ಶಿವಮೊಗ್ಗದಲ್ಲಿ ಸಂಸದ ರಾಘವೇಂದ್ರ ಮನೆಗೆ ಮುತ್ತಿಗೆ ಯತ್ನ, ಪ್ರತಿಭಟನಾಕಾರರು ಪೊಲೀಸ್‌ ವಶಕ್ಕೆ

ಶಿವಮೊಗ್ಗ: ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆ (Question Paper Leak) ಪ್ರಕರಣ ಖಂಡಿಸಿ ಶಿವಮೊಗ್ಗ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿ (District Youth Congress Committee) ವತಿಯಿಂದ ಪ್ರತಿಭಟನೆ ನಡೆಸಲಾಯಿತು. ವಿನೋಬನಗರದಲ್ಲಿರುವ ಸಂಸದ ಬಿ.ವೈ. ರಾಘವೇಂದ್ರ ಅವರ ನಿವಾಸಕ್ಕೆ ಮುತ್ತಿಗೆ ಹಾಕಲು ಯತ್ನಿಸಿದರು.

ಪ್ರತಿಭಟನಾಕಾರರ ಆರೋಪಗಳು ಏನು?

ಮೇ 3ರಂದು ನಡೆದ ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ. ಪರೀಕ್ಷಾ ವ್ಯವಸ್ಥೆಯಲ್ಲಿ ಪಾರದರ್ಶಕತೆ (Transparency) ಕಾಪಾಡುವಲ್ಲಿ ಕೇಂದ್ರದ ಬಿಜೆಪಿ ಸರ್ಕಾರ ವಿಫಲವಾಗಿದೆ ಎಂದು ಯುವ ಕಾಂಗ್ರೆಸ್‌ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದರು.

Youth-congress-protest-in-Shimoga-near-by-BY-Raghavendra-house

  • 2024ರಲ್ಲಿಯೂ NEET ಯುಜಿ ಪರೀಕ್ಷೆ ಪ್ರಶ್ನೆ ಪತ್ರಿಕೆ ವಿವಾದ ಉಂಟಾಗಿತ್ತು. ಈ ವಿಷಯವನ್ನು ಕೇಂದ್ರ ಸರ್ಕಾರ ಮುಚ್ಚಿ ಹಾಕಿತ್ತು.
  • ಈಗ ಪ್ರಶ್ನೆ ಪತ್ರಿಕೆ ಬಯಲಾದ ವಿಚಾರ ಬಹಿಂಗವಾದ ತಕ್ಷಣ ಕೇಂದ್ರ ಸರ್ಕಾರ ಪರೀಕ್ಷೆಯನ್ನು ರದ್ದು (Cancel) ಮಾಡಿದೆ.
  • ಗ್ರಾಮೀಣ ಭಾಗದ ಬಡ ಮತ್ತು ಮಧ್ಯಮ ವರ್ಗದ ಲಕ್ಷಾಂತರ ವಿದ್ಯಾರ್ಥಿಗಳು ವೈದ್ಯಕೀಯ (Medical) ಕ್ಷೇತ್ರದಲ್ಲಿ ಸೇವೆ ಸಲ್ಲಿಸುವ ಕನಸು ಕಂಡು ಕಷ್ಟಪಟ್ಟು ಅಧ್ಯಯನ ನಡೆಸುತ್ತಾರೆ. ಆದರೆ ಇಂತಹ ಅಕ್ರಮಗಳಿಂದ ಅರ್ಹ ವಿದ್ಯಾರ್ಥಿಗಳಿಗೆ ಅನ್ಯಾಯವಾಗುತ್ತಿದೆ.
  • ವೈದ್ಯಕೀಯ ಶಿಕ್ಷಣ ಪ್ರವೇಶದಲ್ಲಿ ಪಾರದರ್ಶಕತೆ, ಸಮಾನ ಅವಕಾಶ ಹಾಗೂ ಮೆರಿಟ್ ಆಧಾರಿತ ಪ್ರವೇಶ‌ ಕಲ್ಪಿಸಲು 2012ರಲ್ಲಿ ಯುಪಿಎ ಸರ್ಕಾರ NEET ಪರೀಕ್ಷೆಯನ್ನು ಜಾರಿಗೆ ತಂದಿತು.

NEET ಪರೀಕ್ಷೆ ವ್ಯವಸ್ಥೆಯನ್ನು ಬಿಜೆಪಿ ಸರ್ಕಾರ ಹಾಳುಮಾಡುತ್ತಿದೆ. ರಾಷ್ಟ್ರದ ಪರೀಕ್ಷೆಯ ಭದ್ರತೆ ಮತ್ತು ವಿಶ್ವಾಸಾರ್ಹತೆ ಕಪಾಡುವಲ್ಲಿ ವಿಫಲವಾದ ಕೇಂದ್ರ ಸರ್ಕಾರವನ್ನು ವಜಾಗೊಳಿಸಬೇಕು ಎಂದು ರಾಷ್ಟ್ರಪತಿಗೆ ಮನವಿ ತಲುಪಿಸಲಾಯಿತು.

ಸಂಸದರ ಮನೆಗೆ ಮುತ್ತಿಗೆ ಯತ್ನ

NEET ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಯುವ ಕಾಂಗ್ರೆಸ್‌ ಕಾರ್ಯಕರ್ತರು ವಿನೋಬನಗರದಲ್ಲಿರುವ ಸಂಸದ ಬಿ.ವೈ.ರಾಘವೇಂದ್ರ ಅವರ ಮನೆಗೆ ಮುತ್ತಿಗೆ ಹಾಕಲು ಯತ್ನಿಸಿತು. ಪೊಲೀಸ್‌ ಚೌಕಿ ಸರ್ಕಲ್‌ನಲ್ಲಿ ಯುವ ಕಾಂಗ್ರೆಸ್‌ ಕಾರ್ಯಕರು ಪ್ರತಿಭಟನೆ ನಡೆಸಿದರು.

ಮೆರವಣಿಗೆ ಮೂಲಕ ಸಂಸದರ ಮನೆಗೆ ಬಳಿ ತೆರಳಲು ಯತ್ನಿಸಿದರು. ಈ ವೇಳೆ ಪೊಲೀಸರು ಪ್ರತಿಭಟನಾಕಾರರನ್ನು ತಡೆದರು. ನೂಕು ನುಗ್ಗಲು ಉಂಟಾಯಿತು. ನಂತರ ಪೊಲೀಸರು ಯುವ ಕಾಂಗ್ರೆಸ್‌ ಕಾರ್ಯಕರ್ತರನ್ನು ವಶಕ್ಕೆ ಪಡೆದರು.

ಪ್ರತಿಭಟನೆಯಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಪ್ರಸನ್ನ ಕುಮಾರ್, ಜವಳಿ ನಿಗಮದ ಅಧ್ಯಕ್ಷ ಚೇತನ್ ಗೌಡ, ಯುವ ಮುಖಂಡ ಮಧುಸೂದನ್, ಮಹಾನಗರ ಪಾಲಿಕೆ ಮಾಜಿ ಸದಸ್ಯೆ ಯಮನಾ ರಂಗೇಗೌಡ, ಯುವ ಕಾಂಗ್ರೆಸ್‌ ಜಿಲ್ಲಾಧ್ಯಕ್ಷ ಹರ್ಷಿತ್ ಗೌಡ, ನಗರಾಧ್ಯಕ್ಷ ಚರಣ್, ಗ್ರಾಮಾಂತರ ಅಧ್ಯಕ್ಷ ಪ್ರವೀಣ್, ಅಬ್ದುಲ್ ಸತ್ತಾರ್, ಮಲವಗೊಪ್ಪ  ಶಿವು, ಆಕಾಶ್, ಗಿರೀಶ್, ಸಕ್ಲೇನ್,ಅಶೋಕ್, ರವಿ, ವಿಷ್ಣು, ಬಾಬು, ತೌಫಿಕ್, ಮನೋಜ್, ಅನಂತ್ ಸೇರಿದ ಹಲವರು ಇದ್ದರು.

ಚಿತ್ರದ ವಿವರಣೆ
Shaki Toyota, Shivamogga
ನಿತಿನ್ ಆರ್‌.ಕೈದೊಟ್ಲು
ನಿತಿನ್ ಆರ್‌.ಕೈದೊಟ್ಲು

Published : May 13, 2026 at 1:11 PM IST

JNN College of Engineering Admissions started

© ಶಿವಮೊಗ್ಗ ಲೈವ್‌ : ಮೇ 13, 2026