ಶಿವಮೊಗ್ಗಕ್ಕೆ ಯಡಿಯೂರಪ್ಪ ಆಗಮನ, ಭದ್ರಾವತಿಯಲ್ಲಿ ಗೆಲುವು ಸಾಧಿಸಲು ವಿಶೇಷ ಪ್ರಯತ್ನದ ಸುಳಿವು

No.1 News Website
 ಶಿವಮೊಗ್ಗ ಲೈವ್‌ 
ಮಲೆನಾಡು ಭಾಗದಲ್ಲಿ ಅತಿ ಹಚ್ಚು ಓದುಗರು ಮತ್ತು ಅತಿ ಹೆಚ್ಚು ವಿವ್ಸ್‌ ಹೊಂದಿರುವ ವೆಬ್‌ಸೈಟ್‌. ನೀವು ನಮ್ಮ ವಾಟ್ಸಪ್‌ ಗ್ರೂಪ್‌ ಸೇರಲು » ಇಲ್ಲಿ ಕ್ಲಿಕ್‌ ಮಾಡಿ.

shivamogga-live-logo-with-120-by-650-pixel-size.webp

SHIVAMOGGA LIVE NEWS | SHIMOGA | 29 ಏಪ್ರಿಲ್ 2022

ಶಿವಮೊಗ್ಗ ಜಿಲ್ಲೆಯಲ್ಲಿ ಭದ್ರಾವತಿ ಕ್ಷೇತ್ರವನ್ನು ಸಹ ಗೆಲ್ಲಲಿದ್ದೇವೆ. ಅದಕ್ಕಾಗಿ ವಿಶೇಷ ಪ್ರಯತ್ನ ನಡೆಸುತ್ತಿದ್ದೇವೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದರು.

ಶಿವಮೊಗ್ಗ ಹೆಲಿಪ್ಯಾಡ್’ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಯಡಿಯೂರಪ್ಪ ಅವರು, ಮುಂದಿನ ಚುನಾವಣೆಯಲ್ಲಿ 150 ಕ್ಷೇತ್ರ ಗೆಲ್ಲುವ ಗುರಿ ಹೊಂದಿದ್ದೇವೆ. ಶಿವಮೊಗ್ಗ ಜಿಲ್ಲೆಯ ಭದ್ರಾವತಿ ಕ್ಷೇತ್ರವನ್ನು ಈ ಭಾರಿ ಗೆಲ್ಲುತ್ತೇವೆ. ಅದಕ್ಕಾಗಿ ವಿಶೇಷ ಪ್ರಯತ್ನ ನಡೆಸುತ್ತಿದ್ದೇವೆ ಎಂದರು.

ರಾಜ್ಯ ಪ್ರವಾಸ ಪ್ರಾರಂಭವಾಗುತ್ತಿದೆ

ವಿಧಾನಸಭೆ ಚುನಾವಣೆಯಲ್ಲಿ 150 ಸ್ಥಾನ ಗೆಲುವು ಸಾಧಿಸುವ ಗುರಿ ಹೊಂದಿದ್ದೇವೆ. ಇದಕ್ಕಾಗಿ ಪ್ರವಾಸ ಪ್ರಾರಂಭವಾಗುತ್ತಿದೆ. ವಾರಕ್ಕೊಂದು ಜಿಲ್ಲೆಗೆ ಹೋಗುತ್ತೇವೆ. ಪಕ್ಷದ ಸ್ಥಿತಿಗತಿ ತಿಳಿದುಕೊಂಡು, ಸಂಘಟನೆ ಬಲಪಡಿಸುತ್ತೇವೆ. ಪ್ರಧಾನಿ ನರೇಂದ್ರ ಮೋದಿ ಅವರ ಸರ್ಕಾರ ಪ್ರತಿ ಕುಟುಂಬಕ್ಕೆ ಒಂದಿಲ್ಲೊಂದು ಸೌಲಭ್ಯ ಒದಗಿಸಿದೆ. ಅದರ ಆಧಾರದ ಮೇಲೆ ಚುನಾವಣೆಗೆ ಹೋಗುತ್ತೇವೆ ಎಂದು ಯಡಿಯೂರಪ್ಪ ಅವರು ತಿಳಿಸಿದರು.

ಸಂಪುಟ ವಿಸ್ತರಣೆ ಚರ್ಚೆ

ಇನ್ನು, ಸಂಪುಟ ವಿಸ್ತರಣೆ ಕುರಿತ ಪ್ರಶ್ನೆಗೆ, ನಾಳೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ದೆಹಲಿ ಪ್ರವಾಸ ಕೈಗೊಳ್ಳಲಿದ್ದಾರೆ. ಮೇ 2ರಂದು ಅಮಿತ್ ಷಾ ಅವರು ರಾಜ್ಯ ಪ್ರವಾಸ ಕೈಗೊಂಡಿದ್ದಾರೆ. ಆ ಸಂದರ್ಭ ಚರ್ಚೆ ನಡೆಸಲಿದ್ದಾರೆ ಎಂದು ತಿಳಿಸಿದರು.

ವಿಮಾನ ನಿಲ್ದಾಣದ ಹೆಸರು

ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ತಮ್ಮ ಹೆಸರು ಇಡುವುದು ಸೂಕ್ತವಲ್ಲ. ಸ್ವಾತಂತ್ರ್ಯ ಹೋರಾಟಗಾರರು, ಪ್ರಮುಖರ ಹೆಸರು ಇಡುವುದು ಒಳ್ಳೆಯದು ಎಂದು ಯಡಿಯೂರಪ್ಪ ಅವರು ತಿಳಿಸಿದರು.

ಇದನ್ನೂ ಓದಿ – ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಯಾವೆಲ್ಲ ಹೆಸರು ಇಡುವಂತೆ ಒತ್ತಾಯವಿದೆ? ಇಲ್ಲಿದೆ ಲಿಸ್ಟ್

Shimoga Nanjappa Hospital

 

ಶಿವಮೊಗ್ಗದಲ್ಲಿ ಏನೇನಾಯ್ತು? ಇಲ್ಲಿವೆ ಸುದ್ದಿಗಳು. ಕೆಳಗಿರುವ ಹೆಡ್‌ಲೈನ್‌ ಮೇಲೆ ಕ್ಲಿಕ್‌ ಮಾಡಿ, ಸುದ್ದಿ ಓದಿ.

Number 1 News Website in shimoga - Shivamogga Live

 

Leave a Comment