ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
ಶಿವಮೊಗ್ಗ ಲೈವ್.ಕಾಂ | SHIMOGA NEWS | 17 ಸೆಪ್ಟೆಂಬರ್ 2021
ಮತ್ತಷ್ಟು ಸುದ್ದಿ ಕೆಳಗಿದೆ ಸುಲಭ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ ಮೊಬೈಲ್ ನಂಬರ್ : 9972194422
ಘಟಿಕೋತ್ಸವದ ಗೌನ್ ತೊಟ್ಟು ಪತ್ರಿಕೆ, ಹಾಲು ಮಾರಾಟ ಮಾಡಿ ನಿರುದ್ಯೋಗ ದಿವಸ್ ಆಚರಣೆ ಮಾಡಲಾಯಿತು.
» ವಾಟ್ಸಪ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
» ಫೇಸ್ಬುಕ್ ಮೆಸೆಂಜರ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬವನ್ನು ಯುವ ಕಾಂಗ್ರೆಸ್ ಶಿವಮೊಗ್ಗ ದಕ್ಷಿಣ ಬ್ಲಾಕ್ ಕಾರ್ಯಕರ್ತರು ನಿರುದ್ಯೋಗ ದಿವಸ್ ಎಂದು ಆಚರಿಸುತ್ತಿದ್ದಾರೆ. ಶಿವಮೊಗ್ಗದ ಹೊಳೆ ಬಸ್ ನಿಲ್ದಾಣದಲ್ಲಿ ಪದವೀಧರರು ಪತ್ರಿಕೆ, ಹಾಲು ಮಾರಾಟ ಮಾಡುವ ಅಣಕು ಪ್ರದರ್ಶನ ಮಾಡಿದರು.
ಪ್ರತಿ ವರ್ಷ ಎರಡು ಕೋಟಿ ಉದ್ಯೋಗ ಸೃಷ್ಟಿಯ ಮಾಡುವುದಾಗಿ ಪ್ರಧಾನಿ ನರೇಂದ್ರ ಮೋದಿ ಭರವಸೆ ನೀಡಿದ್ದರು. ಕಳೆದ ಏಳು ವರ್ಷದಲ್ಲಿ ನಿರುದ್ಯೋಗದ ಪ್ರಮಾಣ ಹೆಚ್ಚಳವಾಗಿದೆ. ಆದ್ದರಿಂದ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದಂದು ನಿರುದ್ಯೋಗ ದಿವಸ್ ಆಚರಿಸಲಾಗುತ್ತಿದೆ ಎಂದು ಯುವ ಕಾಂಗ್ರೆಸ್ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದರು.
‘ಮೋದಿ ಹಠಾವೋ ಉದ್ಯೋಗ ಬಚಾವೋ’ ಘೋಷಣೆ ಕೂಗಿದ ಯುವ ಕಾಂಗ್ರೆಸ್ ಕಾರ್ಯಕರ್ತರು ಮೋದಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಸೂಡಾ ಮಾಜಿ ಅಧ್ಯಕ್ಷ ಎನ್.ರಮೇಶ್, ಮಹಾನಗರ ಪಾಲಿಕೆ ಸದಸ್ಯ ರಮೇಶ್ ಹೆಗ್ಡೆ, ಯಮುನಾ ರಂಗೇಗೌಡ, ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಮೊಹಮ್ಮದ್ ನಿಯಾಲ್, ಮುಜೀಬ್, ಫೈರೋಜ್, ಅಕ್ಬರ್ ಕಾಂಗ್ರೆಸ್ ಪಕ್ಷದ ಮುಖಂಡರಾದ ಚಿರಂಜೀವಿ ಬಾಬು, ಶಿವಾನಂದ್, ಕಿಸಾನ್ ಸೆಲ್ ಜಿಲ್ಲಾ ಕಾರ್ಯಾಧ್ಯಕ್ಷ ಗಿರೀಶ್, ಯುವ ಕಾಂಗ್ರೆಸ್ ಮುಖಂಡ ಮಧುಸೂದನ್, ದಕ್ಷಿಣ ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷ ವಿನಯ್, ಉತ್ತರ ಬ್ಲಾಕ್ ಯುವ ಕಾಂಗ್ರೆಸ್’ನ ಗಿರೀಶ್, ಸುರೇಶ್, ಪುರಲೆ ಮಂಜು. ಬಾಲಾಜಿ ಸೇರಿದಂತೆ ಹಲವರು ಇದ್ದರು.
(ಶಿವಮೊಗ್ಗ ಲೈವ್.ಕಾಂ ನಮ್ಮೂರ ನ್ಯೂಸ್ ವಿಭಾಗ – ನಿಮ್ಮೂರ ನ್ಯೂಸ್‍ಗೆ ನೀವೇ ವರದಿಗಾರರು. ನಿಮ್ಮೂರ ಪ್ರಮುಖ ಘಟನೆಗಳನ್ನು ನೀವೇ ವರದಿ ಮಾಡಬಹುದು. ಫೋಟೊ, ವಿಡಿಯೋ ಸಹಿತ ವರದಿಯನ್ನು ವಾಟ್ಸಪ್ ಅಥವಾ ಈ ಮೇಲ್ ಮಾಡಬಹುದು)
ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ ಮೂಲಕ ಸುದ್ದಿಗಾಗಿ 7411700200