜನರ ಗಮನ ಸೆಳೆಯುತ್ತಿದೆ. ಶಿವಮೊಗ್ಗಕ್ಕೆ ಯಡಿಯೂರಪ್ಪ ಅವರು ಆಗಮಿಸುತ್ತಿದ್ದಂತೆ ಕಾರ್ಯಕರ್ತರು, ಮುಖಂಡರು ಕಾರು ಕಂಡು ಪುಳಕಿತರಾದರು.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ರಾಜ್ಯ ಪ್ರವಾಸ ಕೈಗೊಳ್ಳುತ್ತಿರುವ ಯಡಿಯೂರಪ್ಪ ಅವರು ನೂತನ ಕಾರು ಖರೀದಿಸಿದ್ದಾರೆ. ಇದರ ಬೆಲೆ ಸುಮಾರು ಒಂದು ಕೋಟಿ ರೂ. ಎಂದು ಹೇಳಲಾಗುತ್ತಿದೆ. ಇವತ್ತು ಇದೆ ಐಷಾರಾಮಿ ಕಾರಿನಲ್ಲಿ ಯಡಿಯೂರಪ್ಪ ಅವರು ಶಿವಮೊಗ್ಗಕ್ಕೆ ಆಗಮಿಸಿದ್ದಾರೆ.
ಕಾರಿಗೆ ಯಡಿಯೂರಪ್ಪ ಅವರ ಲಕ್ಕಿ ನಂಬರ್
ಯಡಿಯೂರಪ್ಪ ಅವರ ಕುಟುಂಬದವರ ಬಹುತೇಕ ಕಾರುಗಳ ನಂಬರ್ 4545 ಆಗಿದೆ. ನೂತನ ಐಷಾರಾಮಿ ಕಾರಿಗೂ ಯಡಿಯೂರಪ್ಪ ಅವರು ಇದೇ ನಂಬರ್ ರಿಜಿಸ್ಟರ್ ಮಾಡಿಸಿದ್ದಾರೆ.
ಕಾರಿನ ಜೊತೆ ಸೆಲ್ಫಿ, ಫೋಟೊ
ವಿನೋಬನಗರದಲ್ಲಿ ಯಡಿಯೂರಪ್ಪ ಅವರ ಮನೆ ಮುಂದೆ ನಿಲ್ಲಿಸಿದ್ದ ಕಾರಿನ ಮುಂದೆ ಕಾರ್ಯಕರ್ತರು ಸೆಲ್ಫಿ ಕ್ಲಿಕ್ಕಿಸಿಕೊಂಡು ಸಂಭ್ರಮಿಸಿದರು. ಬಹುತೇಕರು ಕಾರಿನ ಫೋಟೊ ತೆಗೆದುಕೊಂಡರು.
(ಶಿವಮೊಗ್ಗ ಲೈವ್.ಕಾಂ ನಮ್ಮೂರ ನ್ಯೂಸ್ ವಿಭಾಗ – ನಿಮ್ಮೂರ ನ್ಯೂಸ್‍ಗೆ ನೀವೇ ವರದಿಗಾರರು. ನಿಮ್ಮೂರ ಪ್ರಮುಖ ಘಟನೆಗಳನ್ನು ನೀವೇ ವರದಿ ಮಾಡಬಹುದು. ಫೋಟೊ, ವಿಡಿಯೋ ಸಹಿತ ವರದಿಯನ್ನು ವಾಟ್ಸಪ್ ಅಥವಾ ಈ ಮೇಲ್ ಮಾಡಬಹುದು)
ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200