ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ
ಉತ್ತರಖಂಡದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಭಾಗವಹಿಸಿದ್ದ ಸಭೆ ನಡೆದ ಸ್ಥಳವನ್ನು ಬಲಪಂಥೀಯ ಸಂಘಟನೆಗಳು ಶುದ್ಧೀಕರಣ ಮಾಡಿರುವ ಘಟನೆಗೆ ಯುವ ಕಾಂಗ್ರೆಸ್ ಗ್ರಾಮಾಂತರ ಘಟಕ ಆಕ್ರೋಶ ವ್ಯಕ್ತಪಡಿಸಿದೆ. ಸುದ್ದಿಯ ಮುಂದಿನ 3 ಪ್ಯಾರಾಗಳು ಕೆಳಗಿವೆ.
ಶಿವಮೊಗ್ಗ ಮಹಾನಗರ ಪಾಲಿಕೆ ಆವರಣದ ಡಾ.ಬಿ.ಆರ್. ಅಂಬೇಡ್ಕರ್ ಪ್ರತಿಮೆ ಎದುರು ಶಿವಮೊಗ್ಗ ಗ್ರಾಮಾಂತರ ಯುವ ಕಾಂಗ್ರೆಸ್ ವತಿಯಿಂದ ಪ್ರತಿಭಟನೆ ನಡೆಸಲಾಯಿತು. ಸ್ಥಳೀಯ ಆಡಳಿತದ ಮೂಲಕ ರಾಷ್ಟ್ರಪತಿಗೆ ಮನವಿ ಸಲ್ಲಿಸಲಾಯಿತು. ಸ್ಥಳ ಶುದ್ಧೀಕರಣದ ಹೆಸರಿನಲ್ಲಿ ದಲಿತ ಸಮುದಾಯದ ಭಾವನೆಗಳಿಗೆ ಧಕ್ಕೆ ತರಲಾಗಿದೆ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.

ಸಂವಿಧಾನ ವಿರೋಧಿ ಕೃತ್ಯ
ಮಲ್ಲಿಕಾರ್ಜುನ ಖರ್ಗೆ ಅವರು ಭಾಗವಹಿಸಿದ್ದ ಕಾರ್ಯಕ್ರಮದ ಸ್ಥಳದ ಶುದ್ಧೀಕರಣ ಮಾಡಿರುವುದು ಅಕ್ಷಮ್ಯ. ದೇಶಕ್ಕೆ ಸ್ವಾತಂತ್ರ್ಯ ಬಂದು 80 ವರ್ಷವಾದರೂ ಜಾತಿಯತೆ ಹಾಗೂ ಶೋಷಣೆ ಮುಂದುವರಿದಿದೆ. ಸಂವಿಧಾನ ವಿರೋಧಿ ಹಾಗೂ ಕೋಮುವಾದಿ ಶಕ್ತಿಗಳ ವಿರುದ್ಧ ತಕ್ಷಣ ಕಾನೂನು ಕ್ರಮ ಜರುಗಿಸಬೇಕು ಎಂದು ಆಗ್ರಹಿಸಲಾಯಿತು.
ಪ್ರತಿಭಟನೆಯಲ್ಲಿ ಪ್ರಮುಖರಾದ ಮಧುಸೂದನ್, ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹರ್ಷಿತ್ ಗೌಡ, ಗ್ರಾಮಾಂತರ ಅಧ್ಯಕ್ಷ ಪ್ರವೀಣ್, ಅಬ್ದುಲ್, ಶಿವು, ಆಕಾಶ್, ಸಚಿನ್ ಹಾಗೂ ಇತರರು ಉಪಸ್ಥಿತರಿದ್ದರು.