SHIVAMOGGA LIVE | 18 JUNE 2023
SHIMOGA : ಈ ಸರ್ಕಾರ ಬಹಳ ಕಾಲ ಉಳಿಯುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಭವಿಷ್ಯ ನುಡಿದಿದ್ದಾರೆ. ಬಿಜೆಪಿ ಕಾರ್ಯಕರ್ತರು (BJP Workers) ಶಕ್ತಿ ಮೀರಿ ಹೋರಾಟ ಮಾಡಿ, ಪಕ್ಷವನ್ನು ಪುನಃ ಅಧಿಕಾರಕ್ಕೆ ತರಬೇಕಿದೆ ಎಂದು ಸಲಹೆ ನೀಡಿದರು.
ಶಿವಮೊಗ್ಗದ ಪಿಇಎಸ್ ಕಾಲೇಜು ಆವರಣದ ಪ್ರೇರಣಾ ಸಭಾಂಗಣದಲ್ಲಿ ನಡೆದ ಮೋದಿ ಸರ್ಕಾರದ 9 ವರ್ಷದ ಸಾಧನೆ ಸಾರ್ವಜನಿಕ ಸಭೆ ಉದ್ಘಾಟಿಸಿ ಯಡಿಯೂರಪ್ಪ ಮಾತನಾಡಿದರು.
ಮಾಜಿ ಸಿಎಂ ಹೇಳಿದ 3 ಪ್ರಮುಖಾಂಶ
ಸುಳ್ಳು ಆಶ್ವಾಸನೆ ನಂಬಿ ಜನರು ಮೋಸ ಹೋಗಿದ್ದಾರೆ. ವಾಸ್ತವ ಸ್ಥಿತಿ ಮನವರಿಕೆ ಆಗಲಿದೆ. ಕೊಟ್ಟ ಭರವಸೆಗಳನ್ನು ಈಡೇರಿಸುವ ಶಕ್ತಿ ಕಾಂಗ್ರೆಸ್ ಪಕ್ಷಕ್ಕೆ ಇಲ್ಲ. ಭರವಸೆಗಳನ್ನು ಈಡೇರಿಸುವ ಬದಲು ಗೊಂದಲ ಸೃಷ್ಟಿ ಮಾಡುತ್ತಿದ್ದಾರೆ. ಆದ್ದರಿಂದ ಈ ಸರ್ಕಾರ ಹೆಚ್ಚು ದಿನ ಉಳಿಯುವುದಿಲ್ಲ.
ತಾಲೂಕು ಪಂಚಾಯಿತಿ, ಜಿಲ್ಲಾ ಪಂಚಾಯಿತಿ ಸೇರಿ ಚುನಾವಣೆಗಳು ಬರುತ್ತಿವೆ. ಕಾರ್ಯಕರ್ತರು (BJP Workers) ದೃತಿಗೆಡುವುದು ಬೇಡ. ಶಾಸಕರು, ವಿಧಾನ ಪರಿಷತ್ ಸದಸ್ಯರು ಸರ್ಕಾರದ ಹುಳುಕನ್ನು ಹೊರ ತೆಗೆಯಬೇಕು. ಆಯಾ ಕ್ಷೇತ್ರಗಳಲ್ಲಿ ಪಕ್ಷ ಬಲಪಡಿಸೋಣ. ನಮ್ಮ ಸರ್ಕಾರದ ಅವಧಿಯಲ್ಲಿನ ಭಾಗ್ಯಲಕ್ಷ್ಮಿ, ಪಂಪ್ಸೆಟ್ಗೆ ಉಚಿತ ವಿದ್ಯುತ್ ಸೇರಿದಂತೆ ಎಲ್ಲ ಯೋಜನೆಗಳ ಕುರಿತು ಜನರಿಗೆ ಮನವರಿಕೆ ಮಾಡೋಣ. ಅಭಿವೃದ್ಧಿ ಕಾರ್ಯಗಳನ್ನು ಸ್ಮರಿಸೋಣ. ಮತ್ತೆ ಪಕ್ಷವನ್ನು ಅಧಿಕಾರಕ್ಕೆ ತರೋಣ.
ಇದನ್ನೂ ಓದಿ – ಶಿವಮೊಗ್ಗದಲ್ಲಿ ಸಾವಿರ ಸಾವಿರ ವಿದ್ಯಾರ್ಥಿಗಳಿಂದ ಅಮೃತ ನಡಿಗೆ, ಹೇಗಿತ್ತು? ನಡಿಗೆಗೆ ಕಾರಣವೇನು?
ಪ್ರಧಾನಿ ನರೇಂದ್ರ ಮೋದಿ ಅವರು ಇರಬೇಕಾದರೆ ಇವರೆಲ್ಲ ಯಾವ ಲೆಕ್ಕ. ಮೋದಿ ನೇತೃತ್ವ ಇರುವ ತನಕ ನಮ್ಮನ್ನು ಯಾರು ಅಲುಗಾಡಿಸಲು ಸಾಧ್ಯವಿಲ್ಲ. ಕಾರ್ಯಕರ್ತರು ಕರೆದಲ್ಲಿಗೆ ಬಂದು ಜನರೊಂದಿಗೆ ಚರ್ಚೆ ಮಾಡುತ್ತೇನೆ. ಸರ್ಕಾರದ ವೈಫಲ್ಯಗಳನ್ನು ಮನವರಿಕೆ ಮಾಡುತ್ತೇನೆ.
ಹೆಚ್ಚಿನ ಮಾಹಿತಿಗೆ ಇಲ್ಲಿ CLICK ಮಾಡಿ