ಪರಿಹಾರ ನೀಡಲು ನೋಟ್ ಪ್ರಿಂಟ್ ಮಾಡುವ ಮೆಷಿನ್ ಇಲ್ಲ, ಮಿನಿಸ್ಟರ್ ಹೇಳಿಕೆಗೆ ಶಿವಮೊಗ್ಗದಲ್ಲಿ ತಿರುಗೇಟು

ಶಿವಮೊಗ್ಗ ಲೈವ್.ಕಾಂ | SHIMOGA NEWS | 11 MAY 2021

ಪರಿಹಾರ ಕೊಡಲು ನಾವೇನು ನೋಟ್ ಪ್ರಿಂಟ್ ಮಾಡುವ ಮೆಷಿನ್ ಇಟ್ಟುಕೊಂಡಿದ್ದೀವಾ ಎಂಬ ಸಚಿವ ಕೆ.ಎಸ್.ಈಶ್ವರಪ್ಪ  ಅವರ ಹೇಳಿಕೆಗೆ ಶಿವಮೊಗ್ಗ ಯುವ ಕಾಂಗ್ರೆಸ್ ತಿರುಗೇಟು ನೀಡಿದೆ.

ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹೆಚ್.ಪಿ.ಗಿರೀಶ್‍ , ಈಶ್ವರಪ್ಪ ಅವರದ್ದು ಬಾಲಿಶ ಹೇಳಿಕೆ. ಆದರೂ ಅವರು ಹೇಳಿದ್ದರಲ್ಲಿ ಸತ್ಯವಿದೆ. ಅವರ ಬಳಿ ನೋಟ್ ಪ್ರಿಂಟ್ ಮಾಡುವ ಮೆಷಿನ್ ಇಲ್ಲ. ಆದರೆ ನೋಟ್ ಎಣಿಸುವ ಮೆಷಿನ್‍ ಮಾತ್ರವಿದೆ ಎಂದು ಆರೋಪಿಸಿದ್ದಾರೆ.

ಜನರು ಕಟ್ಟಿದ ತೆರಿಗೆ ಹಣದಲ್ಲಿ ಜನರಿಗೆ ಪರಿಹಾರ ನೀಡುವಂತೆ ವಿರೋಧ ಪಕ್ಷದವರು ಕೇಳುವುದು ತಪ್ಪಾ? ಜನ ಸಂಕಷ್ಟದಲ್ಲಿರುವಾಗ ಅವೈಜ್ಞಾನಿಕ ಲಾಕ್‍ ಡೌನ್ ಮಾಡಿಕೊಂಡು ಜನರ ಜೀವನದ ಜೊತೆಗೆ ಚೆಲ್ಲಾಟವಾಡುತ್ತಿರುವುದು ಸರಿಯಲ್ಲ.

ಈಶ್ವರಪ್ಪ ಅವರು ಬಾಲಿಶ ಹೇಳಿಕೆ ನೀಡುವುದನ್ನು ಗಮನಿಸಿದರೆ ಇವರು ಅಧಿಕಾರ ನಡೆಸಲು ಅಸಮರ್ಥರು ಎಂದನಿಸುತ್ತದೆ. ಆದ್ದರಿಂದ ಸಚಿವ ಈಶ್ವರಪ್ಪ ಅವರು ರಾಜೀನಾಮೆ ನೀಡಿ, ಬಾಯಿಗೆ ಬೀಗ ಹಾಕಿಕೊಳ್ಳಬೇಕು ಎಂದು ಗಿರೀಶ್ ಟೀಕಿಸಿದ್ದಾರೆ.

ಸಚಿವ ಈಶ್ವರಪ್ಪ ಹೇಳಿದ್ದೇನು? ಇಲ್ಲಿದೆ ವಿಡಿಯೋ ರಿಪೋರ್ಟ್

ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494

ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200

ಶಿವಮೊಗ್ಗ ಲೈವ್ ಮೇಲ್ shivamoggalive@gmail.com

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ವಾಟ್ಸಪ್‌ ಮಾಡಬಹುದು. ಉಚಿತವಾಗಿ ಪ್ರಕಟಿಸುತ್ತೇವೆ. ವಾಟ್ಸಪ್‌ ನಂಬರ್: 7411700200
Shivamogga-Live-Number-1-Promotion
Shivamogga-Live-Number-1-Promotion

Leave a Comment