ಶಿವಮೊಗ್ಗದಲ್ಲಿ ಪ್ರಧಾನಿ ವಿರುದ್ಧ ಆಕ್ರೋಶ, ಮೋದಿ ರಾಜೀನಾಮೆಗೆ ಆಗ್ರಹ, ಕಾರಣವೇನು?

ಶಿವಮೊಗ್ಗ: ಪ್ರಧಾನಿ ನರೇಂದ್ರ ಮೋದಿ (PM Modi) ಅವರು ದೇಶದ ಮಾನವನ್ನು ಹರಾಜು ಹಾಕುತ್ತಿದ್ದಾರೆ ಮತ್ತು ರೈತರ ಹಿತಾಸಕ್ತಿಯನ್ನು ಬಲಿ ಕೊಡುತ್ತಿದ್ದಾರೆ ಎಂದು ಆರೋಪಿಸಿ ನಗರ ಯುವ ಕಾಂಗ್ರೆಸ್‌ನ ಉತ್ತರ ಬ್ಲಾಕ್ ಸಮಿತಿಯ ವತಿಯಿಂದ ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಲಾಯಿತು.

ಶಿವಪ್ಪನಾಯಕ ಪ್ರತಿಮೆ ಮುಂಭಾಗ ಪ್ರತಿಭಟನೆ ನಡೆಸಿದ ಯುವ ಕಾಂಗ್ರೆಸ್‌ ಕಾರ್ಯಕರ್ತರು, ಬಿಜೆಪಿ ಮತ್ತು ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಘೋಷಣೆ ಕೂಗಿದರು.

ಇದನ್ನೂ ಓದಿ – ಶಿವಮೊಗ್ಗ ಮಾರಿಕಾಂಬಾ ಜಾತ್ರೆ, ವಾಹನಗಳ ಸಂಚಾರ ಮಾರ್ಗ ಬದಲಾವಣೆ, ಯಾವ್ಯಾವ ರಸ್ತೆ?

ಅಮೆರಿಕಾದ ಕೃಷಿ ಉತ್ಪನ್ನಗಳಿಗೆ ಭಾರತದ ಮಾರುಕಟ್ಟೆಯಲ್ಲಿ ಯಾವುದೇ ಸುಂಕವಿಲ್ಲದೆ ಮುಕ್ತ ಅವಕಾಶ ನೀಡಲಾಗಿದೆ. ಈ ಮೂಲಕ ದೇಶದ ರೈತರ ಬದುಕನ್ನು ಪ್ರಧಾನಿ ಮೋದಿ ಬೀದಿಗೆ ತಳ್ಳುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

Youth-Congress-Protest-against-PM-Narendra-Modi.

ವಿದೇಶಿ ಕಂಪನಿಗಳ ಹಿತಾಸಕ್ತಿ ಕಾಯಲು ಹೋಗಿ ನಮ್ಮ ದೇಶದ ಬಡ ರೈತರನ್ನು ಸಂಕಷ್ಟಕ್ಕೆ ನೂಕುತ್ತಿರುವುದು ಅಕ್ಷಮ್ಯ. ಮೇಕ್ ಇನ್ ಇಂಡಿಯಾ ಎಂಬ ಘೋಷಣೆಗಳು ಕೇವಲ ಸುಳ್ಳು ಪ್ರಚಾರಕ್ಕೆ ಸೀಮಿತವಾಗಿದ್ದು, ವಾಸ್ತವದಲ್ಲಿ ದೇಶದ ಆರ್ಥಿಕತೆಯನ್ನು ಹದಗೆಡಿಸಲಾಗುತ್ತಿದೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.

ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಜೊತೆಗಿನ ಪ್ರಧಾನಿ ನರೇಂದ್ರ ಮೋದಿ ಒಪ್ಪಂದ ದೇಶಕ್ಕೆ ಮಾರಕವಾಗಿದೆ. ಟ್ರಂಪ್‌ ಜೊತೆಗೆ ರಾಜಿ ಮಾಡಿಕೊಂಡು ಅವರು ಹೇಳಿದಂತೆ ಕೇಳುತ್ತಿದ್ದಾರೆ. ದೇಶದ ಗೌರವವನ್ನು ಹರಾಜು ಹಾಕುತ್ತಿದ್ದಾರೆ. ದೇಶದ ಒಳಿತಿಗಾಗಿ ನರೇಂದ್ರ ಮೋದಿ ಅವರು ರಾಜೀನಾಮೆ ನೀಡಬೇಕು.ಆರ್.ಪ್ರಸನ್ನ ಕುಮಾರ್‌, ಕಾಂಗ್ರೆಸ್‌ ಜಿಲ್ಲಾಧ್ಯಕ್ಷ
c2

ಪ್ರತಿಭಟನೆಯಲ್ಲಿ ಮಹಾನಗರ ಪಾಲಿಕೆ ಮಾಜಿ ಸದಸ್ಯ ರಮೇಶ್‌ ಹೆಗ್ಡೆ, ಕರ್ನಾಟಕ ರಾಜ್ಯ ಜವಳಿ ಮತ್ತು ಕೈಮಗ್ಗ ನಿಗಮದ ಅಧ್ಯಕ್ಷ ಚೇತನ್‌ ಕೆ.ಗೌಡ, ಮಧು ಸೂದನ್‌, ಪರ್ವೇಜ್.ಜಿ, ಸುದರ್ಶನ್, ಮುಹಮ್ಮದ್ ಗೌಸ್ ಸೇರಿದಂತೆ ಹಲವಾರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

c1
ನಿತಿನ್ ಆರ್‌.ಕೈದೊಟ್ಲು
ನಿತಿನ್ ಆರ್‌.ಕೈದೊಟ್ಲು

Published : February 21, 2026 at 6:00 PM IST

JNN College of Engineering Admissions started

© ಶಿವಮೊಗ್ಗ ಲೈವ್‌ : ಫೆಬ್ರವರಿ 21, 2026

Leave a Comment