ಶಿವಮೊಗ್ಗದ ಬಿದಿರೆಯಲ್ಲಿ ಸೈಟ್ ಮಾರಾಟಕ್ಕಿದೆ. ಸಾಯಿ ಬಾಬಾ ದೇಗುಲ, ರಾಷ್ಟ್ರೀಯ ಹೆದ್ದಾರಿಗೆ ಸಮೀಪದಲ್ಲಿ 30*50 ಅಳತೆಯ ಸೈಟು ಮಾರಾಟಕ್ಕಿದೆ. ಸಂಪರ್ಕಿಸಿ: 8073449559ಸೈಟ್ ಮಾರಾಟಕ್ಕಿದೆ
ಶಿವಮೊಗ್ಗ : ಬಿಜೆಪಿಯ ಜನಾಕ್ರೋಶ ಯಾತ್ರೆಗೆ ಮುತ್ತಿಗೆ ಹಾಕಲು ಯತ್ನಿಸಿದ 50ಕ್ಕೂ ಹೆಚ್ಚು ಯುವ ಕಾಂಗ್ರೆಸ್ (congress) ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಕಾಂಗ್ರೆಸ್ ಕಚೇರಿಯಿಂದ ಗೋಪಿ ವೃತ್ತದ ಕಡೆಗೆ ಮೆರವಣಿಗೆ ಹೊರಟಿದ್ದ ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ವಶಕ್ಕೆ ಪಡೆಯಲಾಗಿದೆ.
ಇದನ್ನೂ ಓದಿ » ಗೋಪಿ ಸರ್ಕಲ್‌ನಲ್ಲಿ ಮಳೆಯಲ್ಲೇ ವಿಜಯೇಂದ್ರ ಭಾಷಣ, ಭಾರಿ ಗಾಳಿಗೆ ನಡುಗಿದ ವೇದಿಕೆ
ಕೇಂದ್ರ ಸರ್ಕಾರದ ನೀತಿಗಳಿಂದ ಅಗತ್ಯ ವಸ್ತುಗಳ ಬೆಲೆ ಏರಿಕೆಯಾಗಿದೆ. ನಿರುದ್ಯೋಗ ಸಮಸ್ಯೆ ತಾಂಡವವಾಡುತ್ತಿದೆ. ಕೇಂದ್ರ ಸರ್ಕಾರದ ತಪ್ಪುಗಳನ್ನು ಮರೆಮಾಚಲು ಬಿಜೆಪಿ ಜನಾಕ್ರೋಶ ಯಾತ್ರೆಯ ನಾಟಕವಾಡುತ್ತಿದೆ ಎಂದು ಆರೋಪಿಸಿ ಯುವ ಕಾಂಗ್ರೆಸ್ ಕಾರ್ಯಕರ್ತರು, ಜನಾಕ್ರೋಶ ಯಾತ್ರೆಗೆ ಮುತ್ತಿಗೆ ಹಾಕಲು ಮುಂದಾದರು.
ಡೀಸೆಲ್, ಅಡುಗೆ ಅನಿಲ ಬೆಲೆ ಏರಿಕೆ ಮಾಡಿ ಜನಸಾಮಾನ್ಯರ ಜೀವನದ ಮೇಲೆ ಗಧಾಪ್ರಹಾರ ಮಾಡುತ್ತಿರುವ ಬಿಜೆಪಿಗೆ ಜನಾಕ್ರೋಶ ಯಾತ್ರೆ ಮಾಡುವ, ರಾಜ್ಯ ಕಾಂಗ್ರೆಸ್ ಸರ್ಕಾರವನ್ನು ಟೀಕಿಸುವ ನೈತಿಕತೆ ಇಲ್ಲ. ಬಿಜೆಪಿಯ ಜನಾಕ್ರೋಶ ಯಾತ್ರೆಯನ್ನು ಶಿವಮೊಗ್ಗ ಜಿಲ್ಲಾ ಯುವ ಕಾಂಗ್ರೆಸ್ ಖಂಡಿಸುತ್ತದೆ.
– ಹರ್ಷಿತ್ ಗೌಡ, ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷ

ಬಾಲರಾಜ ಅರಸ್ ರಸ್ತೆಯಲ್ಲಿ ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ಅಡ್ಡಗಟ್ಟಿದ ಪೊಲೀಸರು, ಎಲ್ಲರವನ್ನು ವಶಕ್ಕೆ ಪಡೆದರು.
ಯುವ ಕಾಂಗ್ರೆಸ್ ವಿಧಾನಸಭೆ ಅಧ್ಯಕ್ಷ ಚರಣ್, ಪ್ರವೀಣ್, ಸಾಕ್ಲಿನ್, ಗಿರೀಶ್, ಪ್ರಧಾನ ಕಾರ್ಯದರ್ಶಿ ಅಬ್ದುಲ್ ಸತ್ತಾರ್, ಆಕಾಶ್, ಯುವ ಮುಖಂಡರಾದ ಮಧುಸೂಧನ, ಅಕ್ಬರ್, ಎನ್ ಎಸ್ ಯು ಐ ಜಿಲ್ಲಾಧ್ಯಕ್ಷ ವಿಜಯ್, ಕಾರ್ಯಾಧ್ಯಕ್ಷ ರವಿ ಕಟಿಕೆರೆ, ಜೀವನ್, ಚಂದ್ರೋಜಿ ರಾವ್, ಕಾರ್ತಿಕ್ ಸೇರಿದಂತೆ ಹಲವರು ಇದ್ದರು.










